ದಿನದ ಸುದ್ದಿ
ದಾವಣಗೆರೆ ಲಾಕ್ ಡೌನ್ ಹೀಗಿತ್ತು..!
ಸುದ್ದಿದಿನ,ದಾವಣಗೆರೆ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರತಿ ಭಾನುವಾರ ಲಾಕ್‍ಡೌನ್‍ಗೆ ಸರ್ಕಾರ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ದಾವಣಗೆರೆ ಜಿಲ್ಲಾದ್ಯಂತ ಲಾಕ್‍ಡೌನ್ ಮಾಡಲಾಗಿದೆ.
ಅಗತ್ಯವಸ್ತುಗಳನ್ನು ಹೊರತುಪಡಿಸಿ ಸಾರ್ವಜನಿಕರ ಹಾಗೂ ವಾಹನ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ. ಇಂದು ಬೆಳಗ್ಗೆ 8 ರಿಂದ ನಾಳೆ ಬೆಳಗ್ಗೆ 8ರವರೆಗೆ ಕಫ್ರ್ಯೂ ಜಾರಿಯಲ್ಲಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಜನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧವಿದ್ದರೂ ಸಹ ಕೆಲವೆಡೆ ಅನಗತ್ಯವಾಗಿ ಜನ ಸಂಚಾರ ಮಾಡುತ್ತಿದ್ದರು.
ಈ ವೇಳೆ ಪೋಲಿಸರು ದಂಡ ವಿಧಿಸಿ ಕಫ್ರ್ಯೂ ಪಾಲನೆಗೆ ಸೂಚನೆ ನೀಡಿದರು. ಮೆಡಿಕಲ್ ಶಾಪ್ ಗಳು,ಪೆಟ್ರೋಲ್ ಬಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಿವೆ. ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದ್ದು ಎಲ್ಲೆಡೆ ಪೋಲಿಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿದ್ದಾರೆ. ಕಪ್ರ್ಯೂ ಜಾರಿ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 8 ಗಂಟೆಯಿಂದಲೇ ಕೆಎಸ್‍ಆರ್‍ಟಿಸಿ ಸಂಚಾರ ಸಂಪೂರ್ಣ ನಿಷೇಧವಾಗಿತ್ತು.
ಒಟ್ಟಾರೆಯಾಗಿ ಸತತ 33 ಗಂಟೆಗಳ ಕಾಲ ದಾವಣಗೆರೆ ಸಂಪೂರ್ಣ ಸ್ಥಬ್ದಗೊಂಡಿದ್ದು ಕಂಡುಬಂದಿತ್ತು. ಇಂದು ಗುರುಪುರ್ಣಿಮೆಯ ಹಿನ್ನೆಲೆಯಲ್ಲಿ ಐತಿಹಾಸಿಕ ಸ್ಥಳ ಉಚ್ಚಂಗಿದುರ್ಗದಲ್ಲಿ ಉಚ್ಚೆಂಗೆಮ್ಮ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗಿಲ್ಲ ಶ್ರೀಕ್ಷೇತ್ರದಲ್ಲಿ ಪ್ರತಿ ಹುಣ್ಣಿಮೆಗೆ ಸಾವಿರಾರು ಜನ ಸೇರುತ್ತಿದ್ದರು.ನಿನ್ನೆ ರಾತ್ರಿಯಿಂದಲೇ ದೇವಸ್ಥಾನ ಬಂದ್ ಮಾಡಲಾಗಿದೆ. ಜಿಲ್ಲೆಯಾದ್ಯಂತ ಎಲ್ಲಾ ದೇವಸ್ಥಾನಗಳು,ಹೊಟೇಲ್ ಗಳು ಬಂದಾಗಿವೆ. ದಾವಣಗೆರೆ ನಗರ ಇಂದು ಸಂಪೂರ್ಣ ಸ್ತಬ್ದಗೊಂಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243