Connect with us

ದಿನದ ಸುದ್ದಿ

ದಾವಣಗೆರೆ | ಜನಸ್ಪಂದನ ಸಭೆಗೆ ಅರ್ಜಿಗಳ ಮಹಾಪೂರ

Published

on

ಸುದ್ದಿದಿನ,ದಾವಣಗೆರೆ : ಸಾರ್ವಜನಿಕರು ದೂರು ಮತ್ತು ಅಹವಾಲುಗಳನ್ನು ನೀಡುವುದು ಕರ್ತವ್ಯ. ಅದರಂತೆ ಚುನಾವಣೆಗಳಲ್ಲಿ ಮತದಾನ ಮಾಡಬೇಕಿರುವುದು ನಾಗರಿಕರಾದ ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯವೆಂದು ದೂರುನೀಡಲು ಬಂದಿದ್ದ ಮಹಿಳಾ ವಕೀಲರೊಬ್ಬರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸಲಹೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಭವನದಲ್ಲಿ ನಡೆದ ಜನಸ್ಪಂದನದಲ್ಲಿ ಜನರ ಅವಹಾಲುಗಳನ್ನು ಸ್ವೀಕರಿಸಿ ಮಾತನಾಡಿದ ಅವರು, ದೂರು ನೀಡಲು ಆಗಮಿಸಿದ್ದ ಮಹಿಳಾ ವಕೀಲರೊಬ್ಬರಿಗೆ ನೀವು ಈ ಬಾರಿಯ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಿದ್ದಿರಾ ಎಂದಾಗ, ಆ ಮಹಿಳೆ ಇಲ್ಲ ಎಂದು ಹೇಳಿದರು. ಇದಕ್ಕೆ ಜಿಲ್ಲಾಧಿಕಾರಿಗಳು ನಾಗರಿಕರಾಗಿ ಮತದಾನ ಮಾಡಬೇಕಿರುವುದು ನಮ್ಮ ಮುಖ್ಯ ಕರ್ತವ್ಯ, ಮತದಾನ ನಮ್ಮ ಹಕ್ಕು ಅದನ್ನು ಬಳಸಬೇಕಿರುವುದು ನಮ್ಮ ಜವಬ್ದಾರಿ ಸಲಹೆ ನೀಡಿದರು.

ಜನಸ್ಪಂದನ ಸಭೆಯಲ್ಲಿ ದೇವರಾಜ್ ಅರಸ್ ಬಡಾವಣೆಯ ನಿವಾಸಿಯೊಬ್ಬರು ಕೋರ್ಟ್‍ನ ಹಿಂಭಾಗ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ಸ್ವಚ್ಚತೆ ಇಲ್ಲ, ಇಲ್ಲಿ ವಾಸಿಸುವ ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗುತ್ತಿದೆ. ಮತ್ತು ರಿಂಗ್ ರಸ್ತೆ ಹಾಗೂ ಕೋರ್ಟ್ ಹಿಂಭಾಗದ ರಸ್ತೆಗಳಲ್ಲಿ ಓಡಾಡಲು ಸಾರ್ವಜನಿಕರಿಗೆ ಭಯದ ವಾತವರಣವಿದೆ. ಇದರ ಬಗ್ಗೆ ಮಹಾನಗರಪಾಲಿಕೆ ಹಲವಾರು ಬಾರಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲವೆಂದು ದೂರಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಗರದ ಹಲವಾರು ಸ್ಥಳಗಳಲ್ಲಿ ಇದೇ ರೀತಿಯ ಸಮಸ್ಯೆಗಳಿದ್ದು, ಅದರ ಬಗ್ಗೆ ಗಮನ ಹರಿಸಿ ಸ್ವಚ್ಚತೆಗೆ ಆದ್ಯತೆ ನೀಡುವಂತೆ ಮಹಾನಗರಪಾಲಿಕೆ ಆಯುಕ್ತರಿಗೆ ತಿಳಿಸಿದರು.

ಎಸ್‍ಪಿಎಸ್ ನಗರದ ನಿವಾಸಿಯಾದ ಮಂಜುಳ ಎಸ್ ಹಿರೇಮಠ್ ಎಂಬುವರು, ನಾನು ಬಿ.ಎ ಪದವೀಧರಳಾಗಿದ್ದು, ಅಂಗವಿಕಲರ ಅಧಿನಿಯಮದಡಿ ಅಂಗವಿಕಲರ ಸಹಾಯವಾಣಿಯ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ತಿರಸ್ಕರಿಸಲಾಗಿದೆ. ಈ ಅರ್ಜಿಯನ್ನು ಪರಿಶೀಲಿಸಿ ನನಗೆ ಉದ್ಯೋಗ ದೊರಕಿಸಿಕೊಡಬೇಕೆಂದು ಮನವಿ ಮಾಡಿಕೊಂಡರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಈ ಹುದ್ದೆಯು ವಿಕಲಚೇತನದಡಿ ಇದ್ದು, ಬೇರೆಯವರು ಕಾರ್ಯ ನಿರ್ವಹಿಸುತ್ತಿದ್ದರೆ ಅವರನ್ನು ತೆಗೆದು ಹಾಕಿ ಇವರಿಗೆ ಉದ್ಯೋಗ ನೀಡುವಂತೆ ತಿಳಿಸಿದರು.

ದೇವರಾಜ್ ಅರಸ್ ಬಡಾವಣೆಯ ನಿವಾಸಿ ಸುನಂದ ಎಂಬುವರು ಲಕ್ಷೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಹಿರಿಯ ನಾಗರಿಕ ಠೇವಣಿ ಯೋಜನೆಯಡಿ ಒಂದು ಲಕ್ಷ ಹಣವನ್ನು ಠೇವಣಿ ಮಾಡಲಾಗಿತ್ತು. ನಮ್ಮ ಠೇವಣಿ ಅವಧಿ ಮುಗಿದು, ಬಾಂಡ್ ಮೆಚ್ಯುರಿಟಿ ಆಗಿದ್ದರು ನಮಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ ಎಂದು ದೂರು ನೀಡಿದರು.

ಜಿಲ್ಲಾಧಿಕಾರಿ ಈ ಬಗ್ಗೆ ಸೊಸೈಟಿಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಒಟ್ಟು 1200 ಈ ರೀತಿಯ ಘಟನೆಗಳು ನಡೆದಿವೆ. ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗೆ ನೋಟಿಸ್ ನೀಡಲಾಗಿದ್ದು, ಆ ವ್ಯಕ್ತಿ 15 ದಿನಗಳಿಂದ ಕಚೇರಿಗೆ ಬಂದಿಲ್ಲ. ಇದಕ್ಕೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ನಗರದ ನಿವಾಸಿ ಮಲ್ಲಿಕಾರ್ಜಿನ್ ಇಂಗಳೇಶ್ವರ ಎಂಬುವರು ಪುಷ್ಪ ಮಹಾಲಿಂಗಪ್ಪ ಶಾಲೆಯವರ ಜಾಗ ಎಷ್ಟಿದೆ ಎಂಬುದು ತಿಳಿದಿಲ್ಲ, ಶಾಲೆಯ ಸುತ್ತ ಮುತ್ತ ದೊಡ್ಡ ಬಿಲ್ಡಂಗ್ ಅನುಮತಿಯಿಲ್ಲದೇ ನಿರ್ಮಾಣವಾಗುತ್ತಿವೆ ಇದರ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಸಬೇಕೆಂದು ದೂರು ಅರ್ಜಿ ಸಲ್ಲಿಸಿದರು.

ವಾಕ್ ಮತ್ತು ಶ್ರವಣ ದೋಷವುಳ್ಳ ಅನೇಕ ಜನ ವಿಕಲಚೇತನರು ನಮಗೆ ಸ್ವಯಂ ಉದ್ಯೋಗ ಯೋಜನೆಯಡಿ ಸಾಲ ಸೌಲಭ್ಯಗಳನ್ನು ಒದಗಿಸಿಕೊಡಿ ಎಂದು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ನಿಮಗೆ ಅವಶ್ಯವಿರುವ ಸಹಾಯ ಮಾಡಲು ನಾನು ಸಿದ್ಧನಿದ್ದೆ, ನಿಮ್ಮ ಅನುಕೂಲಕ್ಕಾಗಿ ಸಂಬಂಧಿಸಿದ ಎಲ್ಲ ಇಲಾಖೆಗಳ ಸಮ್ಮಖದಲ್ಲಿ ಅಭೆ ನಡೆಸಿ ಅಗತ್ಯವಾದ ಸಹಾಯ ವ್ಯವಸ್ಥೆ ಮಾಡಲಾಗುವುದೆಂದು ತಿಳಿಸಿದರು.

ನಂಜನಗೌಡ ಎಂಬುವರು ಉಚ್ಚಂಗಿದುರ್ಗ ಕ್ಷೇತ್ರವು ಐತಿಹಾಸಿಕವಾಗಿ ಹೆಚ್ಚು ಪ್ರಸಿದ್ದಿ ಹೊಂದಿದ್ದು, ದಾವಣಗೆರೆಯಿಂದ ಅಣಜಿ ಕ್ರಾಸ್ ಮುಂಖಾತರ ಉಚ್ಚಂಗಿದುರ್ಗಕ್ಕೆ ಕೆಎಸ್‍ಆರ್‍ಟಿಸಿ ಬಸ್ ಸೇವೆ ಒದಗಿಸಬೇಕೆಂದು ಮನವಿ ಪತ್ರ ಸಲ್ಲಿಸಿದರು.

ಹರಿಹರ ನಿವಾಸಿ ನಿಸಾರ್ ಅಹಮದ್‍ರವರು ನಾನು ಬಡ ವರ್ಗದವನಾಗಿದ್ದು, ಶೇ.75 ರಷ್ಟು ಅಂಗವಿಕಲತೆ ಹೊಂದಿದ್ದೇನೆ. ನನಗೆ ಸರ್ಕಾರದ ವತಿಯಿಂದ ಆಶ್ರಯ ಯೋಜನೆಯಡಿ ಮನೆಯನ್ನು ನೀಡಬೇಕೆಂದು ಮನವಿ ಮಾಡಿಕೊಂಡರು.

ವಿಜಯ ನಗರ ನಿವಾಸಿ ಗೋಪಾಲಮ್ಮ ಎಂಬುವವರು, ನಾನು ಅಂಗನವಾಡಿ ಮತ್ತು ಪೋಸ್ಟ್ ಆಫೀಸ್‍ಗಳಲ್ಲಿ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದೇನೆ. ನನಗೆ ಯಾವುದಾರೊಂದು ಕೆಲಸ ದೊರಕಿಸಿಕೊಡಿ ಎಂದು ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿಗಳು ನೀವು ಅರ್ಜಿ ಸಲ್ಲಿಸಿರುವ ಇಲಾಖೆಗಳಲ್ಲಿ ಯಾವುದಾದರು ಹುದ್ದೆ ಖಾಲಿ ಇದ್ದರೆ ಹೊರಗುತ್ತಿಗೆ ಆಧಾರದಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು..

ಶಂಕರ್ ವಿಹಾರ ನಗರದ ಮಹಿಳೆಯರು, ಬಡಾವಣೆಯಲ್ಲಿ ಸಮರ್ಪಕ ರಸ್ತೆ ಮತ್ತು ಚರಂಡಿ, ವ್ಯವಸ್ಥೆ ಸರಿಪಡಿಸುವಂತೆ ಮನವಿ ಮಾಡಿದರು.ಜಿಲ್ಲಾಧಿಕಾರಿಗಳು ಈ ಸಮಸ್ಯೆಯನ್ನು ಪರಿಶೀಲಿಸಿ ಕ್ರಮಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ತಿಳಿಸಿದರು.

ಕಸ್ತೂರಮ್ಮ ಎಂಬುವವರು ನನಗೆ ವಿಧವಾ ವೇತನ ಮಂಜೂರಾಗಿದ್ದು, ಇದುವರೆಗೂ ನನ್ನ ಖಾತೆಗೆ ಹಣ ಜಮಾ ಆಗಿರುವುದಿಲ್ಲ. ಈ ಕುರಿತು ವಿಚಾರಿಸಿದರೆ ನನಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ನನಗೆ ವಿಧವಾ ವೇತನ ಬರುವಂತೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಾಲಿನಗರ ನಿವಾಸಿ ಆಶಾ ಅಬ್ದುಲ್ ಅಜೀಜ್‍ಸಾಭ್ ಇವರು ಸಂಧ್ಯಾ ಸುರಕ್ಷ ಯೋಜನೆಯಲ್ಲಿ ತಮಗೆ ಪಿಂಚಣಿ ಮಂಜೂರಾಗಿದ್ದು, 11 ತಿಂಗಳಾದರೂ ನಮಗೆ ಪಿಂಚಣಿ ಹಣ ಬಂದಿಲ.್ಲ ಈ ಪಿಂಚಣಿ ಹಣವನ್ನು ಒದಗಿಸಿಕೊಡುವಂತೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಸಂಬಂಧಿಸಿದ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಿ ಒಂದು ವಾರದೊಳಗೆ ಪಿಂಚಣಿ ಹಣ ಇವರ ಖಾತೆಗೆ ಹೋಗಬೇಕೆಂದು ಎ.ಡಿಯವರಿಗೆ ತಿಳಿಸಿದರು.

ನ್ಯಾಮತಿ ತಾಲ್ಲೂಕಿನ ಗಂಜೇನಹಳ್ಳಿಯ ಬಗರ ಹುಕುಂ ಸಮಿತಿಯಲ್ಲಿ ನಿರ್ಧರಿಸಿದಂತೆ ಚಿಕ್ಕತ್ತಿನಹಳ್ಳಿಯಲ್ಲಿ ಮಂಜೂರಾದ ಸಾಗುವಳಿ ಮಾಡಲು ಪಡೆದ ಭೂಮಿಯ ಮ್ಯುಟೇಷನ್ ಹಾಗೂ ಪಹಣಿ ಮಂಜೂರಾಗಿರುವುದಿಲ್ಲ. ಈ ಕುರಿತು ನ್ಯಾಮತಿ ತಾಲ್ಲೂಕು ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿ ಮನವಿ ಸಲ್ಲಿಸಿದರು.

ನಗರದ ಎಂ.ಬಿ ಕೇರಿಯ ಲಕ್ಕಮ್ಮ ಎಂಬುವವರು ತಾವು ಕಸಬಾ ಹೋಬಳಿಯ 2.12 ಗುಂಟೆ ಜಮೀನು ಇದ್ದು, ಜಮೀನು ಪೋಡಿಗಾಗಿ ಈಗಾಗಲೇ ಅರ್ಜಿ ಸಲ್ಲಸಿ ಹಲವು ವರ್ಷ ಕಳೆದರೂ ತಮ್ಮ ಹೆಸರಿಗೆ ಇನ್ನು ಪೋಡಿಯಾಗಿರುವುದಿಲ್ಲ ಎಂದು ಮನವಿ ಸಲ್ಲಿಸಿ, ಪೋಡಿ ಮಾಡಿಸಿಕೋಡಲು ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಜಿಲ್ಲಾ ಪಂಚಾಯತ್‍ನ ಉಪ ಕಾರ್ಯzರ್ಶಿಗಳಿಗೆ ಈ ಸಮಸ್ಯೆಯ ಬಗ್ಗೆ ಪತ್ರ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಸಾರ್ವಜನಿಕರಿಂದ ಅನೇಕ ಅರ್ಜಿಗಳು ಬಂದಿದ್ದನ್ನು ಗಮನಿಸಿದ ಜಿಲ್ಲಾಧಿಕಾರಿಗಳು, ಸಭೆಯಲ್ಲಿದ್ದ ಅಧಿಕಾರಿಗಳನ್ನುದ್ದೇಶಿಸಿ ಎಲ್ಲಾ ಇಲಾಖೆಯವರು ನಿಮ್ಮ ಕಚೇರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅಲ್ಲೇ ಬಗೆಹರಿಸಿದರೆ, ಜನರು ಜಿಲ್ಲಾಡಳಿತ ಕಚೇರಿಗೆ ಬರಲು ಅವಕಾಶವಿರುವುದಿಲ್ಲ. ಇಲ್ಲಿರುವ ಎಲ್ಲಾ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸುವ ಗುಣ ಬೆಳೆಸಿಕೊಳ್ಳಿ ಎಂದು ಹೇಳಿದರು.

ಕಾನೂನುನ್ನು ಹೊರತು ಪಡಿಸಿ ಸಾರ್ವಜನಿಕರ ಕಾಳಜಿ ವಹಿಸಿ ಕೆಲಸ ಮಾಡಬೇಕು. ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ನಡೆದುಕೊಳ್ಳುವ ರೀತಿಯಿಂದ ನಮ್ಮ ಕಚೇರಿಯ ವರ್ಚಸ್ಸುನ್ನು ಹೆಚ್ಚಿಸುತ್ತದೆ. ಆದ್ದರಿಂದ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ ಮತ್ತು ಕಾಳಜಿಯಿಂದ ವರ್ತಿಸುವ ಗುಣ ಬೆಳೆಸಿಕೊಳ್ಳಿ. ಸಾರ್ವಜನಿಕರ ಮನವಿಯನ್ನು ಆಲಿಸಿಕೊಂಡು ಅವರ ಸಮಸ್ಯಗೆ ಪರಿಹಾರ ಒದಗಿಸುವ ಕಾರ್ಯವಾಗಬೇಕೆ ಎಂದು ತಿಳಿಸಿದರು.

ಸಭೆಯಲ್ಲಿ ವೃದ್ದಾಪ್ಯ ವೇತನ, ವಿಧವಾ ವೇತನ, ಖಾತೆ ವರ್ಗಾವಣೆ, ಬಸ್ ವ್ಯವಸ್ಥೆ ಕಲ್ಪಿಸುವ ಕುರಿತು, ಸಾಲ ಸೌಲಭ್ಯಗಳ ಕುರಿತು ಹಾಗೂ ಅಂಗವಿಕಲರಿಗೆ ಸ್ವಉದ್ಯೋಗಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅನೇಕ ಅಹವಾಲುಗಳನ್ನು ಸ್ವೀಕರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್ ವಿಜಯ್‍ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ. ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

Published

on

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.

“ಐಪಿಸಿ, ಸಿಆರ್‌ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”

ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”

ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.

ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

Published

on

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.

ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್‌ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.

ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

Published

on

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಚತೆ ಇಲ್ಲದೆ, ಕಲುಷಿತ, ವಿಷಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತೆ ಘಟನೆಗಳು ಸಂಭವಿಸುತ್ತಿದ್ದು, ರಾಮೇಶ್ವರ ಕೆಫೆ, ಇಂದಿರಾನಗರ ಬೆಂಗಳೂರು ಹಾಗೂ ಇನ್ನಿತರೆ ಸಮಸ್ಯೆಗಳಿಗೆ ಸಂಬಂಧಿಸಿದಂತೆ, ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಂಡದಲ್ಲಿ ವರದಿಯಾಗಿರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending