ದಿನದ ಸುದ್ದಿ
ದಾವಣಗೆರೆಯಿಂದ ಈ ಜಿಲ್ಲೆಗಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸೌಲಭ್ಯವಿದೆ
ಸುದ್ದಿದಿನ,ದಾವಣಗೆರೆ: ಕೋವಿಡ್ 19 ಪ್ರಯುಕ್ತ ಮೇ 19 ರಿಂದ ಬೆಳಿಗ್ಗೆ 07 ಗಂಟೆಯಿಂದ ರಾತ್ರಿ 07 ರವರೆಗೆ ಸರ್ಕಾರದ ಆದೇಶದಂತೆ ಸೋಂಕು ಹರಡದಂತೆ ಕ್ರಮಗಳನ್ನು ಕೈಗೊಂಡು ಕೆಎಸ್‍ಆರ್‍ಟಿಸಿ ವಾಹನಗಳ ಕಾರ್ಯಾಚರಣೆ ಮಾಡಲಾಗುವುದು.
ಆದ ಕಾರಣ ಮೇ 19 ರಿಂದ ಜಾರಿಗೆ ಬರುವಂತೆ ದಾವಣಗೆರೆ ವಿಭಾಗದ 03 ಘಟಕಗಳಿಂದ ಒಟ್ಟು 50 ವಾಹನಗಳನ್ನು ಕಾರ್ಯಾಚರಣೆ ಮಾಡಲು ಆಯೋಜಿಸಲಾಗಿದ್ದು, ಮೊದಲ ಹಂತದಲ್ಲಿ ದಾವಣಗೆರೆಯಿಂದ ಬೆಂಗಳೂರು, ಶಿವಮೊಗ್ಗ, ಚಿತ್ರದುರ್ಗ, ಹರಪನಹಳ್ಳಿ, ಹೊಸಪೇಟೆ, ಹುಬ್ಬಳ್ಳಿ ಹಾಗೂ ದಾವಣಗೆರೆ ನಗರ ಸಾರಿಗೆ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡಲು ಉದ್ದೇಶಿಲಾಗಿರುತ್ತದೆ.
ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮತ್ತು ಸಹ ಪ್ರಯಾಣಿಕರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಥರ್ಮಲ್ ಸ್ಕ್ಯಾನರ್ ತಪಾಸಣೆಗೆ ಒಳಪಡಿಸಲಾಗುವುದು. ಆದ್ದರಿಂದ ಚಾಲಕ ಹಾಗೂ ನಿರ್ವಾಹಕರೊಂದಿಗೆ ಸಹಕರಿಸಬೇಕು. ಗುರುತಿನ ಚೀಟಿಯೊಂದಿಗೆ ಪ್ರಯಾಣಿಸಬೇಕು. ಮತ್ತು ಬಸ್ಸು ನಿಲ್ದಾಣದಲ್ಲಿ ಉಗುಳಬಾರದು ಎಂದು ದಾವಣಗೆರೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243