ದಿನದ ಸುದ್ದಿ

ಕ.ರಾ.ರ.ಸಾ.ನಿಗಮ ದಾವಣಗೆರೆ ವಿಭಾಗದದಿಂದ ವಾಹನಗಳ ಕಾರ್ಯಾಚರಣೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ, ವಿಭಾಗದಿಂದ ದಾವಣಗೆರೆ-ಜಗಳೂರು ಮಾರ್ಗದಲ್ಲಿ ವಿದ್ಯಾರ್ಥಿಗಳು, ಹಿರಿಯ ನಾಗರಿಕರು, ಅಂಗವಿಕಲರು ಮತ್ತು ಸಾರ್ವಜನಿಕರ, ಪ್ರಯಾಣಿಕರ ಹಿತದೃಷ್ಟಿಯಿಂದ ವಾಹನ ಕಾರ್ಯಾಚರಣೆ ಮಾಡಲಾಗುತ್ತಿದೆ.

ಈ ವಾಹನಗಳ ಕಾರ್ಯಾಚರಣೆಯನ್ನು ಕೆಎಸ್‍ಆರ್‍ಟಿಸಿ ದಾವಣಗೆರೆ ಹೊಸ ಬಸ್ ನಿಲ್ದಾಣದಿಂದ ಮಾಡಲಾಗುತ್ತಿದ್ದು, ದಾವಣಗೆರೆಯಿಂದ-ಜಗಳೂರಿಗೆ ಮತ್ತು ಜಗಳೂರಿನಿಂದ–ದಾವಣಗೆರೆಗೆ ಪ್ರತಿ 15 ನಿಮಿಷಗಳಿಗೊಮ್ಮೆ ವಾಹನ ಸೌಲಭ್ಯವಿರುತ್ತದೆ.

ಸಾರ್ವಜನಿಕ ಪ್ರಯಾಣಿಕರು ಬಸ್ ನಿಲ್ದಾಣದಿಂದ ಕಾರ್ಯಾಚರಣೆಯಾಗುವ ನಿಗಮದ ವಾಹನಗಳಲ್ಲಿ ಪ್ರಯಾಣಿಸಬೇಕೆಂದು ದಾವಣಗೆರೆ ವಿಭಾಗದ ಕ.ರಾ.ರ.ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version