ದಿನದ ಸುದ್ದಿ

ದಾವಣಗೆರೆ | 2ನೇ ಡೋಸ್ ಬಾಕಿ ಇರುವವರಿಗೆ ಕೋವಿಡ್ ಲಸಿಕೆ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಮೊದಲನೆ ಡೋಸ್ ಪಡೆದು, ಎಂಟು ವಾರ ಸಂಪೂರ್ಣವಾದ ಫಲಾನುಭವಿಗಳಿಗೆ ಆದ್ಯತೆ ಮೇಲೆ ಸದ್ಯ 02 ನೇ ಡೋಸ್ ಮಾತ್ರ ಕೋವಿಶೀಲ್ಡ್ ಲಸಿಕೆಯನ್ನು ಜಿಲ್ಲೆಯ ಎಲ್ಲಾ ನಿಗದಿತ ಆರೋಗ್ಯ ಕೇಂದ್ರಗಳಲ್ಲಿ ಮೇ. 05 ರಿಂದ ನೀಡಲಾಗುವುದು.

ಇದನ್ನೂ ಓದಿ | ಲಾಕ್ ಡೌನ್ ವಿಸ್ತರಣೆ | ಮೋದಿಯವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇನೆ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಹೀಗಾಗಿ ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು ಎಂಟು ವಾರ ಪೂರ್ಣಗೊಂಡವರು ಮಾತ್ರ ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದುಕೊಳ್ಳಬೇಕು, ಲಸಿಕಾ ಕೇಂದ್ರಕ್ಕೆ ಆಗಮಿಸುವ ಮೊದಲು ಆನ್‍ಲೈನ್‍ನಲ್ಲಿ ನೊಂದಾಯಿಸಿಕೊಂಡಿರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version