Connect with us

ದಿನದ ಸುದ್ದಿ

ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಗೋಲ್ ಮಾಲ್: ಸಿಎಂಗೆ ಮಾಜಿ ಶಾಸಕ ಶಿವಶಂಕರ್ ಪತ್ರ

Published

on

ಎನ್. ಆರ್.ಗೋವರ್ಧನ, ದಾವಣಗೆರೆ: 

ದಾವಣಗೆರೆ ಡಿಸಿಸಿಬಿಯಲ್ಲಿ ಖಾಲಿ 31 ಹುದ್ದೆಗಳಿಗೆ ನಡೆಸಿದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮವಾಗಿದ್ದು, ಸರ್ಕಾರ ಕೂಡಲೇ ಅದಕ್ಕೆ ತಡೆ ನೀಡಬೇಕು ಎಂದು ಹರಿಹರ ಕ್ಷೇತ್ರದ ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ದಾವಣಗೆರೆ ಡಿಸ್ಟ್ರಿಕ್ಟ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಸರ್ಕಾರದ ನಿಯಮಾವಳಿ ಉಲ್ಲಂಘಿಸಿ ನೇಮಕಾತಿ ನಡೆದಿದ್ದು, ಅರ್ಹರಿಗೆ ಅನ್ಯಾಯವಾಗಿದೆ. ಕೇವಲ 10 ದಿನದೊಳಗೆ ನೇಮಕಾತಿ ಪ್ರಕ್ರಿಯೆ ಮುಗಿಸಲಾಗಿದೆ. ಪ್ರತಿ ಹುದ್ದೆಗೆ ಲಕ್ಷಾಂತರ ರೂಪಾಯಿ ಲಂಚ ಪಡೆದ ಆರೋಪ ಕೇಳಿ ಬರುತ್ತಿವೆ.

ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಅವರು ಬರೆದ ಪತ್ರದಲ್ಲಿ ಏನಿದೆ:

  • 1. ಸರ್ಕಾರಿ ಮತ್ತು ಸಹಕಾರಿ ಇಲಾಖೆಯ ನಿಯಮ ಉಲ್ಲಂಘನೆ ಮಾಡಲಾಗಿದೆ. ಬ್ಯಾಂಕಿನ ನೌಕರರ ನೇಮಕಾತಿ ಸಂಬಂಧಿಸಿದಂತೆ ಆಡಳಿತ ಮಂಡಳಿ ಸಭೆ ನಡೆಸದೇ ವಿಷಯ ಮಂಡಿಸದೇ ಬೇರೆ ಹೆಚ್ಚುವರಿ ವಿಷಯದಲ್ಲಿ ತೀರ್ಮಾನ ತೆಗೆದುಕೊಂಡು ಸಹಕಾರ ಸಂಘಗಳ ನಿಯಮ 14 (ಇ) ಯನ್ನು ಉಲ್ಲಂಘಿಸಲಾಗಿದೆ. ಇಂತಹ ವಿಷಯವನ್ನು ಮುಖ್ಯ ವಿಷಯದಲ್ಲಿ ಮಂಡಿಸಿಬೇಕಾಗುತ್ತದೆ.
    2. ಸಹಕಾರ ಸಂಘಗಳ ನಿಬಂಧಕರು ಸದರಿ ಆಡಳಿತ ಮಂಡಳಿ ನಡವಳಿಕೆಗಳನ್ನು ಗಮನಿಸದೇ ಕಡತ ಪರಿಶೀಲನ ಮಾಡದೇ ಏಕಾಏಕಿ ಅನುಮತಿ ನೀಡಲಾಗಿದೆ.
  • 3. ಸಹಕಾರ ಸಂಘಗಳ ನಿಬಂಧಕರು ಸದರಿ ನಿಯೋಜಿತಗೊಂಡಿರುವ ಸಿಇಒ ಇರುವುದಿಲ್ಲ. ಬ್ಯಾಂಕಿನ ಆಡಳಿತ ಮಂಡಳಿಯವರು ಬ್ಯಾಂಕಿನ ಸಿಬ್ಬಂದಿಗೆ ಪ್ರಭಾರ ವಹಿಸಿ ಮನಬಂದಂತೆ ಆಡಳಿತ ನಡೆಸುತ್ತಿದ್ದು, ನಿಯಮ ಉಲ್ಲಂಘಿಸಿದ್ದಾರೆ.
  • 4. ಸದರಿ ವಿಷಯಗಳನ್ನು ತೀರ್ಮಾನಿಸುವ ಸಭೆಗಳಿಗೆ ಸತತವಾಗಿ ಸರ್ಕಾರದ ಪರವಾಗಿ ಸಹಕಾರ ಸಂಘದ ಉಪನಿಬಂಧಕರು ಗೈರಾಗಿದ್ದಾರೆ.
  • 5. ಸಹಕಾರ ಸಂಘದ ನಿಯಮ 18(ಅ) ನಿಯಮದಂತೆ ನೇಮಕಾತಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರಿಗೆ ಹುದ್ದೆ ನೀಡಬೇಕು. ಆದರೆ ಕಡಿಮೆ ಅಂಕ ಪಡೆದವರಿಗೆ ನೀಡಲಾಗಿದೆ.

ಹೀಗೆ ಪತ್ರದಲ್ಲಿ ಹಲವು ಅಂಶಗಳನ್ನು ಪಟ್ಟಿ ಮಾಡಿರುವ ಮಾಜಿ ಶಾಸಕ ಎಚ್.ಎಸ್.ಶಿವಕುಮಾರ್ ಈ ಕುರಿತು ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಶೀಘ್ರ ನೇಮಕಕ್ಕೆ ಚುನಾವಣೆ ಕಾರಣ

ದಿಢೀರನೆ ನೇಮಕಾತಿ ಪ್ರಕ್ರಿಯೆ ಕೈಗೊಂಡಿರುವುದಕ್ಕೆ ಸಹಕಾರ ಸಂಘದ ಎಕ್ಸಿಕ್ಯುಟಿವ್ ಸಮಿತಿ ಚುನಾವಣೆ ನಡೆಯಲಿದೆಯಂತೆ. ಐದು ವರ್ಷಗಳ ಹಿಂದೆ ಆಯ್ಕೆಯಾದ ಸಮಿತಿ ಅವಧಿ ಮುಕ್ತಾಯವಾಗುತ್ತಿದ್ದು, ಚುನಾವಣೆ ನಡೆಸಲು ರಾಜ್ಯ ಇಲಾಖೆಯಿಂದ ಪ್ರಕಟಣೆ ಹೊರಡಿಸಲಾಗಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

ಅಕ್ರಮದ ಕುರಿತು ಸುದ್ದಿದಿನ ಬೆಳಕು

ದಾವಣಗೆರೆ ಡಿಸಿಸಿಬಿ‌ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಕುರಿತು ಕೆಲ ಆಕಾಂಕ್ಷಿಗಳು ಆರೋಪಿಸಿದ್ದರು. ಇದರ ಜಾಡುಹಿಡಿದು ಸುದ್ದಿದಿನ ಮೊದಲಿಗೆ ವರದಿ ಪ್ರಕಟಿಸಿತ್ತು. ಆ ನಂತರ ಕೆಲವರು ಅಕ್ರಮ ನಡೆದಿರುವ ಕುರಿತು ದೂರವಾಣಿ ಮೂಲಕ ಆರೋಪಿಸಿದ್ದಾರೆ. ಅಂಗವಿಕಲರೊಬ್ಬರು ಪ್ರಕರಣದ ತನಿಖೆಗೆ ಪಿಎಎಲ್ ಹಾಕಿದ್ದಾರೆ.

ಇದನ್ನು ಓದಿ: ದಾವಣಗೆರೆ ಡಿಸಿಸಿ ಬ್ಯಾಂಕ್ ನೇಮಕಾತಿ ಅಕ್ರಮ..?

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

Published

on

ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

Published

on

ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ-1993ರ ಅನುಷ್ಠಾನ ಹಾಗೂ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಗ್ರಾಮ ಪಂಚಾಯತಿಗಳು ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಗ್ರಾಮಸಭೆ ಸೇರುವ ಒಂದು ತಿಂಗಳು ಮೊದಲೇ ಜನವಸತಿ ಸಭೆ ಹಾಗೂ ವಾರ್ಡ್ ಸಭೆಗಳನ್ನು ಗ್ರಾಮ ಪಂಚಾಯತಿ ಅಧ್ಯಕ್ಷರು ನಡೆಸಬೇಕು ಎಂದರು.

ಒಂದು ವರ್ಷದಲ್ಲಿ ಎರಡು ಗ್ರಾಮ ಸಭೆಗಳನ್ನು ಕಡ್ಡಾಯವಾಗಿ ನಡೆಸಬೇಕು. ಪ್ರತಿ ಆರ್ಥಿಕ ವರ್ಷದಲ್ಲಿ ಜನವರಿ ಮಾಹೆಯ 26, ಏಪ್ರಿಲ್ ಮಾಹೆಯ 24, ಆಗಸ್ಟ್ ಮಾಹೆಯ 15 ಮತ್ತು ಅಕ್ಟೋಬರ್ ಮಾಹೆಯ 2ರಂದು ಕಡ್ಡಾಯವಾಗಿ ಗ್ರಾಮ ಸಭೆಗಳನ್ನು ಆಯೋಜಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಒಂದು ವರ್ಷದಲ್ಲಿ ಒಂದು ವಿಶೇಷ ಮಹಿಳಾ ಗ್ರಾಮಸಭೆ ಮತ್ತು ಒಂದು ಮಕ್ಕಳ ಗ್ರಾಮಸಭೆಯನ್ನು ಆಯೋಜಿಸಲು ಮಾರ್ಗದರ್ಶನ ನೀಡಲಾಗಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ35 mins ago

ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ

ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್‍ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್‍ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್...

ದಿನದ ಸುದ್ದಿ6 hours ago

ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ

ಸುದ್ದಿದಿನಡೆಸ್ಕ್:ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34 ಸಾವಿರದ 863 ಹುದ್ದೆಗಳನ್ನು ಕಾಲ ಮಿತಿಯಲ್ಲಿ ಭರ್ತಿ ಮಾಡಬೇಕು. ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್‌ಸಿ ಮಾದರಿಯಲ್ಲಿ ಏಕರೀತಿಯ...

ದಿನದ ಸುದ್ದಿ9 hours ago

ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ

ಸುದ್ದಿದಿನಡೆಸ್ಕ್:ಗ್ರಾಮ ಪಂಚಾಯತಿಗಳು ಜನವಸತಿ ಸಭೆ, ವಾರ್ಡ್ ಸಭೆ ಹಾಗೂ ಗ್ರಾಮಸಭೆಗಳನ್ನು ನಡೆಸುವುದು ಕಡ್ಡಾಯವಾಗಿದ್ದು, ಈ ಸಂಬಂಧದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ದಿನದ ಸುದ್ದಿ9 hours ago

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಜಾರಿಗೆ ಸಂಬಂಧಿಸಿದ ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಟೋಬರ್ 18ರಂದು ಸಂಪುಟ ಸಭೆ...

ದಿನದ ಸುದ್ದಿ22 hours ago

ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ...

ದಿನದ ಸುದ್ದಿ24 hours ago

ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ

ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ...

ದಿನದ ಸುದ್ದಿ24 hours ago

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ...

ದಿನದ ಸುದ್ದಿ1 day ago

ವಸತಿ ಯೋಜನೆ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಉತ್ತರ ಮತ್ತು ದಕ್ಷಿಣ...

ದಿನದ ಸುದ್ದಿ1 day ago

ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ...

ದಿನದ ಸುದ್ದಿ1 day ago

ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅಕ್ಟೋಬರ್.30 ರೊಳಗಾಗಿ ಸಲ್ಲಿಸಿ, ಸಲ್ಲಿಸಿದ ಅರ್ಜಿ ಮತ್ತು...

Trending