ದಿನದ ಸುದ್ದಿ

ದಾವಣಗೆರೆ ಜಿಲ್ಲೆ ಮಳೆ ವರದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಏ.17 ರಂದು 11.35 ಮಿ.ಮೀ. ಸರಾಸರಿ ಮಳೆಯಾಗಿದೆ. ಒಟ್ಟಾರೆ 6.82 ಲಕ್ಷ ರೂ ಅಂದಾಜು ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ 8.56 ಮಿ.ಮೀ ವಾಸ್ತವ ಮಳೆಯಾಗಿದೆ. ದಾವಣಗೆರೆ- 5.51 ಮಿ.ಮೀ., ಹರಿಹರ-5.45 ಮಿ.ಮೀ., ಹೊನ್ನಾಳಿ -32.2 ಮಿ.ಮೀ. ಹಾಗೂ ಜಗಳೂರು ತಾಲ್ಲೂಕಿನಲ್ಲಿ 5.04 ಮಿ.ಮೀ ವಾಸ್ತವ ಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಯಲ್ಲಿ ಎರಡು ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ಎರಡು ಎಕರೆ ಬಾಳೆ ಬೆಳೆಗೆ ಹಾನಿಯಾಗಿ ಒಟ್ಟು 5.60 ಲಕ್ಷ ಅಂದಾಜು ನಷ್ಟ ಸಂಭವಿಸಿದೆ.

ಹೊನ್ನಾಳಿ ತಾಲ್ಲೂಕಿನಲ್ಲಿ ಒಂದು ದನದಕೊಟ್ಟಿಗೆ ಹಾನಿಯಾಗಿದ್ದು, 1.25 ಎಕರೆ ಬಾಳೆ ಮತ್ತು 0.20 ಗುಂಟೆ ಅಡಿಕೆ ಬೆಳೆಗೆ ಹಾನಿಯಾಗಿ ಒಟ್ಟು 1.22 ಲಕ್ಷ ಅಂದಾಜು ನಷ್ಟ ಸಂಭವಿಸಿದೆ. ಜಿಲ್ಲೆಯಲ್ಲಿ ಒಟ್ಟು 6.82 ಲಕ್ಷ ರೂ. ನಷ್ಟದ ಅಂದಾಜು ಮಾಡಲಾಗಿದೆ.

ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version