Connect with us

ದಿನದ ಸುದ್ದಿ

ದಾವಣಗೆರೆ | ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಶಂಕುಸ್ಥಾಪನೆ : ಬಿ.ಶ್ರೀರಾಮಲು

Published

on

ಸುದ್ದಿದಿನ,ದಾವಣಗೆರೆ : ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಇಂದು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮಥ್ರ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ ಜು.04 ರಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಇವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ.

ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ ಅವಧಿ ಅಂದರೆ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು, ಶಾಸಕರೆಲ್ಲ ಸೇರಿ ಉದ್ಘಾಟನೆಯನ್ನು ಸಹ ನೆರವೇರಿಸುವೆವು ಎಂದ ಅವರು ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ಒಂದು ನಯಾಪೈಸೆಯ ಅವ್ಯಹಾರ ಆಗಿಲ್ಲ. ಪ್ರಶಂಸನೀಯವಾಗಿ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ದರಿದ್ದೇವೆ. ಶ್ವೇತ ಪತ್ರ ಹೊರಡಿಸಿದರೂ ಸಿದ್ದರಾಗಿದ್ದೇವೆ.

ಮಾನ್ಯ ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ಸಹ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು ಎಂದ ಅವರು ಕೋವಿಡ್ ನಿರ್ವಹಣೆ ವಿಷಯವಾಗಿ ವಿಶ್ವವೇ ಭಾರತದ ಕೆಲಸವನ್ನು ಶ್ಲಾಘಿಸುತ್ತಿದೆ ಎಂದರು.

ಈ ವೇಳೆ ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಪ್ರೊ.ಲಿಂಗಣ್ಣ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪೂರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾಸ್ಪತ್ರೆ ಡಿಎಸ್ ಡಾ.ನಾಗರಾಜ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್, ಮಾಯಕೊಂಡ ವ್ಯಾಪ್ತಿ ; 20 ಕೋಟಿ ಅನುದಾನ : ತನಿಖೆಗೆ ಒಳಪಡಿಸಲು ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಕೆ‌ಆರ್.ಐ.ಡಿ.ಎಲ್  ವಿಭಾಗ-2ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆ ಮಾಯಕೊಂಡ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬಿಡುಗಡೆಯಾದ ರೂ. 20 ಕೋಟಿ ಮೊತ್ತದ 51 ಕಾಮಗಾರಿಗಳನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಮಾಯಕೊಂಡ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ 2023-24ನೇ ಸಾಲಿನಲ್ಲಿ ಬಿಡುಗಡೆಯಾಗಿರುವ ರೂ. 20 ಕೋಟಿ ಅನುದಾನದಲ್ಲಿ ನಡೆದಿರುವ 51 ಕಾಮಗಾರಿಗಳ ಬಗ್ಗೆ ಅನುಮಾನ ಕಂಡುಬಂದಿದ್ದು, ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಕೋರಿದಾಗ ಬಹುತೇಕ ಕಾಮಗಾರಿಗಳು ನಡೆದಿರುವುದಿಲ್ಲ ಎಂಬುದಾಗಿ ಹಿಂಬರಹ ನೀಡಿರುತ್ತಾರೆ. ಹೀಗಾಗಿ 51 ಕಾಮಗಾರಿಗೆ ಸಂಬಂಧಿಸಿದಂತೆ ನಿತೀನ್ ಎಸ್. ಜಾಧವ್, ಸಹಾಯಕ ಕಾರ್ಯಪಾಲಕ ಅಭಿಯಂತರು, ಕೆ.ಆರ್.ಐ.ಡಿ.ಎಲ್, ಮಾಯಕೊಂಡ ಇವರ ವಿರುದ್ಧ ಪ್ರಕರಣ ದಾಖಲಿಸಿ ರೂ. 20 ಕೋಟಿ ಮೊತ್ತದಲ್ಲಿ ನಡೆದಿರುವ 51 ಕಾಮಗಾರಿಗಳನ್ನು ನಿಯಮಾನುಸಾರ ತನಿಖೆಗೆ ಒಳಪಡಿಸುವಂತೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಲೇಜು ಶಿಕ್ಷಣ ಇಲಾಖೆ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕ ಹುದ್ದೆಗೆ ನೀಡಿರುವ ಮುಂಬಡ್ತಿಯ ಸ್ಥಳ ನಿಯುಕ್ತಿಗೆ ಸಂಬAಧಿಸಿದ ಆನ್‌ಲೈನ್ ಕೌನ್ಸಿಲಿಂಗ್‌ನಲ್ಲಿ ಪಾರದರ್ಶಕತೆಯನ್ನು ಉಲ್ಲಂಘಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಅಡಿಯಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ಲೋಕಾಯುಕ್ತಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳನ್ನು ಸೇವಾ ಜೇಷ್ಠತೆ ಹಾಗೂ ಅರ್ಹತೆ ಆಧಾರದ ಮೇಲೆ ಅರ್ಹ ದ್ವಿತೀಯ ದರ್ಜೆ ಸಹಾಯಕರ ವೃಂದದಿAದ ಮುಂಬಡ್ತಿ ಮೂಲಕ ಭರ್ತಿ ಮಾಡಲು ಮುಂದಾಗಿದ್ದು, ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ದಿನಾಂಕ: 12-11-2025 ರಂದು ಆನ್‌ಲೈನ್ ಕೌನ್ಸಿಲಿಂಗ್ ನಡೆಸಿ, ಸ್ಥಳ ನಿಯುಕ್ತಿ ಮಾಡಿ, ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡ ಪ್ರಥಮ ದರ್ಜೆ ಸಹಾಯಕರ ಪಟ್ಟಿಯನ್ನು ಬಿಡುಗಡೆಗೊಸಲಾಗಿರುತ್ತದೆ.

ಆದರೆ ಕಾಲೇಜು ಶಿಕ್ಷಣ ಇಲಾಖೆಯಿಂದ ಹೊರಡಿಸಿರುವ ಪಟ್ಟಿಯಲ್ಲಿ ಆಯುಕ್ತರ ಕಛೇರಿ, ಬೆಂಗಳೂರು ಇಲ್ಲಿ 03 ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಯನ್ನು ಗುರುತಿಸಲಾಗಿರುತ್ತದೆ. ಆದರೆ ಆದೇಶ ಪ್ರತಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಮುಂಬಡ್ತಿಯಲ್ಲಿ 10 ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಆಯ್ಕೆ ಮಾಡಿಕೊಂಡಿರುವ 10 ಅಭ್ಯರ್ಥಿಗಳಲ್ಲಿ 05 ಅಭ್ಯರ್ಥಿಗಳನ್ನು ದ್ವಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮುಂಬಡ್ತಿ ನೀಡಿ ಯಥಾ ಪ್ರಕಾರ ಮುಂದುವರೆಸಲಾಗಿರುತ್ತದೆ.

ಹೀಗಾಗಿ ಸದರಿ ಮುಂಬಡ್ತಿ ಪ್ರಕ್ರಿಯೆಯು ನಿಯಮಬಾಹಿರವಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿ 10 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾಲೇಜು ಶಿಕ್ಷಣ ಇಲಾಖೆಯ ಹಿಂದಿನ ಆಯುಕ್ತೆ ಮಂಜುಶ್ರೀ, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಖುಷ್ಬೂ ಗೋಯಲ್ ಚೌದರಿ ವಿರುದ್ಧ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending