ದಿನದ ಸುದ್ದಿ

ದಾವಣಗೆರೆ | ರೈತರ ಬೆಳೆ ಹಾನಿಗಳಿಗೆ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿನೆ

Published

on

ಸುದ್ದಿದಿನ,ದಾವಣಗೆರೆ: ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ಸಂದರ್ಭದಲ್ಲಿ ರೈತರಿಗೆ ಉಂಟಾಗಿರುವ ಸಂಕಷ್ಟದ ಕುರಿತು ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಮುಖಂಡರೊಂದಿಗೆ ಸಭೆ ನಡೆಸಲಾಯಿತು.

ಬಿತ್ತನೆ ಬೀಜ ರಸಗೊಬ್ಬರ ಪೂರೈಕೆ, ತೋಟಗಾರಿಕೆ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಹಾಗೂ ಬೆಂಬಲ ಬೆಲೆ ನೀಡುವಿಕೆ, ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು, ಕೃಷಿ ಬೆಳೆಗಳ ಖರೀದಿ ಕೆಂದ್ರಗಳ ಸ್ಥಾಪನೆ, ಬ್ಯಾಂಕ್‍ಗಳಿಂದ ಕೃಷಿಗೆ ಸಂಬಂಧಿಸಿದಂತೆ ಸಾಲ ಮಂಜೂರಾತಿ ಹಾಗೂ ವಸೂಲಾತಿ ಕ್ರಮಗಳ ಕುರಿತು, ಅರಣ್ಯ ಇಲಾಖೆ ವತಿಯಿಂದ ಗಿಡ ನೆಡುವ ಕಾರ್ಯಕ್ರಮ, ಪರಿಸರ ಇಲಾಖೆಗೆ ಸಂಬಂಧಿಸಿದ ವಿಷಯ, ಅಡಿಕೆ ಬೆಳೆಗಳಿಗೆ ಮಂಗಗಳ ಹಾವಳಿ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಕೂಲಂಕುಷವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ರೈತರ ಸಂಕಷ್ಟದಲ್ಲಿ ಜಿಲ್ಲಾಡಳಿತ ನಿಮ್ಮೊಂದಿಗಿದೆ. ಕಾಲ ಕಾಲಕ್ಕೆ ನಿಮ್ಮೆಲ್ಲರ ಸಲಹೆ ಸೂಚನೆ ತೆಗೆದುಕೊಂಡು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತೇವೆ. ನೀವು ಕೂಡ ನಮ್ಮ ಕೆಲಸದ ಅಂಗವಾಗಿದ್ದೀರಿ. ನಿಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಲು ನಿಮ್ಮ ಸಹಕಾರ ಬೇಕು ಎಂದರು.

ಮುಂಗಾರು ಸಂದರ್ಭ ಇದಾಗಿದ್ದು, ಬಿತ್ತನೆ ಬೀಜ ರಸಗೊಬ್ಬರಗಳ ಪೂರೈಕೆ ಸರಿಯಾಗಿ ಆಗಬೇಕು. ರೈತರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು. ಜೊತೆಗೆ ತೋಟಗಾರಿಕೆ ಹಾಗೂ ಕೃಷಿ ಬೆಳಗೆಳಿಗೆ ಉತ್ತಮ ರೀತಿಯ ಬೆಂಬಲ ಬೆಲೆ ನಿಗದಿಪಡಿಸಬೇಕು. ರೈತರ ಬೆಳೆ ಹಾನಿಗಳಿಗೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version