ದಿನದ ಸುದ್ದಿ
ದಾವಣಗೆರೆ | ಗ್ಯಾಸ್ ಸಿಲಿಂಡರ್ ವಿತರಕನ ಮೇಲೆ ಪೊಲೀಸರಿಂದ ಹಲ್ಲೆ ; ಆರೋಪ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/04/Davangere_police_lati_charge_suddidina.jpg&description=ದಾವಣಗೆರೆ | ಗ್ಯಾಸ್ ಸಿಲಿಂಡರ್ ವಿತರಕನ ಮೇಲೆ ಪೊಲೀಸರಿಂದ ಹಲ್ಲೆ ; ಆರೋಪ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/04/Davangere_police_lati_charge_suddidina.jpg&description=ದಾವಣಗೆರೆ | ಗ್ಯಾಸ್ ಸಿಲಿಂಡರ್ ವಿತರಕನ ಮೇಲೆ ಪೊಲೀಸರಿಂದ ಹಲ್ಲೆ ; ಆರೋಪ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಜಿಲ್ಲೆಯ, ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದ ಗ್ಯಾಸ್ ಸಿಲಿಂಡರ್ ವಿತರಕ ರಜಾಕ್ ಎಂಬುವವರ ಮೇಲೆ ಮಂಗಳವಾರ ಪೊಲೀಸರು ಥಳಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗ್ಯಾಸ್ ಸಿಲಿಂಡರ್ ವಿತರಕ ರಜಾಕ್ ಗ್ಯಾಸ್ ಸಿಲೆಂಡರನ್ನು ಸಾರ್ವಜನಿಕರಿಗೆ ವಿತರಿಸಲು ತಮ್ಮ ಬೈಕ್ ಅನ್ನು ರಿಪೇರಿ ಮಾಡಿಸಲು ಹೋದ ಸಂದರ್ಭದಲ್ಲಿ ಸಂತೇಬೆನ್ನೂರು ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ರಜಾಕ್ ಎಂಬುವವರಿಗೆ ಮನಸೋ ಇಚ್ಚೆ ಲಾಠಿ ಮೂಲಕ ಹೊಡೆದಿದ್ದಾರೆ ಎಂದು ದೂರಲಾಗಿದೆ.
ಘಟನೆ ವಿವರಣೆ
ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ನವಿಲೇಹಾಳು ಗ್ರಾಮದಲ್ಲಿ ಗ್ಯಾಸ್ ವಿತರಕ ರಜಾಕ್ ಮಂಗಳವಾರ ಸಂಜೆ ತಮ್ಮ ಬೈಕ್ ಅನ್ನು ರಿಪೇರಿ ಮಾಡಿಸಲು ಹೋಗಿರುತ್ತಾರೆ. ಆ ಸಂದರ್ಭದಲ್ಲಿ ಸಂತೇಬೆನ್ನೂರು ಠಾಣೆಯ ಸಿಬ್ಬಂದಿ ರಜಾಕ್ ಅವರನ್ನು ವಿಚಾರಿಸಿರುತ್ತಾರೆ. ರಜಾಕ್ ಅವರು ಗ್ಯಾಸ್ ಸಿಲಿಂಡರ್ ನಾಳೆ ವಿತರಿಸಬೇಕಿದೆ, ಆ ಕಾರಣಕ್ಕೆ ಬೈಕ್ ರಿಪೇರಿ ಮಾಡಿಸಲು ಬಂದಿದ್ದೇನೆ ಎಂದಿದ್ದಿರುತ್ತಾರೆ. ಆಗ ಪೋಲಿಸ್ ಸಿಬ್ಬಂದಿ ಶಿವರುದ್ರಪ್ಪ ಮೇಟಿ ಎಂಬುವವರು ಅವರ ಮಾತನ್ನು ಕಡೆಗಣಿಸಿ ಲಾಠಿ ಮೂಲಕ ರಜಾಕ್ ಅವರ ಕೈ, ಕಾಲು, ತೊಡೆಯ ಭಾಗಕ್ಕೆ ಮನಸೋ ಇಚ್ಚೆ ಥಳಿಸಿರುತ್ತಾರೆ.
ಲಾಠಿ ಚಾರ್ಜ್ ಮಾಡೋಹಾಗಿಲ್ಲ : ಹೈ ಕೋರ್ಟ್
ಲಾಕ್ ಡೌನ್ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಬಲವನ್ನು ಬಳಸುತ್ತಿದ್ದಾರೆ ಎಂಬ ಆರೋಪಗಳ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರು ಲಾಠಿಗಳನ್ನು ಬಳಸದಂತೆ ಸುತ್ತೋಲೆ ಹೊರಡಿಸಿದ್ದಾರೆ.
ಅದೇ ರೀತಿ ಡಿಜಿ ಮತ್ತು ಐಜಿ ಪೊಲೀಸ್ ಅಧಿಕಾರಿಗಳು ರಾಜ್ಯದಾದ್ಯಂತ ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿಗಳನ್ನು, ಸೂಚನೆಗಳನ್ನು ನೀಡಬೇಕು. ಪೊಲೀಸರ ಮೇಲೆ ಮೀತಿ ಮೀರಿ ವರ್ತಿಸುವ ಸಂಬಂಧಿಸಿದಂತೆ ಆರೋಪಗಳನ್ನು ಮಾಡುವ ಸಂದರ್ಭವಿಲ್ಲದಿರಬಹುದು. ಆದರೆ ಪೊಲೀಸರು ಲಾಠಿ ಚಾರ್ಜ್ ಮಾಡಬಾರದು ಎಂದು ನ್ಯಾಯಾಲಯ ಹೇಳಿದೆ.
ವಿಡಿಯೋ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ಅಂತರಂಗ4 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ7 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ2 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ4 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

