ದಿನದ ಸುದ್ದಿ
ದಾವಣಗೆರೆ | 1437 ಫಲಿತಾಂಶ ಬಾಕಿ : 84 ಆ್ಯಕ್ಟೀವ್ ಕೇಸ್
ಸುದ್ದಿದಿನ,ದಾವಣಗೆರೆ : ಒಂದು ಹೊಸ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ರೋಗಿ ಸಂಖ್ಯೆ 1186 ಇವರಿ ಹೊನ್ನಾಳಿ ಮೂಲದ 24 ವರ್ಷದ ಯುವಕ ಆಗಿದ್ದು ಇವರು ಮಹಾರಾಷ್ಟ್ರದ ಲಾತೂರ್‍ನಲ್ಲಿ ಕೃಷಿ ಕಾರ್ಮಿಕರಾಗಿ ಹಾಗೂ ಸೊಲ್ಲಾಪುರದಲ್ಲಿ ಒಂದೂವರೆ ತಿಂಗಳು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, ಮೈಸೂರು ಮತ್ತು ಹೊಸನಗರದ ಸಹೋದ್ಯೋಗಿಗಳೊಂದಿಗೆ ಹರಿಹರಕ್ಕೆ ಬಂದಿದ್ದು, ಅಂದೇ ಹರಿಹರದ ಆರೋಗ್ಯಾಧಿಕಾರಿಗಳು ಅವರನ್ನು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿ ಮೇ 11 ರಂದು ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಭಾನುವಾರ ಮಧ್ಯರಾತ್ರಿ ಹೊತ್ತಿಗೆ ಅವರ ಫಲಿತಾಂಶ ಪಾಸಿಟಿವ್ ಎಲಂದು ಬಂದಿದ್ದು ಇವರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಹೋಗಿ ಬಂದಿರುವ ಪ್ರವಾಹ ಹಿನ್ನೆಲೆ ಹೊಂದಿದ್ದಾರೆ. ಇವರನ್ನು ಹರಿಹರದಲ್ಲಿ ಈಗಾಗಲೇ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಿದ್ದು, ಇದೀಗ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ರೋಗಿಯ 6 ಪ್ರಾಥಮಿಕ ಮತ್ತು 8 ದ್ವಿತೀಯ ಸಂಪರ್ಕ ಗುರುತಿಸಿ ಇವರ ಸ್ಯಾಂಪಲ್‍ಗಳನ್ನು ಸಹ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಟ್ಟು 84 ಸಕ್ರಿಯ ಪ್ರಕರಣಗಳಿದ್ದು, 1437 ಮಾದರಿಗಳ ಫಲಿತಾಂಶ ಬಾಕಿ ಇದೆ. ಇಂದು 401 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಸೋಮವಾರ ತಡರಾತ್ರಿವರೆಗೆ 900 ರಿಂದ 1000 ವರದಿಗಳ ಫಲಿತಾಂಶವನ್ನು ನಿರೀಕ್ಷಿಸಲಾಗುತ್ತಿದೆ.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಸರ್ವೇಕ್ಷಣಾಧಿ ಡಾ.ರಾಘವನ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243