Connect with us

ದಿನದ ಸುದ್ದಿ

ದಾವಣಗೆರೆ | ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ವಿಧಾನಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಸಂಬಂಧ ವೇಳಾಪಟ್ಟಿಯನ್ನು ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಿಸಿದ್ದಾರೆ.

ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳು ಮತ್ತು ದಾವಣಗೆರೆ ಜಿಲ್ಲೆಯ ಹರಿಹರ, ದಾವಣಗೆರೆ, ಜಗಳೂರು ತಾಲ್ಲೂಕುಗಳು ಈ ಕ್ಷೇತ್ರ ವ್ಯಾಪ್ತಿಗೆ ಬರಲಿವೆ.

ವೇಳಾಪಟ್ಟಿ : ಪ್ರಕಟಿತ ವೇಳಾಪಟ್ಟಿಯನ್ವಯ ಚುನಾವಣೆಗಾಗಿ ಅ. 01 ರಂದು ಅಧಿಸೂಚನೆ ಹೊರಡಿಸಲಾಗುವುದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅ. 08 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಅ. 09 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.

ಉಮೇದುವಾರಿಕೆ ಹಿಂಪಡೆಯಲು ಅ. 12 ಕೊನೆಯ ದಿನವಾಗಿದ್ದು, ಮತದಾನವು ಅ. 28 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 05 ರವರೆಗೆ ನಡೆಯಲಿದೆ. ಮತಗಳ ಎಣಿಕೆ ಕಾರ್ಯ ನವೆಂಬರ್ 02 ರಂದು ನಡೆಯಲಿದ್ದು, ನ. 05 ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ.

ಸ್ಪರ್ಧೆಗೆ ಅರ್ಹತೆ : ಚುನಾವಣೆಗೆ ಸ್ಪರ್ಧಿಸಲು ವಯಸ್ಸು 30 ವರ್ಷ ಮೇಲ್ಪಟ್ಟು ಇರಬೇಕು. ಕರ್ನಾಟಕದ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು ಅಲ್ಲದೆ ಯಾವುದೇ ಕಾನೂನಿನಡಿ ಅನರ್ಹರಾಗಿರಬಾರದು. ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಣಿ ಮಾಡಿಸಿದವರು ಮಾತ್ರ ಈ ಚುನಾವನೆಯಲ್ಲಿ ಮತ ಚಲಾಯಿಸಲು ಅರ್ಹರು.

ನಾಮಪತ್ರ ಸಲ್ಲಿಕೆ : ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಬೇಕಾದ ನಮೂನೆಗಳನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆದು, ಅ. 01 ರಿಂದ ಅ. 08 ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 03 ರವರೆಗೆ ಸಲ್ಲಿಸಬಹುದು. ಪ್ರತಿ ಅಭ್ಯರ್ಥಿಯ ನಾಮಪತ್ರದಲ್ಲಿ ಆಯಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಕನಿಷ್ಟ 10 ಮತದಾರರು ಸೂಚಕರಾಗಿ ಸಹಿ ಮಾಡಿರಬೇಕು.

ಪ್ರತಿ ಅಭ್ಯರ್ಥಿ 10 ಸಾವಿರ ರೂ ಠೇವಣಿ ಮಾಡಬೇಕು. ಪ.ಜಾತಿ, ಪ.ಪಂಗಡದವರಿಗೆ ಠೇವಣಿ ಮೊತ್ತ 5 ಸಾವಿರ ರೂ.ಗಳಾಗಿದ್ದು, ಇದಕ್ಕಾಗಿ ಸಕ್ಷಮ ಪ್ರಾಧಿಕಾರದಿಂದ ಜಾತಿ ದೃಢೀಕರಣ ಪತ್ರ ಸಲ್ಲಿಸಬೇಕು. ಕ್ಷೇತ್ರ ವ್ಯಾಪ್ತಿಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ.

ನಾಮಾಂಕನ ಪತ್ರಗಳನ್ನು ಚುನಾವಣಾಧಿಕರಿಗಳಾದ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರ ಕಚೇರಿ, ಬೆಂಗಳೂರು ವಿಭಾಗ, 2ನೇ ಮಹಡಿ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು-27 ಇವರಿಗೆ ಸಲ್ಲಿಸಬೇಕು.

ಅಭ್ಯರ್ಥಿಗಳು ನಿಗದಿತ ನಮೂನೆಗಳಲ್ಲಿ (ಫಾರಂ 26) ಪ್ರಮಾಣಪತ್ರವನ್ನು ಮತ್ತು ಹೆಚ್ಚುವರಿ ಪ್ರಮಾಣಪತ್ರವನ್ನು ನೋಟರಿ ಅವರಿಂದ ಪ್ರಮಾಣೀಕರಿಸಿ ನಾಮಪತ್ರದೊಂದಿಗೆ ಸಲ್ಲಿಸಬೇಕು. ರಾಜಕೀಯ ಪಕ್ಷಗಳಿಂದ ಸ್ಪರ್ಧಿಸಲು ಇಚ್ಛಿಸುವವರು ಆಯೋಗ ನಿಗದಿಪಡಿಸಿದ ಪ್ರಪತ್ರ-ಎ ಎ, ಪ್ರಪತ್ರ- ಬಿ ಬಿ ಗಳನ್ನು ಅ. 08 ರಂದು ಮಧ್ಯಾಹ್ನ 03 ಗಂಟೆಯೊಳಗೆ ಸಲ್ಲಿಸಬೇಕು.

ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾಧಿಕಾರಿಗಳ ಕಚೇರಿಗೆ ಅಭ್ಯರ್ಥಿ ಹಾಗೂ ಇತರೆ ನಾಲ್ಕು ಜನ ಅಂದರೆ ಅವರ ಸೂಚಕರು ಸೇರಿದಂತೆ ಒಟ್ಟು ಐದು ಜನರಿಗೆ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ಮಾದರಿ ನೀತಿ ಸಂಹಿತೆಯು ಚುನಾವಣಾ ಕ್ಷೇತ್ರ ವ್ಯಾಪ್ತಿಯಲ್ಲಿ ಸೆ. 29 ರಿಂದ ಜಾರಿಯಾಗಿದ್ದು, ನವೆಂಬರ್ 05 ರವರೆಗೆ ಜಾರಿಯಲ್ಲಿರುತ್ತದೆ.

ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending