ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ವಿವಿಧ ಕಾಲೇಜುಗಳಿಗೆ ವರ್ಗಾವಣೆಗೊಂಡ ಪ್ರಾಧ್ಯಾಪಕರುಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮವನ್ನು ಬುಧವಾರ ಕಾಲೇಜು ಸ್ಥಳೀಯ ಅಧ್ಯಾಪಕರ ಸಂಘದಿಂದ ಹಮ್ಮಿಕೊಳ್ಳಲಾಗಿತ್ತು.

ಧಾರವಾಡ ಜಿಲ್ಲೆಯ ಅಳ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ಹಿಂದಿ ವಿಭಾಗದ ಡಾ. ಪ್ರವೀಣ್ ಆನಂದಕಂದ, ಬೆಳಗಾವಿ ಜಿಲ್ಲೆ ರಾಮದುರ್ಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ಪತ್ರಿಕೋದ್ಯಮ ವಿಭಾಗದ ಡಾ. ಮಹೇಶ್ ಪಾಟೀಲ್, ದಾವಣಗೆರೆ ಜಿಲ್ಲೆ ಚನ್ನಗಿರಿ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ರಾಜ್ಯಶಾಸ್ತ್ರ ವಿಭಾಗದ ಡಾ. ಮಹಮದ್ ಖಾನ್, ದಾವಣಗೆರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡ ಕನ್ನಡ ವಿಭಾಗದ ಡಾ. ಎಮ್ ಮಂಜಣ್ಣ, ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ವರ್ಗಾವಣೆಗೊಂಡ ವಾಣಿಜ್ಯಶಾಸ್ತ್ರ ವಿಭಾಗದ ಡಾ. ಶಾಮಲಾ ಇವರುಗಳಿಗೆ ಬೀಳ್ಕೋಡಲಾಯಿತು.

ರಾಜ್ಯದ ವಿವಿಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಂದ ವರ್ಗಾವಣೆಗೊಂಡು ಬಂದ ಪ್ರಾಧ್ಯಾಪಕರುಗಳನ್ನು ಸ್ವಾಗತಿಸಲಾಯಿತು.

ಈ ವೇಳೆ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಆರ್ ಅಂಜಿನಪ್ಪ, ಪ್ರೊ. ಭೀಮಣ್ಣ ಸುಣಗಾರ, ಡಾ. ದಿನೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version