ದಿನದ ಸುದ್ದಿ

ದಾವಣಗೆರೆ | ಜೂನ್ 1ರಂದು ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಪ್ರವೇಶ ಪರೀಕ್ಷೆ

Published

on

ಸುದ್ದಿದಿನ,ದಾವಣಗೆರೆ:2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ, ಕಾಲೇಜು ಮತ್ತು ಮಾದರಿ ಶಾಲೆ, ಪದವಿ ಪೂರ್ವ ಕಾಲೇಜುಗಳಲ್ಲಿ ತಾತ್ಕಾಲಿಕ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರಿಗೆ ಜೂನ್ 1 ರಂದು ನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಎ.ವಿ.ಕಮಲಮ್ಮ ಮಹಿಳಾ ಕಾಲೇಜು, ಇಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು.

ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಚೇರಿಯಲ್ಲಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆದು ಪರೀಕ್ಷೆಗೆ ಹಾಜರಾಗುವಂತೆ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version