ದಿನದ ಸುದ್ದಿ
ದಾವಣಗೆರೆ | ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಪ್ರಯತ್ನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/corona_virus_covid19-suddidina.jpg&description=ದಾವಣಗೆರೆ | ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಪ್ರಯತ್ನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/corona_virus_covid19-suddidina.jpg&description=ದಾವಣಗೆರೆ | ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ಪ್ರಯತ್ನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸಲು ಮತ್ತು ರೋಗಿಗಳನ್ನು ಉಳಿಸಲು ಜಿಲ್ಲಾ ಕೋವಿಡ್ ಆಸ್ಪತ್ರೆ ಮತ್ತು ಜಿಲ್ಲಾಡಳಿತ ಸಕಲ ಪ್ರಯತ್ನ ಮಾಡುತ್ತಿದ್ದು, ಜನರೂ ಕೂಡ ಸಹಕರಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಎಸ್.ಆರ್.ಉಮಾಶಂಕರ್ ಹೇಳಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುಮಾರು 526 ಕೋವಿಡ್ ರೋಗಿಗಳನ್ನು ತಪಾಸಣೆ ಮಾಡಲು ಅಗತ್ಯವಿರುವಷ್ಟು ತಯಾರಿಯನ್ನು ಜಿಲ್ಲಾ ಕೋವಿಡ್ ಆಸ್ಪತ್ರೆ ಸೇರಿದಂತೆ ಇತರೆ ಆಸ್ಪತ್ರೆಗಳಲ್ಲಿ ಮಾಡಿಕೊಳ್ಳಲಾಗಿದೆ. ಒಂದು ತಿಂಗಳು ಜಿಲ್ಲೆಯಲ್ಲಿ ಯಾವುದೇ ಪ್ರಕರಣವಿಲ್ಲದೇ ಗ್ರೀನ್ ಝೋನ್‍ಗೆ ಬಂದಿದ್ದು ಆ ಸಮಯದಲ್ಲೂ ಹಲವಾರು ತಯಾರಿ ನಡೆಸಲಾಗಿದ್ದು ಅದು ಈಗ ಉಪಯೋಗಕ್ಕೆ ಬರುತ್ತಿದೆ ಎಂದರು.
ವ್ಯಾಪಕ ಆರೋಗ್ಯ ತಪಾಸಣೆ
ನಗರದ ಎರಡು ಮೆಡಿಕಲ್ ಕಾಲೇಜುಗಳು, ಖಾಸಗಿ ಆಸ್ಪತ್ರೆಯ ತಜ್ಞ ವೈದ್ಯರು, ಜಿಲ್ಲಾಸ್ಪತ್ರೆಯ ತಜ್ಞ ವೈದ್ಯರು ಸೇರಿದಂತೆ ಎಲ್ಲ ವೈದ್ಯರ ಸಹಕಾರ ಚೆನ್ನಾಗಿದೆ. ಜಾಲಿನಗರ, ಬಾಷಾನಗರ, ಇಮಾಮ್‍ನಗರ, ಎಸ್‍ಪಿಎಸ್ ನಗರ, ಬೇತೂರು ರಸ್ತೆ, ಕೆಟಿಜೆ ನಗರ ಮತ್ತು ಶಿವನಗರಗಳಲ್ಲಿ ಒಟ್ಟು 7 ಕಡೆಗಳಲ್ಲಿ ಕಂಟೈನ್‍ಮೆಂಟ್ ಝೋನ್ ಮಾಡಲಾಗಿದ್ದು, ನಿಯಮಾನುಸಾರ ಸೀಲ್‍ಡೌನ್ ಮಾಡಿ ಮನೆ ಮನೆಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ. ಹಾಗೂ ಈ ಪ್ರದೇಶಗಳನ್ನು ವ್ಯಾಪಕ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.
ಪರೀಕ್ಷೆಗೆ ಗಂಟಲುದ್ರವ ಮಾದರಿ
ಎಲ್ಲ ಪ್ರಾಥಮಿಕ ಮತ್ತು ದ್ವಿತೀಯ ಸೇರಿದಂತೆ ಕಂಟೈನ್‍ಮೆಂಟ್ ಝೋನ್‍ನಲ್ಲಿ ಬರುವ ಎಲ್ಲರ ಗಂಟಲುದ್ರವ ಮಾದರಿ ಪರೀಕ್ಷೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ದಿನಕ್ಕೆ 200 ಸ್ಯಾಂಪಲ್ ಕಳುಹಿಸುತ್ತಿದ್ದು ಇದನ್ನು 400 ರಿಂದ 500 ರವರೆಗೆ ಹೆಚ್ಚಿಸಲು ಸೂಚಿಸಿದ್ದೇನೆ. ತೀವ್ರ ಉಸಿರಾಟದ ತೊಂದರೆ ಮತ್ತು ಶೀತ ಜ್ವರದಂತಹ ಪ್ರಕರಣಗಳಲ್ಲಿ ಕಡ್ಡಾಯವಾಗಿ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಹಾಗೂ ಅಗತ್ಯ ವಸ್ತುಗಳನ್ನು ಸಾಗಿಸುವ ಲಾರಿಗಳ ಡ್ರೈವರ್, ಕ್ಲೀನರ್‍ಗಳ ತಪಾಸಣೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

