Connect with us

ದಿನದ ಸುದ್ದಿ

ದಾವಣಗೆರೆ ಲಾಕ್‍ಡೌನ್ ಸಡಿಲಿಕೆ | ಏನಿರುತ್ತೆ ; ಏನಿರಲ್ಲ : ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್ , ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನ,ದಾವಣಗೆರೆ : ಕೊರೊನಾ ವೈರಸ್ ಸೋಂಕಿನ ಮೂರು ಪ್ರಕರಣದಿಂದಾಗಿ ಆರೇಂಜ್ ಜೋನ್‍ನಲ್ಲಿದ್ದ ದಾವಣಗೆರೆ ಜಿಲ್ಲೆ ಸೋಮವಾರ ಗ್ರೀನ್ ಜೋನ್‍ಗೆ ಸೇರ್ಪಡೆಯಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಇಲಾಖೆಗಳಿಗೆ ಮತ್ತು ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಕೆಲ ನಿಬಂಧನೆ ಹಾಗೂ ಷರತ್ತುಗಳೊಂದಿಗೆ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರೀನ್ ಜೋನ್ ಘೋಷಣೆಯ ಉದ್ದೇಶ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಆರ್ಥಿಕ ಚಟುವಟಿಕೆಗಳು ನಡೆಯಲು ಅವಕಾಶ ಕಲ್ಪಿಸುವುದಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಹವಾನಿಯಂತ್ರಿತ ಸಲಕರಣೆ ಉಪಯೋಗಿಸದೆ ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಬಹುದಾಗಿದೆ ಎಂದರು.

ನಿಯಮದ ಪ್ರಕಾರ ಕೊನೆಯ ಪಾಸಿಟಿವ್ ಪ್ರಕರಣ ವರದಿ ನಂತರದ 28 ದಿನಗಳ ಅವಧಿಯಲ್ಲಿ ಯಾವುದೇ ಪ್ರಕರಣ ವರದಿಯಾಗದಿದ್ದರೆ ಅದನ್ನು ಗ್ರೀನ್ ಜೋನ್‍ಗೆ ಸೇರಿಸಲಾಗುತ್ತದೆ. ಮಾ.27ರ ನಂತರ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ ಜಿಲ್ಲೆಯೂ ಗ್ರೀನ್ ಜೋನ್ ಎಂದು ಘೋಷಿಸಲಾಗಿದೆ ಎಂದರು.

ಏನಿರುತ್ತೆ

  1. ಮುನ್ಸಿಪಲ್ ಕಾರ್ಪೋರೇಷನ್ ಹೊರತುಪಡಿಸಿ ಗ್ರಾಮೀಣ ಭಾಗದಲ್ಲಿನ ಕೈಗಾರಿಕೆಗಳು ಕಾರ್ಯ ಆರಂಭಿಸಬಹುದಾಗಿದೆ. ಎಸ್‍ಇಝಡ್ ನಿರ್ಮಾಣದ ಏರಿಯಾದಲ್ಲಿನ ಎಲ್ಲಾ ಕೈಗಾರಿಕೆ ಅವಕಾಶ ನೀಡಲಾಗಿದೆ.
  2. ಪಸ್ತಕ-ಲೇಖನ ಸಾಮಗ್ರಿ ಅಂಗಡಿ, ಕನ್ನಡಕದ ಅಂಗಡಿ, ಜೆರಾಕ್ಸ್, ಹಾರ್ಡ್‍ವೇರ್, ಸ್ಟೀಲ್, ಫ್ಲೈವುಡ್, ಪೈಂಟ್, ಇಟ್ಟಂಗಿಭಟ್ಟಿ, ರೈಸ್ ಮಿಲ್, ಫೋಟೊ ಸ್ಟುಡಿಯೋ, ಆಯಿಲ್ ಮಿಲ್, ಚಪ್ಪಲಿ ಅಂಗಡಿ, ಮರಳು ಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ಪ್ಲಾಸಿಕ್, ಟಾರ್ಪಲ್ ಅಂಗಡಿ ಹಾಗೂ ಆಟೋ ಮೊಬೈಲ್ಸ್ ಅಂಗಡಿ, ಪ್ರಿಟಿಂಗ್ ಪ್ರೆಸ್‍ಗಳಿಗೆ ಅವಕಾಶವಿದೆ.
  3. ಮದುವೆ ಸಮಾರಂಭ ಸೇರಿದಂತೆ ಕೌಟುಂಬಿಕ ಕಾರ್ಯಕ್ರಮಗಳನ್ನು ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಂಡು, ಗರಿಷ್ಠ 20 ಜನ ಮೀರದಂತೆ ಕಾರ್ಯಕ್ರಮಗಳನ್ನು ಮಾಡಬಹುದಾಗಿದೆ.
  4. ಕೃಷಿ, ಮಾರುಕಟ್ಟೆ, ಸಬ್ ರಿಜಿಸ್ಟಾರ್ ಆಫೀಸ್, ಎಪಿಎಂಸಿ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲೆಯಲ್ಲಿ ವಿವಿಧ ರೀತಿಯ ಅಂಗಡಿಗಳು ಸೇರಿದಂತೆ ಒಟ್ಟು 13 ಸಾವಿರ ಅಂಗಡಿಗಳು ನೊಂದಣಿ ಮಾಡಿವೆ. ಇನ್ನಿಳಿದ 3 ಸಾವಿರ ಅಂಗಡಿಗಳು ನೊಂದಣಿ ಆಗಬೇಕಿದೆ ಎಂದರು.

ಏನಿರಲ್ಲ

  1. ಜಿಲ್ಲೆ ಬಿಟ್ಟು ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ. ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಆಟೋ, ಟ್ಯಾಕ್ಸಿ, ಬಸ್‍ಗಳ ಯಾವುದೇ ಓಡಾಟ ನಿಷೇಧಿಸಲಾಗಿದೆ. ಜನರು ಗುಂಪು ಗುಂಪಾಗಿ ಜನರು ಸೇರುವಂತಿಲ್ಲ. ಸಡಿಲಿಕೆಯ ಅಂಗಡಿಗಳಲ್ಲಿ ಶುಚಿತ್ವ ಕಾಪಾಡಿಕೊಂಡು ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು.
  2. ಇಲ್ಲದಿದ್ದರೆ ಅವಘಡ ನಿರ್ಮಾಣವಾಗುತ್ತೆ ಎನ್ನುವ ಸೂಚನೆ ಕಂಡುಬಂದರೆ ಅಂಗಡಿಗಳನ್ನು ನಿರ್ದಿಷ್ಟ ಅವಧಿಯವರೆಗೆ ಸೀಲ್ ಮಾಡಲಾಗುವುದು. ಜೊತೆಗೆ ಬಿಗ್ ಬಜಾರ್ ಇನ್ನುಳಿದ ಇಂಡಸ್ಟ್ರೀಯಲ್ ಉದ್ಯಮಗಳಲ್ಲಿ ಎಸಿ ಬಳಸುವಂತಿಲ್ಲ. ಎಸಿ ಬಳಸಿದರೆ ಅವರ ಉದ್ದಿಮೆ ಪರವಾನಗಿ ರದ್ದು ಮಾಡಲಾಗುವುದು ಎಂದರು.ಬೀಡಿ, ಸಿಗರೇಟ್, ತಂಬಾಕು ಉತ್ಪನ್ನ, ಮದ್ಯವನ್ನು ಮೇ 3 ರವರೆಗೆ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‍ಗಳಲ್ಲಿ ಸಾರ್ವಜನಿಕ ಪ್ರಾರ್ಥನೆಗೆ ಅವಕಾಶ ಇರುವುದಿಲ್ಲ. 
  3. ಜನರಿಗೆ ಆರ್ಥಿಕ ವ್ಯವಸ್ಥೆಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕವಾಗಿ ಮೇ 3 ರವರೆಗೆ ಗುಂಪು ಸೇರುವಂತಿಲ್ಲ. ನಗರದಲ್ಲಿ ಯಾವುದೆ ಜವಳಿ ಹಾಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ.
  4. ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಕರ್ನಾಟಕ ಪೊಲೀಸ್ ಆಕ್ಟ್ ಕಾಯ್ದೆ ಅನ್ವಯ ಶಿಕ್ಷೆಗೆ ಒಳಗಾಗುತ್ತಾರೆ. ಇಂತಹ ಅಪರಾಧಗಳಿಗೆ ದಂಡ ವಿಧಿಸಲಾಗುವುದು.
  5. ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಪಾನಿಪುರಿ, ಎಗ್‍ರೈಸ್, ಗೋಬಿ ಅಂಗಡಿಗಳನ್ನು ತೆರೆಯಲು ಅವಕಾಶವಿರುವುದಿಲ್ಲ.
  6. ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯವಹಾರ ಮಾಡುವುದು ಕಂಡು ಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಿ, ಶಿಸ್ತು ಕ್ರಮ ಜರುಗಿಸಲಾಗುವುದು.

ಈ ವ್ಯಕ್ತಿಗಳ ಸಂಚಾರಕ್ಕೆ ಅನುಮತಿ ಇದೆ

ವೈದ್ಯಕೀಯ ಮತ್ತು ಪಶು ವೈದ್ಯಕೀಯ ಸೇರಿದಂತೆ ತುರ್ತು ಸೇವೆಯ ಖಾಸಗಿ ವಾಹನಗಳು ಮತ್ತು ಅಗತ್ಯ ಸೇವೆಗಳು, ಸಾಮಗ್ರಿಗಳನ್ನು ಒದಗಿಸುವ ಹಾಗೂ ಕರ್ತವ್ಯಕ್ಕೆ ತೆರಳುವವರಿಗೆ ಸಂಬಂಧಿಸಿದಂತೆ ದ್ವಿಚಕ್ರ ವಾಹನದಲ್ಲಿ ಒಬ್ಬ ಸವಾರರು ಮತ್ತು ನಾಲ್ಕು ಚಕ್ರದ ವಾಹನಗಳಲ್ಲಿ ವಾಹನ ಚಾಲಕರೊಂದಿಗೆ ಒಬ್ಬರಿಗೆ ಮಾತ್ರ ಸಂಚರಿಸಲು ಅವಕಾಶವಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.

ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ

ಜಿಲ್ಲೆಯೂ ಸ್ಮಾರ್ಟ್ ಸಿಟಿಯಾಗಿರುವುದರಿಂದ ಜಿಲ್ಲೆಯ ಜನರು ಸ್ಮಾಟ್ ಆಗಿ ವರ್ತಿಸಬೇಕು. ಅಂಗಡಿಗಳಲ್ಲಿ ಗದ್ದಲ ಇರುವ ಸಮಯದಲ್ಲಿ ಹೋಗದೆ, ಅನುಕೂಲ ಮಾಡಿಕೊಂಡು ಅವಶ್ಯಕತೆಗೆ ಅನುಗುಣವಾಗಿ ಹೋಗಬೇಕು. ಆ ಮೂಲಕ “ನಿಮ್ಮ ಆರೋಗ್ಯದ ಕೀಲಿ ಕೈ ನಿಮ್ಮ ಕೈಯಲ್ಲಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

144 ಸೆಕ್ಷನ್ ಮುಂದುವರೆಯಲಿದೆ

ಗ್ರೀನ್ ಜೋನ್‍ನಿಂದ ಸಾರ್ವಜನಿಕರು ಮೈಮರೆಯುಂತಿಲ್ಲ. ಮುಂದೇನಾದರೂ ಹೊಸ ಪ್ರಕರಣ ವರದಿಯಾದಲ್ಲಿ ಮತ್ತೆ ವಲಯ ವ್ಯತ್ಯಾಸವಾಗಲಿದೆ. ಸೇಫ್ ಜೋನ್‍ಗೆ ಬಂದಿರುವ ಸ್ಥಿತಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೇಲ್ಲರ ಮೇಲಿದೆ. ಹಾಗಾಗಿ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending