ದಿನದ ಸುದ್ದಿ
ದಾವಣಗೆರೆ ; ಇಂದು ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಡಿಸಿ ರಜೆ ಘೋಷಣೆ
ಸುದ್ದಿದಿನ,ದಾವಣಗೆರೆ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯಾಂದ್ಯಂತ ಭಾರೀ ಮಳೆಯಾಗಿದ್ದು, ಕೆರೆ,ಹಳ್ಳ,ಜಮೀನುಗಳಲ್ಲಿ ನೀರು ತುಂಬಿ ಧಾರಾಕಾರವಾಗಿ ಹರಿಯುತ್ತದೆ.
ಧಾರಾಕಾರ ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಶಾಲೆಗಳಲ್ಲಿ ನೀರು ತುಂಬಿದ್ದು, ರಸ್ತೆ ಸಂಪರ್ಕ ಕಡಿತವಾಗಿದ್ದರಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕಷ್ಟವಾಗುತ್ತಿದೆ. ಈ ಹಿನ್ನೆಲೆ ಇಂದು (ಮೇ. 20) ಜಿಲ್ಲೆಯ ಅನುದಾನಿತ, ಅನುದಾನ ರಹಿತ ಸೇರಿ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಡಿಸಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243