ದಿನದ ಸುದ್ದಿ

ದಾವಣಗೆರೆ | ಕರ್ತವ್ಯ ಲೋಪ ಮತ್ತು ಭ್ರಷ್ಟಚಾರ ಆರೋಪ : ಸಿ.ಇ.ಒ ಇಟ್ನಾಳ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

Published

on

ಫೋಟೋ : ರಾಮ ಭೋವಿ -ಇಒ | ಸುರೇಶ್ ಬಿ.ಇಟ್ನಾಳ್-ಸಿಇಒ | ಕೃಷ್ಣನಾಯ್ಕ್ ಎಲ್ -ಡಿಎಸ್

ಸುದ್ದಿದಿನ,ದಾವಣಗೆರೆ:ಕರ್ತವ್ಯ ಲೋಪ ಮತ್ತು ಭ್ರಷ್ಟಚಾರ ಆರೋಪದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ವಿರುದ್ಧ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಗುರುವಾರ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಮತ್ತು ಕುಂದು ಕೊರತೆ ಸಭೆಯಲ್ಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರಿಗೆ ದೂರು ಸಲ್ಲಿಸಲಾಗಿದ್ದು, ಪ್ರಕರಣ ದಾಖಲಿಸಿ ಅದನ್ನು ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ವರ್ಗಾಹಿಸಿರುತ್ತಾರೆ.

ದಾವಣಗೆರೆ ತಾಲ್ಲೂಕು ಪಂಚಾಯಿತಿಯ 2023-24ನೇ ಸಾಲಿನ ಅನಿರ್ಭಂದಿತ ಅನುದಾನಕ್ಕೆ ಸಂಬಂಧಿಸಿದಂತೆ ಅಂದಾಜು ಮೊತ್ತ ರೂ. 37 ಲಕ್ಷ ವೆಚ್ಚದಲ್ಲಿ ನಡೆದಿರುವ ಸಾಮಾಗ್ರಿ ಖರೀದಿಯಲ್ಲಿನ ಅವ್ಯವಹಾರ, ವಿವಿಧ ದೂರು ಅರ್ಜಿಗಳಿಗೆ ಸಂಬಂಧಿಸಿದಂತೆ ನಿಗಧಿತ ಕಾಲಾವಧಿಯಲ್ಲಿ ಯಾವುದೇ ಕ್ರಮ ವಹಿಸದೆ ಕರ್ತವ್ಯ ನಿರ್ಲಕ್ಷ್ಯ ಹಾಗೂ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ 2020-21ನೇ ಸಾಲಿನಲ್ಲಿ ನಡೆದಿರುವ ರೂ. 78,56,100 ಮೊತ್ತದ ಸಾಮಾಗ್ರಿ ಖರೀದಿಯ ವ್ಯವಹಾರವನ್ನು ಇಲಾಖಾ ತನಿಖೆ ನಡೆಸಿ ವರದಿ ನೀಡುವಂತೆ ದೂರು ನೀಡಿ 3 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ಇರುವುದನ್ನು ಪ್ರಶ್ನಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ವಿರುದ್ಧ ದೂರು ದಾಖಲಿಸಿದ್ದಾರೆ.

ಅಧಿಕಾರಿಗಳಾದ ರಾಮಭೋವಿ ಮತ್ತು ಕೃಷ್ಣನಾಯ್ಕ್. ಎಲ್ ವಿರುದ್ಧವೂ ದೂರು

ದಾವಣಗೆರೆ ತಾಲ್ಲೂಕು ಪಂಚಾಯಿತಿಯ 2023-24ನೇ ಸಾಲಿನ ಅನಿರ್ಭಂದಿತ ಅನುದಾನಕ್ಕೆ ಸಂಬಂಧಿಸಿದಂತೆ ಅಂದಾಜು ಮೊತ್ತ ರೂ. 37 ಲಕ್ಷ ವೆಚ್ಚದಲ್ಲಿ ನಡೆದಿರುವ ಸಾಮಾಗ್ರಿ ಖರೀದಿಯಲ್ಲಿನ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ಮತ್ತು ಜಿಲ್ಲಾ ಪಂಚಾಯಿತಿ, ಉಪ ಕಾರ್ಯದರ್ಶಿ ಕೃಷ್ಣನಾಯ್ಕ್ ಎಲ್ ಅವರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version