ದಿನದ ಸುದ್ದಿ
ನೇಮಕಾತಿಯಲ್ಲಿ ಅಕ್ರಮ ನಡೆದಿಲ್ಲ: ದಾವಣಗೆರೆ ಡಿಸಿಸಿ ಬ್ಯಾಂಕ್ ಸಿಇಒ ಸ್ಪಷ್ಟನೆ
ಸುದ್ದಿದಿನ ಡೆಸ್ಕ್: ಡಿಸಿಸಿ ಬ್ಯಾಂಕ್ ನ ಸಿಬ್ಬಂದಿ ನೇಮಕಾತಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ನಿಯಮದ ಪ್ರಕಾರವೇ ನಾವು ನೇಮಕಾತಿ ಮಾಡಿದ್ದೇವೆ ಎಂದು ಬ್ಯಾಂಕ್ ನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ತಾವರ್ಯ ನಾಯ್ಕ ಸ್ಪಷ್ಟಪಡಿಸಿದ್ದಾರೆ.
ಅಕ್ರಮದ ಕುರಿತು ಸುದ್ದಿದಿನ ಆನ್ಲೈನ್ ನ್ಯೂಸ್ ಪೊರ್ಟಲ್ ಬ್ಯಾಂಕ್ ನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ತಾವರ್ಯ ನಾಯ್ಕ ಅವರನ್ನು ಸಂಪರ್ಕಿಸಿದ್ದು, ಅವರು ಆರೋಪ ನಿರಾಧಾರ ಎಂದು ತಿಳಿಸಿದ್ದಾರೆ. ಸರ್ಕಾರದ ನಿಯಮದಂತೆ ನೇಮಕಾತಿ ಮಾಡಲಾಗಿದೆ. ಆರೋಪಗಳ ಬಗ್ಗೆ ನಮಗೆ ಗೊತ್ತಿಲ್ಲ. ಮೀಸಲಾತಿ ಸಂಬಂಧಿಸಿದಂತೆ ಕೆಲ ಅಂಗವಿಕಲರು ಪಿಟಿಷನ್ ಹಾಕಿದ್ದು, ನಾವು ಕೂಡ ವಕೀಲರ ಮೂಲಕ ಉತ್ತರ ನೀಡಲು ಸಿದ್ದರಿದ್ದೇವೆ ಎಂದು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಆದೇಶ
ಮೀಸಲಾತಿಯಲ್ಲಿ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದ್ದು, ಈ ಕುರಿತು ಸ್ಪಷ್ಟನೆ ನೀಡುವಂತೆ ದಾವಣಗೆರೆ ಜಿಲ್ಲಾಧಿಕಾರಿ ರಮೇಶ್ ಆದೇಶ ನೀಡಿದ್ದಾರೆ. ನೇಮಕಾತಿ ವೇಳೆ ಅನುಸರಿಸಿರುವ ಕ್ರಮಗಳ ಕುರಿತು ಅಭ್ಯರ್ಥಿಗಳಿಗೆ ಸ್ಪಷ್ಟ ಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.