Connect with us

ದಿನದ ಸುದ್ದಿ

ದಾವಣಗೆರೆ | ಎಂ ಆರ್ ಪಿ ಗಿಂತಲೂ ಹೆಚ್ಚಿನ ದರಕ್ಕೆ ಸಾಮಗ್ರಿಗಳನ್ನು ಮಾರಾಟ ಮಾಡಿದರೆ ತೀವ್ರ ಕ್ರಮ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ರ ಸಂದಿಗ್ಧ ಪರಿಸ್ಥಿತಿಯಲ್ಲಿ ಯಾವುದೇ ವರ್ತಕರು ಸಾಂಧರ್ಭಿಕ ಲಾಭ ಪಡೆಯುವ ದುರುದ್ದೇಶದಿಂದ ತೂಕ – ಅಳತೆಗಳಲ್ಲಿ ಕಡಿಮೆ ವಿತರಣೆ ಮಾಡುವುದಾಗಲೀ (ನ್ಯಾಯಬೆಲೆ ಅಂಗಡಿಗಳು ಸೇರಿದಂತೆ) ಪೊಟ್ಟಣ ಸಾಮಾಗ್ರಿಗಳ ಮೇಲೆ ಮುದ್ರಿಸಿರುವ ಎಂಆರ್‍ಪಿ ಗಿಂತಲೂ ಹೆಚ್ಚಿನ ದರಕ್ಕೆ ಮಾರಾಟ ಮಾಡುವುದಾಗಲೀ ಮಾಡಿದರೆ ಅವರ ಮೇಲೆ ತೀವ್ರ ಕ್ರಮ ಜರುಗಿಸಲಾಗುವುದು ಎಂದು ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು ತಿಳಿಸಿದ್ದಾರೆ.

ಪೊಟ್ಟಣ ಸಾಮಗ್ರಿ ನಿಯಮ 26 ರ ಸಾಮಾಗ್ರಿಗಳನ್ನು ಹೊರತು ಪಡಿಸಿ ಮಾರಿದಲ್ಲಿ ಲೀಗಲ್ ಮೆಟ್ರಾಲಜಿ ಕಾಯಿದೆ 2009 ಹಾಗೂ ಪೊಟ್ಟಣ ಸಾಮಾಗ್ರಿ ನಿಯಮಗಳು 2011 ರ ರೀತ್ಯಾ ತೀವ್ರಕ್ರಮ ಕೈಗೊಳ್ಳಲಾಗುವುದು ಹಾಗೂ ಅಂತಹ ಅಪರಾಧಿಗಳ ಟ್ರೇಡ್ ಲೈಸೆನ್ಸ್‍ನ್ನು ರದ್ದತಿಗೆ ಶಿಫಾರಸ್ಸು ಮಾಡಲಾಗುವುದೆಂದು ಎಂದು ಕಾನೂನು ಮಾಪನ ಶಾಸ್ತ್ರ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು ವರ್ತಕರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ |ನಿಷೇದಾಜ್ಞೆ ಮುಗಿಯುವವರೆಗೆ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆ

ದೂರುಗಳಿಗಾಗಿ ಸಹಾಯಕ ನಿಯಂತ್ರಕ ಹೆಚ್.ಎಸ್.ರಾಜು ಮೊ.ಸಂಖ್ಯೆ 8050024760 ಹಾಗೂ ಉಪವಿಭಾಗದ ಮಟ್ಟದಲ್ಲಿ ದಾವಣಗೆರೆ-01ದಾವಣಗೆರೆ -2-ಗ್ರಾಮಂತರ, ಹರಿಹರ, ಹರಪನಹಳ್ಳಿ, ಪರ್ವೇಜ್ ನೀರಿಕ್ಷಕ ಚನ್ನಬಸಪ್ಪ ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ | ವಾಟ್ಸಾಪ್ | 9980346243

ದಿನದ ಸುದ್ದಿ

ದಾವಣಗೆರೆ | 197 ಹೊಸ ಕೊರೋನಾ ಪ್ರಕರಣಗಳು ಪತ್ತೆ, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳು ಎಷ್ಟಿವೆ ಗೊತ್ತಾ..?

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿಂದು 197 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಮೂರು ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ದಾವಣಗೆರೆ ನಗರ ಸೇರಿದಂತೆ ತಾಲೂಕುಗಳಲ್ಲಿ ಪತ್ತೆಯಾದ ಕೊರೋನಾ ಪ್ರಕರಣಗಳ ಸಂಖ್ಯೆ ಹೀಗಿದೆ. ದಾವಣಗೆರೆ 142, ಹರಿಹರ 20, ಜಗಳೂರು 2, ಚನ್ನಗಿರಿ 13, ಹೊನ್ನಾಳಿ 11, ಹೊರ ಜಿಲ್ಲೆಯಿಂದ 09 ಮಂದಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,905ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ : ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

ಸೋಮವಾರ 301 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವೆಗೆ ಒಟ್ಟು 26,495 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 304 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,106 ಸಕ್ರಿಯ ಕೇಸ್ ಗಳಿವೆ. 68 ವರ್ಷದ ಗೋಪನಾಳ ವೃದ್ಧ, ಹರಿಹರದ 25 ವರ್ಷದ ಯುವಕ, ದಾವಣಗೆರೆಯ 28 ವರ್ಷದ ಯುವಕ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೆಟಿನ್ ನಲ್ಲಿ ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ : ಆಸ್ತಿ ತೆರಿಗೆ ರಿಯಾಯಿತಿ ಸೌಲಭ್ಯ ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಆಸ್ತಿ ತೆರಿಗೆ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು 2021 ರ ಏ.30 ರವರೆಗೆ ನೀಡಲಾಗಿತ್ತು. ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಲಾಕ್‍ಡೌನ್ ಇರುವ ಪ್ರಯುಕ್ತ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಸರ್ಕಾರದ ಸುತ್ತೋಲೆಯನ್ವಯ ಪ್ರಸಕ್ತ ಸಾಲಿನ ಜೂನ್ 30 ರವರೆಗೆ ವಿಸ್ತರಿಸಲಾಗಿದ್ದು ನಿಗದಿತ ದಿನಾಂಕದೊಳಗಾಗಿ ಆಸ್ತಿ ತೆರಿಗೆಯನ್ನು ಪಾವತಿಸಿ ಈ ಸೌಲಭ್ಯವನ್ನು ಆಸ್ತಿ ಮಾಲೀಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಹರಿಹರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ | ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋವಿಡ್ 19 ಪರೀಕ್ಷೆ ಮತ್ತು ಲಸಿಕೆ ಹಾಕಿಸಿಕೊಳ್ಳಲು ಮನವಿ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್ 19 ಸಾಂಕ್ರಾಮಿಕ ರೋಗ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಿಎಸ್‍ಆರ್ ಪಾರ್ಟನರ್ಸ್ ಇವರ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಜನಾಂಗದವರು ಹೆಚ್ಚಾಗಿ ವಾಸಿಸುವ ಪ್ರದೇಶಗಳನ್ನು ಗುರುತಿಸಿ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ಮಾಡಿಸಲು ನಿರ್ದೇಶನ ನೀಡಿದ್ದು, ಜಿಲ್ಲೆಯ ಎಲ್ಲ ಅಲ್ಪಸಂಖ್ಯಾತರು ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಲಸಿಕೆ ಹಾಕಿಸಿಕೊಂಡು ಎಲ್ಲರೂ ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending