ದಿನದ ಸುದ್ದಿ

ದಾವಣಗೆರೆ | ಅವಧಿ ಮುಗಿಯುವ ಗ್ರಾ.ಪಂ. ಚುನಾವಣಾ ವೇಳಾಪಟ್ಟಿ

Published

on

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗವು ಮೇ-2021ರ ಮಾಹೆಯವರೆಗೆ ಅವಧಿ ಮುಕ್ತಾಯಗೊಳ್ಳಲಿರುವ ದಾವಣಗೆರೆ ತಾಲ್ಲೂಕು ವ್ಯಾಪ್ತಿಗೆ ಒಳಪಟ್ಟ ಬೇತೂರು, ಕನಗೊಂಡನಹಳ್ಳಿ, ಕುಕ್ಕವಾಡ ಹಾಗೂ ಮಾಯಕೊಂಡ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಘೋಷಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದನ್ವಯ ಚುನಾವಣಾ ವೇಳಾಪಟ್ಟಿಯನ್ನು ಈ ಕೆಳಗಿನಂತೆ ಪ್ರಕಟಿಸಲಾಗಿದೆ.

ಮಾ.15 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ. ಮಾ.19 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ. ಮಾ.20 ರಂದು ನಾಮಪತ್ರಗಳನ್ನು ಪರಿಶೀಲಿಸುವ ದಿನವಾಗಿರುತ್ತದೆ.

ಇದನ್ನೂ ಓದಿ | ಚಂದನ ವಾಹಿನಿಯಲ್ಲಿ ಎಸ್‍ಸಿಎಸ್‍ಪಿ/ಟಿಎಸ್‍ಪಿ ಅರಿವು ಕಾರ್ಯಕ್ರಮ

ಮಾ.22 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ. ಮಾ.29 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸುವ ದಿನ. ಮಾ.30 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮರು ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ದಿನ.

ಮಾ.31 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಸುವ ಮತ್ತು ಚುನಾವಣಾ ಮುಕ್ತಾಯ ದಿನಾಂಕವಾಗಿರುತ್ತದೆ ಎಂದು 108-ಮಾಯಕೊಂಡ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ತಹಶೀಲ್ದಾರ್ ಬಿ.ಎನ್ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version