ದಿನದ ಸುದ್ದಿ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಉದ್ಯೋಗ ಮೇಳ’
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಾಳೆ (20ನೇತಾರೀಕು ಗುರುವಾರ) ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ 28 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023 -24 ಮತ್ತು 2024- 25 ನೇ ಸಾಲಿನಲ್ಲಿ ಪದವಿಯೊಂದಿಗೆ ಕಲಿಕೆ ಜೊತೆ ಕೌಶಲ್ಯ ತರಬೇತಿ ಪಡೆದಿರುವ ಅಭ್ಯರ್ಥಿಗಳಿಗಾಗಿ ಉದ್ಯೋಗ ಮೇಳವನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಪ್ಲೇಸ್ಮೆಂಟ್ ಸೆಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಕಛೇರಿಯ ಜಂಟಿ ನಿರ್ದೇಶಕರಾದ ಪ್ರೊ ಎಚ್ ಕೇಶವ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಕಾರ್ಯಕಾರಿ ನಿರ್ದೇಶಕರಾಗಿರುವ ಶ್ರೀಮತಿ ಸುಮತಿ ಬಿಎಸ್ ರವರು ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಕಲಿಕೆ ಜೊತೆ ಕೌಶಲ್ಯದ ನೋಡಲು ಅಧಿಕಾರಿ ಪ್ರೋ ನಾಗೇಶ್ ರವರು ಮತ್ತು ದಾವಣಗೆರೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಾ. ಸಿದ್ದೇಶ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ಬಿ ಸಿ ತಹಸಿಲ್ದಾರ್ ಅವರು ವಹಿಸುವರು ಕಾರ್ಯಕ್ರಮದಲ್ಲಿ ಸಂಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾಗರಾಜ್ ತಳವಾರ್ ಪ್ಲೇಸ್ಮೆಂಟ್ ಅಧಿಕಾರಿ ಡಾ. ವೆಂಕಟೇಶ್ ಬಾಬು ಎಸ್ ಐ ಯು ಎ ಸಿ ಸಂಚಾಲಕರಾದ ಡಾ. ಗುರುರಾಜ ಜೆ ಪಿ ಹಾಗೂ ಕಚೇರಿ ಅಧೀಕ್ಷಕರಾದ ಶ್ರೀಮತಿ ಪ್ರತಿಬಾ ರವರು ಉಪಸ್ಥಿತರಿರುವರು ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243