ದಿನದ ಸುದ್ದಿ
ದಾವಣಗೆರೆ | ಕೆನರಾ ಬ್ಯಾಂಕ್ ವತಿಯಿಂದ ಕೋರೋನಾ ಸಂತ್ರಸ್ತರಿಗೆ ಉಚಿತ ಆಹಾರ ವಿತರಣೆ
ಸಾಧನೆ ಮತ್ತು ಅರ್ಪಣೆಯ ಮೂಲಕ ಕೆನರಾ ಬ್ಯಾಂಕ್ ಸಮಾಜ ಸೇವೆ ಮಾಡುತ್ತಿದೆ.
| ಹೆಚ್.ರಘುರಾಜ, ಸಹಾಯಕ ಮಹಾ ಪ್ರಬಂಧಕರು,
ಕೆನರಾ ಬ್ಯಾಂಕ್
ಸುದ್ದಿದಿನ,ದಾವಣಗೆರೆ : ದೇಶದಲ್ಲಿ ತನ್ನ ಸಾಧನೆಯ ಮೂಲಕ ಅಗ್ರಗಣ್ಯ ರಾಷ್ಟ್ರೀಕೃತ ಬ್ಯಾಂಕಾಗಿರುವ ಕೆನರಾ ಬ್ಯಾಂಕ್ ತನ್ನ ಲಾಭದಲ್ಲಿ ಒಂದಿಷ್ಟು ಪಾಲನ್ನು ಸಮಾಜಕ್ಕಾಗಿ ಅರ್ಪಣೆ ಮಾಡುವುದರ ಮೂಲಕ ಸಮಾಜ ಸೇವೆ ಮಾಡುತ್ತಿದೆ ಎಂದು ಕೆನರಾ ಬ್ಯಾಂಕಿನ ದಾವಣಗೆರೆ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕರಾದ ಹೆಚ್.ರಘುರಾಜ ಅವರು ಹೇಳಿದರು.
ಅವರು ಇಂದು ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕೋರೋನಾ ಸಂತ್ರಸ್ತರಿಗೆ, ಸಂತ್ರಸ್ತರ ಪರಿಚಾರಕರಿಗೆ, ಕೋರೋನಾ ವಾರಿಯರ್ಸ್‌ಗಳಿಗಾಗಿ ಕೆನರಾ ಬ್ಯಾಂಕ್ ಆಯೋಜಿಸಿದ್ದ ಎರಡನೇ ದಿನದ ಉಚಿತ ಆಹಾರ ಸೇವೆಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಕೆನರಾ ಬ್ಯಾಂಕ್ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಲಾಭ ಗಳಿಸುತ್ತಿದೆ.
ಹಾಗಾಗಿ ಕೋರೋನಾದ ಈ ವಿಷಮ ಪರಿಸ್ಥಿತಿಯಲ್ಲಿ ದೇಶದ ಉದ್ದಗಲದಲ್ಲೂ ಹಲವಾರು ರೀತಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದೆ. ಇದು ಕೆನರಾ ಬ್ಯಾಂಕಿಗೆ ಹೆಮ್ಮೆಯ ವಿಷಯ. ಕೋರೋನಾ ವಿರುದ್ಧದ ಹೋರಾಟದಲ್ಲಿ ನಾವು ಸದಾ ಸರಕಾರದೊಂದಿಗೆ ಮತ್ತು ಕೊರೋನಾ ಸಂತ್ರಸ್ತರೊಂದಿಗೆ ಕೈಜೋಡಿಸುತ್ತೇವೆ. ಈ ಆಹಾರ ಸೇವೆ ನಾಳೆಯೂ ಮುಂದುವರೆಯಲಿದೆ ಎಂದು ಹೆಚ್.ರಘುರಾಜ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಸುಶೃತ್ ಡಿ ಶಾಸ್ತ್ರಿ ಮಾತನಾಡಿ ಕೆನರಾ ಬ್ಯಾಂಕ್ ಸದಾ ಸಾಮಾಜಿಕ ಕಳಕಳಿಯೊಂದಿಗೆ ಸೇವೆ ಸಲ್ಲಿಸುತ್ತಿದೆ ಎಂದರು.
ಇಂದಿನ ಈ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ವಿಭಾಗೀಯ ಪ್ರಬಂಧಕರಾದ ಸುಶೃತ್ ಡಿ ಶಾಸ್ತ್ರಿ, ಚಿಗಟೇರಿ ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಮಂಜುನಾಥ ಪಾಟೀಲ್, ಜಿಲ್ಲಾಸ್ಪತ್ರೆಯ ಪಾರ್ಮಾಸಿಸ್ಟ್ ಶ್ರೀನಿವಾಸ ಮಠದ್, ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರಾಘವೇಂದ್ರ ನಾಯರಿ, ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿಗಳಾದ ಎಸ್.ವಿ.ರಾಮಕೃಷ್ಣ ನಾಯ್ಕ್, ಬಿ.ಎ.ಸುರೇಶ್, ಕೆ.ಶಶಿಕುಮಾರ್, ಕೆ.ವಿಶ್ವನಾಥ ಬಿಲ್ಲವ, ಸಿ.ಪರಶುರಾಮ್ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಕೆ.ರಾಘವೇಂದ್ರ ನಾಯರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

