ದಿನದ ಸುದ್ದಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಹಳೇಬಿಸಲೇರಿಯಲ್ಲಿ ಎನ್ ಎಸ್ ಎಸ್ ಶಿಬಿರ

Published

on

ಸುದ್ದಿದಿನ, ದಾವಣಗೆರೆ : ಕಠಿಣ ಪರಿಶ್ರಮ ಮತ್ತು ಆತ್ಮ ವಿಶ್ವಾಸವು ಸಾಧನೆಯ ಸಾಧನವಿದ್ದಂತೆ ಎಂದು ಶ್ರೀ ಮತಿ ಗೌರಮ್ಮ ಕುಂದುರ್ ವೀರಭದ್ರಪ್ಪ ಟ್ರಸ್ಟ್ ನ ಅಧ್ಯಕ್ಷರಾದ ಬಸವನ ಗೌಡರು ಅಭಿಪ್ರಾಯ ವ್ಯಕ್ತಪಡಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ, ಮುದಹದಡಿ ಗ್ರಾಮ ಪಂಚಾಯಿತಿ ಮತ್ತು ಹಳೆಬಿಸಲೇರಿ ಹಾಗೂ ದುರ್ಗಾಂಬಿಕ ಕ್ಯಾಂಪ್ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಏಳು ದಿನಗಳ ಕಾಲ ಹಮ್ಮಿಕೊಂಡಿರುವ ಶಿಬಿರವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಮತವನ್ನು ಹಣಕ್ಕಾಗಿ ಮಾರಿ ಕೊಳ್ಳಬೇಡಿ. ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವುದರ ಮೂಲಕ ಸಮಾಜಕ್ಕೆ ಮಾದರಿಯಾಗ ಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ದಾವಣಗೆರೆ ವಿಶ್ವವಿದ್ಯಾಲಯದ ಎನ್ ಎಸ್ ಎಸ್ ಸಂಯೋಜನಾಧಿಕಾರಿ ಡಾ. ಅಶೋಕ್ ಕುಮಾರ್ ವೀ ಪಾಳೇಗಾರ, ರಾಜ್ಯ ಪ್ರಶಸ್ತಿ ವಿಜೇತರಾದ ಪರಶುರಾಮ್ ಖಟಾವ್ ಕರ್ ಎನ್ ಎಸ್ ಎಸ್ ನ ಪ್ರಾಮುಖ್ಯತೆಯ ಬಗ್ಗೆ ಅಭಿಪ್ರಾಯ ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಅಂಜನಪ್ಪ ಎಸ್.ಆರ್, ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಕೆ. ನಾರಾಯಣಸ್ವಾಮಿ, ಪತ್ರಾಂಕಿತ ವ್ಯವಸ್ಥಾಪಕಿ ಗೀತಾದೇವಿ ಉಪಸ್ಥಿತರಿದ್ದರು.

ಮುದಹದಡಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಕೆ.ಬಿ. ನೀಲಮ್ಮ ಜರೇಕಟ್ಟೆ ಗ್ರಾಮದ ಯುವಮುಖಂಡ ಡಾ.ಸಾಗರ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಎನ್ ಎಸ್ ಎಸ್ ಶಿಭಿರಾಧಿಕಾರಿ ಗುರುದೇವ ಎಸ್ ಎಂ ಸ್ವಾಗತಿಸಿದರು, ಸಹ ಶಿಬಿರಾಧಿಕಾರಿ ಡಾ‌ಗೌರಮ್ಮ ಎಂ,ಎಸ್ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Trending

Exit mobile version