Connect with us

ದಿನದ ಸುದ್ದಿ

ದಾವಣಗೆರೆ | ಮೇ 17 ರವರೆಗೆ ಮದ್ಯ ಮಾರಾಟಕ್ಕೆ ಅವಕಾಶ : ಕೇವಲ ಪಾರ್ಸಲ್ ಮಾತ್ರ

Published

on

ಸುದ್ದಿದಿನ,ದಾವಣಗೆರೆ : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮೇ 4 ರಂದು ಜಾರಿ ಮಾಡಲಾಗಿದ್ದ ಮದ್ಯ ನಿಷೇಧ ಆದೇಶವನ್ನು ಹಿಂಪಡೆಯಲಾಗಿರುತ್ತದೆ.

ಪಾಲಿಕೆ ವ್ಯಾಪ್ತಿಯಲ್ಲಿ ಅಬಕಾರಿ ಆಯುಕ್ತಾಲಯದ ಆದೇಶದಂತೆ ಹಾಲಿ ಮುಚ್ಚಲಾಗಿರುವ ಸಿಎಲ್-4, ಸಿಎಲ್-7 ಮತ್ತು ಸಿಎಲ್-9 ಸನ್ನದುಗಳನ್ನು ಸಿಎಲ್-2 ಸನ್ನದುಗಳ ರೀತಿಯಲ್ಲಿ ಮೇ 17 ರವರೆಗೆ ಹಾಲಿ ಇರುವ ಮದ್ಯ/ಬಿಯರ್ ದಾಸ್ತಾನು ಖಾಲಿ ಆಗುವವರೆಗೆ ಅಥವಾ ಮೇ17 ರವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಕಾರ್ಯನಿರ್ವಹಿಸಲು ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಈ ಆದೇಶವು ಜಿಲ್ಲಾಡಳಿತವು ಘೋಷಿಸಿರುವ ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಇರುವಂತಹ ಸನ್ನದುಗಳಿಗೆ ಅನ್ವಯವಾಗುವುದಿಲ್ಲ ಮತ್ತು ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಮದ್ಯ ಮಾರಾಟ ಸನ್ನದುಗಳು ಕಾರ್ಯ ನಿರ್ವಹಿಸುವಂತಿಲ್ಲ.

ಕಾರ್ಯನಿರ್ವಹಿಸುವ ಸನ್ನದುಗಳು ಆದೇಶಿತ ಅವಧಿಯಲ್ಲಿ ಬೆಳಿಗ್ಗೆ 9 ರಿಂದ ಸಂಜೆ 7 ಗಂಟೆವರೆಗೆ ಮಾತ್ರವೇ ಮದ್ಯ ಮಹಿವಾಟನ್ನು ನಡೆಸುವುದು. ಉಳಿದಂತೆ ರೆಸ್ಟೋರೆಂಟ್‍ನಲ್ಲಿ ಕೇವಲ ಪಾರ್ಸಲ್ ರೂಪದಲ್ಲಿ ಮಾತ್ರ ನೀಡಲು ಅನುಮತಿ ನೀಡಲಾಗಿದೆ.

ಸನ್ನದು ಮಳಿಗೆಯಲ್ಲಿ ಕೇವಲ 5 ಜನರು ಮಾತ್ರ ಗ್ರಾಹಕರು ಇರುವಂತೆಯು ಹಾಗೂ ಅವರುಗಳು ಸಾಮಾಜಿಕ ಅಂತರವಾದ 6 ಅಡಿಗಳಿಗೆ ಕಡಿಮೆ ಇಲ್ಲದಂತೆ ಕಾಪಾಡಿಕೊಳ್ಳುವುದು ಸೇರಿದಂತೆ ಇತರೆ ಷರತ್ತುಗಳನ್ನು ಅನುಸರಿಸಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್ ಎಸ್ ಎಲ್ ಸಿ ಫಲಿತಾಂಶ | ಭರತ್ ಜಿ ರಾಜ್ಯಕ್ಕೆ ಪ್ರಥಮ ; ನನ್ನ ಕ್ಷೇತ್ರದ ವಿದ್ಯಾರ್ಥಿ ಸಾಧನೆಗೆ ಸಲ್ಯೂಟ್ ಶಾಸಕ ಕೆ.ಎಸ್.ಬಸವಂತಪ್ಪ ಹರ್ಷ

Published

on

ಸುದ್ದಿದಿನ,ದಾವಣಗೆರೆ:ಇವತ್ತು ನನಗೆ ಬಹಳ ಸಂತೋಷದ ದಿನ. ನನ್ನ ಕ್ಷೇತ್ರದ ಕಬ್ಬಳ ಗ್ರಾಮದ ಒಬ್ಬ ರೈತ ಕುಟುಂಬದಿಂದ ಬಂದ ಜಿ.ಭರತ್ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದಿರುವುದು ನನಗೆ ಬಹಳ ಹೆಮ್ಮೆ ತಂದಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು.

ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಶಾಲೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಜಿ.ಭರತ್ ಮತ್ತು ಪೋಷಕರನ್ನು ಅಭಿನಂದಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದ ವಿದ್ಯಾರ್ಥಿ ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸಂತಸದ ವಿಷಯ. ವಿದ್ಯಾ ಲಕ್ಷ್ಮಿ ಶಾಲೆಯವರು ಬಹಳ ಪ್ರಾಮಾಣಿಕವಾಗಿ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ತೋರಿಸಿ ಅವರನ್ನು ಉನ್ನತ ಮಟ್ಟಕ್ಕೆ ತರಲು ಶ್ರಮಿಸಿದ್ದಾರೆ ಎಂದು ಅಭಿನಂದನೆ ಸಲ್ಲಿಸಿದರು.

ನಮಗೆ ಮೊದಲ ಆದ್ಯತೆ ದೇಗುಲಗಳಿಗಿಂತ ಶಾಲೆಗಳಿಗೆ ಇರಬೇಕು. ಇಂತಹ ಶಾಲೆಯೆಂಬ ದೇಗುಲದಿಂದ ಹೊರ ಬರುವ ಭರತ್‌ನಂತಹ ಮಕ್ಕಳು ಮುಂದಿನ ದಿನಗಳಲ್ಲಿ ಈ ದೇಶದ ಉನ್ನತ ಅಧಿಕಾರಿಗಳಾಗಿ ಅಥವಾ ವಿಜ್ಞಾನಿಗಳಾಗಿ ಸೇವೆ ಸಲ್ಲಿಸುವಂತಾಗಲಿ ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏ 25 ರಂದು ಅಗ್ರಿಕಲ್ಚರ್ ಪ್ರಾಕ್ಟಿಕಲ್ ಪರೀಕ್ಷೆಗೆ ಉಚಿತ ತರಬೇತಿ

Published

on

ಸುದ್ದಿದಿನ,ದಾವಣಗೆರೆ : ನಗರದ ಧವನ್ ಕಾಲೇಜಿನಲ್ಲಿ Viksit47 ಅಕಾಡೆಮಿ ವತಿಯಿಂದ ಉಚಿತ ತರಬೇತಿ ಕಾರ್ಯಗಾರವನ್ನು ಇದೇ 25 ರಂದು ಆಯೋಜಿಸಲಾಗಿದೆ ಎಂದು ಮುಖ್ಯಸ್ಥರಾದ ತೇಜಸ್ ಹೆಚ್.ಎನ್ ಅವರು ತಿಳಿಸಿದ್ದಾರೆ.

ವೆಟರ್ನರಿ, ಬಿಎಸ್ಸಿ ಕೃಷಿ, ಬಿಎಸ್ಸಿ ತೋಟಗಾರಿಕೆ ಮುಂತಾದ 12 ಕೋರ್ಸುಗಳ ಪ್ರವೇಶಕ್ಕೆ ಕೃಷಿಕರ ಕೋಟಾದ ಅಡಿಯಲ್ಲಿ ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ರೈತರ ಮಕ್ಕಳಿಗೆ 50% ಮೀಸಲಾತಿ ಇರುತ್ತದೆ,ಈ ಮೀಸಲಾತಿಯನ್ನು ಪಡೆಯಲು KCET ಪರೀಕ್ಷೆಯ ಜೊತೆಗೆ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆಸುವ ಪ್ರಾಯೋಗಿಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಈ ಉಚಿತ ಕಾರ್ಯಗಾರದಲ್ಲಿ ಅಗ್ರಿ ಪ್ರಾಕ್ಟಿಕಲ್ ಪರೀಕ್ಷೆಯ ಕುರಿತು ಸಂಪೂರ್ಣ ತರಬೇತಿಯನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದ್ಬಿತೀಯ ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಈ ಸದುಪಯೋಗ ಪಡಿಸಿಕೊಳ್ಳಬೇಕು. ಅಕ್ಕ ಪಕ್ಕದ ಜಿಲ್ಲೆಯ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡಿಸಿಕೊಳ್ಳಬಹುದು,ಮತ್ತು ಕಾಲೇಜುಗಳ ಆಡಳಿತ ಮಂಡಳಿಯವರು ತಮ್ಮ ವಿದ್ಯಾರ್ಥಿಗಳನ್ನು ಈ ಉಚಿತ ಕಾರ್ಯಗಾರದಲ್ಲಿ ಭಾಗವಹಿಸುವಂತೆ ವಿನಂತಿಸಿದ್ದಾರೆ.

ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಮೊಬೈಲ್ ನಂ: 8217413646 ಗೆ ಕರೆಮಾಡಲು ಸೂಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚನ್ನಗಿರಿ | ಎಸ್ ಎಸ್ ಎಲ್ ಸಿ ಫಲಿತಾಂಶ ; ಕಬ್ಬಳ ಶಾಲೆಯ ವಿದ್ಯಾರ್ಥಿ ಭರತ್ ಜಿ ರಾಜ್ಯಕ್ಕೆ ಟಾಪರ್

Published

on

ಸುದ್ದಿದಿನ,ದಾವಣಗೆರೆ: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಣಿವೆಬಿಳಚಿ ಗ್ರಾಮದ ವಿದ್ಯಾರ್ಥಿ ಭರತ್ ಜಿ. ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

625ಕ್ಕೆ 625 ಅಂಕಗಳನ್ನು ಪಡೆದ ಭರತ್ ಅವರು ಕಬ್ಬಳ ಗ್ರಾಮದ ವಿದ್ಯಾಲಕ್ಷ್ಮಿ ಇಂಗ್ಲಿಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿ. ರಾಜ್ಯದ ಇತರ ಐದು ವಿದ್ಯಾರ್ಥಿಗಳೊಂದಿಗೆ ಅಗ್ರಸ್ಥಾನವನ್ನು ಭರತ್ ಅವರು ಹಂಚಿಕೊಂಡಿದ್ದಾರೆ. ಭರತ್ ಅವರ ತಂದೆ ಗಿರೀಶ್ ಕೃಷಿ ಹಾಗೂ ಗುತ್ತಿಗೆ ದಾರರು, ತಾಯಿ ಶಿಲ್ಪ ಗೃಹಿಣಿ.

ಗ್ರಾಮೀಣ ಭಾಗದಿಂದ ಬಂದ ಭರತ್ ರಾಜ್ಯಕ್ಕೆ ಟಾಪರ್ ಆಗಿ ದೊಡ್ಡ ಸಾಧನೆ ಮಾಡಿದ್ದಾರೆ.ನಮ್ಮ ಶಾಲೆಯು ಎರಡು ಬಾರಿ ಜಿಲ್ಲೆಗೆ ಹಾಗೂ ಎರಡು ಬಾರಿ ತಾಲ್ಲೂಕಿಗೆ ಟಾಪ‌ರ್ ಆಗಿತ್ತು. ಇದೀಗ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶಾಲೆಯು ನಿರಂತರವಾಗಿ ಸಾಧನೆ ಮಾಡುತ್ತಿದ್ದು ಈ ಬಾರಿಯೂ ಶೇ 100ರಷ್ಟು ಫಲಿತಾಂಶ ನೀಡಿದೆ ಎಂದು ಮುಖ್ಯ ಶಿಕ್ಷಕಿ ಲಕ್ಷ್ಮೀದೇವಿ ಎ.ಎನ್ ಹರ್ಷ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending