Connect with us

ದಿನದ ಸುದ್ದಿ

ದಾವಣಗೆರೆ | ವಿಕಲಚೇತನರಿಗೆ ಕೋವಿಡ್ 19 ಲಸಿಕೆ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಕೊರೊನಾ ವೈರಸ್ ಸೋಂಕು ವೇಗವಾಗಿ ಹರಡುತ್ತಿರುವ ಕಾರಣ ದಾವಣಗೆರೆ ನಗರದ 18 ರಿಂದ 45 ವರ್ಷ ಮತ್ತು 45 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ (ಮಾನಸಿಕ ಅಸ್ವಸ್ಥರನ್ನು ಒಳಗೊಂಡಂತೆ) ಕೋವಿಡ್ 19 ಲಸಿಕೆಯನ್ನು ಪಡೆಯಲು ಚಿಗಟೇರಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ಪ್ರತಿದಿನ 100 ಜನರಿಗೆ (ವಿಕಲಚೇತನರು & ಆರೈಕೆದಾರರು) ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2 ಗಂಟೆವರೆಗೆ ಲಸಿಕೆ ನೀಡಲಾಗುತ್ತಿದೆ.

ವಿಕಲಚೇತನರು ಸರತಿ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ಆದ್ಯತೆ ಮೇರೆಗೆ ನೇರವಾಗಿ ಲಸಿಕೆ ನೀಡಲಾಗುವುದು. ವೀಲ್‍ಚೇರ್ & ಮೂಲಭೂತ ವ್ಯವಸ್ಥೆ ಕಲ್ಪಿಸಲಾಗಿದೆ. ದಾವಣಗೆರೆ ನಗರದ ವಿಕಲಚೇತನರು ಈ ಆಸ್ಪತ್ರೆಗೆ ಬರುವಾಗ ಕಡ್ಡಾಯವಾಗಿ ಆಧಾರ ಕಾರ್ಡ್ ಮತ್ತು ವಿಕಲಚೇತನರ ಗುರುತಿನ ಚೀಟಿ ಅಥವಾ ಯು.ಡಿ.ಐ.ಡಿ. ಕಾರ್ಡ್ ದಾಖಲೆಗಳನ್ನು ತೆಗೆದುಕೊಂಡು ಬರತಕ್ಕದ್ದು.

ಇದನ್ನೂ ಓದಿ | ರಾಜ್ಯ ಸರ್ಕಾರ ಆದೇಶ | ಕೊರೋನಾದಿಂದ ಸತ್ತವರ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಿ ; ಅಸ್ಪತ್ರೆ ಬಾಕಿ ಬಿಲ್ ಕಟ್ಟುವಂತೆ ಒತ್ತಾಯಿಸ ಬೇಡಿ, ಇಲ್ಲದಿದ್ದರೆ ಅಸ್ಪತ್ರೆ ನೋಂದಣಿ ರದ್ದು..!

ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆಯನ್ನು ಪಡೆಯಲು ಸಾಧ್ಯವಾಗದವರು (ಬೆಡ್‍ರಿಡನ್) ವಾಹನದ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ದಾವಣಗೆರೆ ದೂ.ಸಂ: 08192-263936 ಅಥವಾ ವಿಕಲಚೇತನರ ಸಲಹಾ ಕೇಂದ್ರ ದೂ.ಸಂ: 08192-263939 ಗೆ ಕರೆ ಮಾಡಿ ವಿಳಾಸ, ಮೊಬೈಲ್ ಸಂಖ್ಯೆ & ಇತರೆ ಮಾಹಿತಿ ನೀಡಿ ನೋಂದಣಿ ಮಾಡಿಕೊಳ್ಳಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಜಿ.ಎಸ್.ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗಳಿಗಾಗಿ ಹೊಸ ಅರ್ಜಿಗಳನ್ನು ಏಪ್ರಿಲ್ 1 ರಿಂದ ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ : ಅವಧಿ ವಿಸ್ತರಣೆ

Published

on

ಸುದ್ದಿದಿನ ಡೆಸ್ಕ್ : ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವ ಗಡುವನ್ನು ಮತ್ತೆ ಮೂರು ತಿಂಗಳ ಕಾಲ ವಿಸ್ತರಣೆ ಮಾಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್‌ಗಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ಅವರು, ಕಾಂಗ್ರೆಸ್‌ನ ಮಾದೇಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಇದುವರೆಗೂ 18 ಲಕ್ಷ ವಾಹನಗಳಿಗೆ ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಇದು ನಡೆಯಬೇಕಾಗಿರುವುದರಿಂದ ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಕನ್ನಡ ಪುಸ್ತಕ ಕೃತಿಗಳ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2022 ರ ಜನವರಿ 1 ರಿಂದ 2022 ರ ಡಿಸೆಂಬರ್ 31 ರೊಳಗೆ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2022 ಮುದ್ರಿತವಾಗಿರಬೇಕು.

ಪುಸ್ತಕಗಳ ತಲಾ 4 ಪ್ರತಿಗಳನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ಇವರಿಗೆ ನೊಂದಣಿ ಅಂಚೆ ಅಥವಾ ಕೊರಿಯರ್ ಮೂಲಕ ಇಲ್ಲವೇ ಖುದ್ದಾಗಿ ಫೆ.20 ರೊಳಗೆ ಸಲ್ಲಿಸಬೇಕು ಎಂದು ರಿಜಿಸ್ಟ್ರಾರ್ ಕರಿಯಪ್ಪ.ಎನ್.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending