ದಿನದ ಸುದ್ದಿ
ದಾವಣಗೆರೆ ಜಿಲ್ಲಾದ್ಯಂತ ಉತ್ತಮ ಮಳೆ
ಸುದ್ದಿದಿನ,ದಾವಣಗೆರೆ : ಜಿಲ್ಲಾದ್ಯಂತ ಉತ್ತಮ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಸದರಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಕಾರ್ಯಕ್ಕೆ ಕೃಷಿ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಈಗಾಗಲೇ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ.
2 ಲಕ್ಷ 50 ಸಾವಿರ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಈ ಬಾರಿ 1 ಲಕ್ಷದ 30 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೇಜೋಳ, 17 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯ ಬಿತ್ತನೆ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243