ದಿನದ ಸುದ್ದಿ
ದಾವಣಗೆರೆ | ಒಟ್ಟು 195 ಜನ ಗುಣಮುಖ : 26 ಆ್ಯಕ್ಟೀವ್ ಕೇಸ್
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಸೋಮವಾರ 01 ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಒಬ್ಬರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ರೋಗಿ ಸಂಖ್ಯೆ 7208 90 ವರ್ಷದ ವೃದ್ದ ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಹೊಂದಿದ್ದಾರೆ. ರೋಗಿ ಸಂಖ್ಯೆ 4085 ಇವರು ಸಂಪೂರ್ಣ ಗುಣಮುಖರಾಗಿ ಇಂದು ಜಿಲ್ಲಾ ನಿಗದಿತ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 227 ಪ್ರಕರಣಗಳ ಪೈಕಿ 195 ಇದುವರೆಗೆ ಬಿಡುಗಡೆ ಹೊಂದಿದ್ದಾರೆ. 06 ಸಾವು ಸಂಭವಿಸಿದ್ದು, 26 ಸಕ್ರಿಯ ಪ್ರಕರಗಳು ಇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243