Connect with us

ದಿನದ ಸುದ್ದಿ

ದಾವಣಗೆರೆ | ಸರ್ಕಾರದ ವೆಬ್‍ಪೋರ್ಟಲ್‍ನಲ್ಲಿ ಐಎಲ್‍ಐ, ಎಸ್‍ಎಆರ್‍ಐ ಪ್ರಕರಣ ಅಪ್‍ಡೇಟ್ ಮಾಡದಿರುವ ಆಸ್ಪತ್ರೆ-ನರ್ಸಿಂಗ್‍ಹೋಂಗಳ ತಾತ್ಕಾಲಿಕ ಸೀಜ್

Published

on

ಸುದ್ದಿದಿನ,ದಾವಣಗೆರೆ : ಸರ್ಕಾರದ ಆದೇಶದಂತೆ ಆಸ್ಪತ್ರೆಗಳಿಗೆ ಬರುವವರಲ್ಲಿ ಶೀತ, ಜ್ವರದಂತಹ (ಐಎಲ್‍ಐ) ಮತ್ತು ತೀವ್ರ ಉಸಿರಾಟದ ತೊಂದರೆ(ಎಸ್‍ಎಆರ್‍ಐ) ಪ್ರಕರಣಗಳನ್ನು ಪ್ರತಿದಿನ ಆರೋಗ್ಯ ಇಲಾಖೆಯ ವೆಬ್‍ಪೋರ್ಟಲ್‍ಗೆ ಅಪ್‍ಡೇಟ್ ಮಾಡದೇ ಇರುವ ನಗರದ ವಿವಿಧ ಖಾಸಗಿ ಆಸ್ಪತ್ರೆಗಳಿಗೆ ಇಂದು ಡಿಹೆಚ್‍ಓ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಂತಹ ಆಸ್ಪತ್ರೆ/ನರ್ಸಿಂಗ್ ಹೋಂಗಳನ್ನು ತಾತ್ಕಾಲಿಕವಾಗಿ ಸೀಜ್ ಮಾಡಲಾಯಿತು.

ಮೊದಲಿಗೆ ಪಿಜೆ ಬಡಾವಣೆಯಿಂದ ಆರಂಭಿಸಿ ಕೆ.ಬಿ.ಬಡಾವಣೆ, ಬೇತೂರು ರಸ್ತೆ ಗಳಲ್ಲಿನ ಒಟ್ಟು 11 ಆಸ್ಪತ್ರೆಗಳಿಗೆ ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ ಮತ್ತು ತಂಡ ಭೇಟಿ ನೀಡಿ ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣಗಳಲ್ಲಿ ಪ್ರತಿದಿನ ಏಕೆ ವೆಬ್‍ಪೋರ್ಟಲ್‍ನಲ್ಲಿ ಹಾಕುತ್ತಿಲ್ಲವೆಂದು ವಿಚಾರಿಸಿ, ಹೀಗೆ ಅಪ್‍ಡೇಟ್ ಮಾಡದೇ ಇರುವ ಈ ಆಸ್ಪತ್ರೆಗಳನ್ನು ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾತ್ಕಾಲಿಕವಾಗಿ ಸೀಜ್ ಮಾಡಿದರು.

ಈ ವೇಳೆ ಡಿಹೆಚ್‍ಓ ಡಾ.ರಾಘವೇಂದ್ರ ಸ್ವಾಮಿ ಮಾತನಾಡಿ, ಸರ್ಕಾರದ ಆದೇಶದ ಮೇರೆಗೆ ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿಂದ ಆರೋಗ್ಯ ನಿರ್ದೇಶನಾಲಯದ ಆಯುಕ್ತರು, ಕಾರ್ಯದರ್ಶಿಗಳು ಆದೇಶ ಹೊರಡಿಸಿ, ಕೆಪಿಎಂಇ ಕಾಯ್ದೆ ಅಡಿ ನೋಂದಣಿಯಾದ ಪ್ರತಿ ಖಾಸಗಿ ಆಸ್ಪತ್ರೆಗಳಿಗೆ ಯೂಸರ್ ಐಡಿ, ಪಾಸ್‍ವರ್ಡ್ ನೀಡಿ ಆನ್‍ಲೈನ್ ಮೂಲಕ ತಮ್ಮ ಆಸ್ಪತ್ರೆಗಳಿಗೆ ಬರುವ ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣಗಳನ್ನು ಅಪ್‍ಡೇಟ್ ಮಾಡಬೇಕೆಂದು ತಿಳಿಸಲಾಗಿತ್ತು. ಹೀಗೆ ಅಪ್‍ಡೇಟ್ ಮಾಡಿದ ವರದಿಯು ಸ್ಟೇಟ್ ಪೋರ್ಟಲ್‍ನಿಂದ ತಳಮಟ್ಟದವರೆಗೆ ಅಂದರೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ತಲುಪಿಸಿ ಅವರ ವ್ಯಾಪ್ತಿಯಲ್ಲಿ ಬರುವವರಿಗೆ ಗಂಟಲು ದ್ರವ ಪರೀಕ್ಷೆಗೆ ಸಹಕಾರಿಯಾಗುವುದು ಈ ಯೋಜನೆಯ ಉದ್ದೇಶವಾಗಿದೆ.

ಜಿಲ್ಲಾಧಿಕಾರಿಗಳು ಈ ಬಗ್ಗೆ ಐಎಂಎ, ಖಾಸಗಿ ಆಸ್ಪತ್ರೆಯವರೊಂದಿಗೆ ಸಭೆ ನಡೆಸಿ ಪ್ರತಿದಿನ ಮಾಹಿತಿ ಅಪ್‍ಡೇಟ್ ಮಾಡುವಂತೆ ತಿಳಿಸಿದ್ದರು. ಜೊತೆಗೆ ಅಪ್‍ಡೇಟ್ ಮಾಡಿದವರಿಗೆ ನೋಟಿಸನ್ನೂ ಸಹ ನೀಡಲಾಗಿದ್ದರೂ ಕೆಲವರು ಅಪ್‍ಡೇಟ್ ಮಾಡುತ್ತಿಲ್ಲ. ಆದ ಕಾರಣ ಜಿಲ್ಲಾಧಿಕಾರಿಗಳು ಹೀಗೆ ನಿರ್ಲಕ್ಷ್ಯ ವಹಿಸಿದವರ ಆಸ್ಪತ್ರೆ/ನರ್ಸಿಂಗ್ ಹೋಂಗಳನ್ನು ತಾತ್ಕಾಲಿಕವಾಗಿ ಸೀಜ್ ಮಾಡುವಂತೆ ಜೂ.30 ರಂದು ಆದೇಶಿಸಿದ ಹಿನ್ನೆಲೆಯಲ್ಲಿ ಇಂದು ದಾಳಿ ನಡೆಸಲಾಗಿದೆ.

ಜಿಲ್ಲೆಯಲ್ಲಿ ಐಎಲ್‍ಐ ಮತ್ತು ಎಸ್‍ಎಆರ್‍ಐ ಪ್ರಕರಣ ಅಪ್‍ಡೇಟ್ ಮಾಡದ 170 ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಕೆಪಿಎಂಇ ಅಡಿಯಲ್ಲಿ ನವೀಕರಿಸದ ಮತ್ತು ಐಎಲ್‍ಐ ಎಸ್‍ಎಆರ್‍ಐ ಪ್ರಕರಣ ವೆಬ್‍ಪೋರ್ಟಲ್‍ಲ್ಲಿ ದಾಖಲಿಸದೇ ಇರುವ ಒಟ್ಟು 280 ಆಸ್ಪತ್ರೆ/ನರ್ಸಿಂಗ್ ಹೋಂಗಳಿಗೆ ನೋಟಿಸ್ ನೀಡಲಾಗಿದೆ. ಕೆಲವು ಆಸ್ಪತ್ರೆ/ನರ್ಸಿಂಗ್ ಹೋಂಗಳಿಗೆ ನವೀಕರಿಸುವಲ್ಲಿ ಕೆಲವು ಸಮಸ್ಯೆಗಳಿವೆ.

ಇವುಗಳಿಗೆ ಪರಿಹಾರೋಪಾಯಗಳ ಬಗ್ಗೆ ಜು.3 ರಂದು ಡಿಹೆಚ್‍ಓ ಕಚೇರಿಯಲ್ಲಿ ಖಾಸಗಿ ಆಸ್ಪತ್ರೆಯವರಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲರೂ ಹಾಜರಾಗಿ ಇದರ ಸದುಪಯೋಗ ಪಡೆಯಬೇಕು. ಹಾಗೂ ಇನ್ನು 15 ದಿನಗಳ ಒಳಗೆ ನೋಂದಣಿ ನವೀಕರಿಸಿಕೊಂಡು ಸರ್ಕಾರದ ಆದೇಶದಂತೆ ನಡೆಯಬೇಕೆಂಬುದು ನಮ್ಮ ಆಶಯವಾಗಿದೆ ಎಂದರು.

ತಂಡದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಕಾರಾಧ್ಯ, ಬಿಇಹೆಚ್‍ಓ ಡಾ.ಸುರೇಶ್, ಇತರೆ ಸಿಬ್ಬಂದಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.

ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

Trending