ದಿನದ ಸುದ್ದಿ

ದಾವಣಗೆರೆ | ಮೇ 04 ರವರೆಗೆ ರಾತ್ರಿ ಕಫ್ರ್ಯೂ ಹಾಗೂ ವಾರಾಂತ್ಯ ಕಫ್ರ್ಯೂ ಘೋಷಣೆ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಾದ್ಯಂತ ಕೋವಿಡ್ 19 ಸೋಂಕು ಹರಡದಂತೆ ತಡೆಯುವ ಸಲುವಾಗಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಆರ್‍ಪಿಸಿ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಏ.21 ರಿಂದ ಮೇ 04 ರವರೆಗೆ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾತ್ರಿ ಕಫ್ರ್ಯೂವನ್ನು ಮತ್ತು ವಾರಾಂತ್ಯದ ಕಫ್ರ್ಯೂವನ್ನು ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ಘೋಷಿಸಿದ್ದಾರೆ.

ಚಿತ್ರದುರ್ಗ | ವದ್ದೀಕೆರೆ ಸಿದ್ದೇಶ್ವರ ಸ್ವಾಮಿ ಜಾತ್ರೆ ರದ್ದು

ಸಾರ್ವಜನಿಕರು ಕಫ್ರ್ಯೂ ವೇಳೆ ಕೆಲವು ಷರತ್ತು ಮತ್ತು ನಮೂದಿತ ಮಾರ್ಗಸೂಚಿಗಳನ್ನು ಪಾಲಿಸಬೇಕಿದ್ದು, ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿರುತ್ತಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version