Connect with us

ರಾಜಕೀಯ

ಯಾರಿಗೆ ಕರಗುತ್ತೆ ಬೆಣ್ಣೆನಗರಿ..? : ಬೆಣ್ಣೆನಗರಿಯಲ್ಲಿ ರಂಗೇರಿದ ರಣಕಣ..!

Published

on

ಸುದ್ದಿದಿನ, ದಾವಣಗೆರೆ:ಧ್ಯ ಕರ್ನಾಟಕದ ಸ್ಟಾರ್ ಕ್ಷೇತ್ರವಾದ ದಾವಣಗೆರೆಯಲ್ಲಿ ರಣಬಿಸಿಲಿನೊಂದಿಗೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಲೋಕಾ ಸಮರವೂ ದಿನೇದಿನೇ ರಂಗೇರುತ್ತಿದೆ.

ಕಳೆದ ಚುನಾವಣೆಗಳಲ್ಲಿನ ಕುತೂಹಲವೇ ಈ ಬಾರಿಯೂ ಮುಂದುವರೆದಿದ್ದು, ಹೆಸರಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳಿದ್ದರೂ ಕಾಂಗ್ರೆಸ್ ನ ಮೈತ್ರಿ ಅಭ್ಯರ್ಥಿ ಹಾಗೂ ಬಿಜೆಪಿ ಮಧ್ಯೆಯೇ ನೇರ ಪೈಪೋಟಿ. ಹೀಗಾಗಿ, ಎರಡು ಪಕ್ಷಗಳ ಅಭ್ಯರ್ಥಿಗಳು ನೇರವಾಗಿ ಜಿದ್ದಾಜಿದ್ದಿಗೆ ಬಿದ್ದಿದ್ದಾರೆ.

ಈಗಾಗಲೇ ಸತತ ಮೂರು ಲೋಕಸಭಾ ಚುನಾವಣೆಯಲ್ಲೂ ಕಮಲ ಅರಳಿಸಿದ ಬಿಜೆಪಿಯ ಜಿ.ಎಂ. ಸಿದ್ದೇಶ್ವರ್ ಇದು ನನ್ನ ಕೊನೆ ಚುನಾವಣೆ. ಇದೊಮ್ಮೆ ನನ್ನನ್ನು ಗೆಲ್ಲಿಸಿ ಬಿಡಿ ಎಂದು ಪ್ರಚಾರ ಶುರು ಮಾಡಿಕೊಂಡಿದ್ದಾರೆ. ಇತ್ತ, ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೆಚ್. ಬಿ.ಮಂಜಪ್ಪ ಸಾಮಾಜಿಕ ಜಾಲತಾಣಗಳ ಮೊರೆ ಹೋಗುತ್ತಿದ್ದಾರೆ. ಈಗಾಗಲೇ ಫೇಸ್‍ಬುಕ್ ಮೂಲಕ ಜನರ ಗಮನ ಸೆಳೆದಿರುವ ಹೆಚ್.ಬಿ.ಮಂಜುನಾಥ್ ದಾವಣಗೆರೆ ಅಭಿವೃದ್ದಿಗೆ ತನ್ನನ್ನು ಬೆಂಬಲಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

ದಾವಣಗೆರೆ ಲೋಕಸಭಾ ಚುನಾವಣೆಯಲ್ಲಿ ಮಂಜಪ್ಪನವರ ಪರ ಅಲೆ ದಿನೇ ದಿನೇ ಹೆಚ್ಚುತ್ತಿದೆ. ಒಬ್ಬ ಸಾಮಾನ್ಯ ಕೃಷಿಕನನ್ನು ಗೆಲುವಿನ ದಡ ಮುಟ್ಟಿಸುವುದು ನಮ್ಮೆಲ್ಲರ ಕರ್ತವ್ಯ..ಗುರಿ ಮುಟ್ಟುವವರೆಗೂ ಮೈ ಮರೆಯದಿರೋಣ…ನಿಮ್ಮ ಮತ ಮಂಜಪ್ಪನವರಿಗೆ…💚

Posted by ನಿಮ್ಮ ಹೆಚ್ ಬಿ ಮಂಜಪ್ಪ on Wednesday, 10 April 2019

ಹಾಲಿ ಬಿಜೆಪಿ ವಶದಲ್ಲಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈವರೆಗೂ ಒಟ್ಟು 11 ಬಾರಿ ಲೋಕಸಭಾ ಚುನಾವಣೆ ನಡೆದಿದ್ದು, ಎಂದಿನಂತೆ ಸಾಂಪ್ರದಾಯಿಕ ಎದುರಾಳಿ ಪಕ್ಷಗಳ ನಡುವೆಯೇ ಈ ಬಾರಿಯೂ ಮಹಾ ಸಮರ ಆರಂಭಗೊಂಡಿದೆ.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಮೂರು ಬಾರಿ ಪರಾಭವಗೊಂಡಿರುವ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಈ ಬಾರಿ ಲೋಕ‌ಕಣದಿಂದ ಹಿಂದೆ‌ ಸರಿದಿದ್ದು, ಹೆಚ್.ಬಿ.ಮಂಜಪ್ಪ ಅವರನ್ನು ಕಣಕ್ಕಿಳಿಸಿದೆ.

ಅಂದಹಾಗೆ 2004, 2009, 2014ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದ ಮಲ್ಲಿಕಾರ್ಜುನ್ ಈ ಬಾರಿ‌ಹಲವು ವೈಯಕ್ತಿಕ ಕಾರಣಗಳನ್ನು ನೀಡಿ ರಣಕಣದಿಂದ ಹಿಂದೆ‌ ಸರಿದು ಕಿಂಗ್ ಮೇಕರ್ ಆಗಲಿದ್ದಾರಾ ನೋಡ ಬೇಕಿದೆ.

2009ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲ ಪಡೆದಿದ್ದ ಮಲ್ಲಿಕಾರ್ಜುನ್, ಕೇವಲ 2 ಸಾವಿರ ಮತಗಳ ಅಂತರದಿಂದ ಸೋಲುಂಡಿದ್ದರು. 2014ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕ ಅಭ್ಯರ್ಥಿ ಹಾಕಿದ್ದರಿಂದ ಜೆಡಿಎಸ್‍ನ ಮಹಿಮಾ ಜೆ ಪಟೇಲ್ 46,911 ಮತ ಪಡೆದು, ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್.ಮಲ್ಲಿಕಾರ್ಜುನ್ 5,01,287 ಮತ ಪಡೆದುಕೊಂಡು 17607 ಮತಗಳ ಅಂತರದಿಂದ ಪುನಃ ಸೋಲು ಕಂಡರು.

ದಾವಣಗೆರೆ ಲೋಕಸಭಾ ಕ್ಷೇತ್ರವು ಒಟ್ಟು 8 ವಿಧಾನಸಭಾ ಕ್ಷೇತ್ರ ಹೊಂದಿದ್ದು, ದಾವಣಗೆರೆ ಉತ್ತರ ಕ್ಷೇತ್ರ, ಜಗಳೂರು, ಹರಪನಹಳ್ಳಿ, ಚನ್ನಗಿರಿ, ಹೊನ್ನಾಳಿ ಹಾಗೂ ಮಾಯಕೊಂಡ ಕ್ಷೇತ್ರಗಳಲ್ಲಿ ಹಾಗೂ ಆರು ಕ್ಷೇತ್ರಗಳ ಜೊತೆಗೆ 36 ಸದಸ್ಯರ ಬಲ ಹೊಂದಿರುವ ದಾವಣಗೆರೆ ಜಿಪಂ ಸಹ ಬಿಜೆಪಿ ವಶದಲ್ಲಿದೆ. ಇನ್ನುಳಿದ ದಾವಣಗೆರೆ ದಕ್ಷಿಣ ಹಾಗೂ ಹರಿಹರ ಕ್ಷೇತ್ರಗಳು ಮಾತ್ರ ಕಾಂಗ್ರೆಸ್ ತೆಕ್ಕೆಯಲ್ಲಿವೆ.

ವಿಕಾಸದ ಹಾದಿಯಲ್ಲಿ ನನ್ನ ದಾವಣಗೆರೆ!ಕಮಲ ಅರಳಿಸಿ!ಅಭಿವೃದ್ಧಿ ಬೆಳಗಿಸಿ!

Posted by GM Siddeshwara on Wednesday, 10 April 2019

ದಾವಣಗೆರೆ ಜಿಲ್ಲೆಯ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ನ್ಯಾಮತಿ ತಾಲ್ಲೂಕಿನ ಮಾದನಭಾವಿ, ದಾನಿಹಳ್ಳಿ, ಕೊಡಚಗೊಂಡನಹಳ್ಳಿ, ದೊಡ್ಡೆತ್ತಿನಹಳ್ಳಿ,…

Posted by GM Siddeshwara on Wednesday, 10 April 2019

ಒಟ್ಟು ಮತದಾರರು ಎಷ್ಟು?

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 8,14,413 ಪುರುಷ, 7,96,874 ಮಹಿಳಾ, 110 ತೃತೀಯಲಿಂಗಿ ಹಾಗೂ 568 ಜನ ಸೇವಾ ಮತದಾರರು ಸೇರಿದಂತೆ ಒಟ್ಟು 16,11,965 ಮತದಾರರಿದ್ದು, 2014ರ ಚುನಾವಣೆಗಿಂತ ಈ ಬಾರಿ 1.18 ಲಕ್ಷ ಹೊಸ ಮತದಾರರು ಕ್ಷೇತ್ರದಲ್ಲಿ ನೋಂದಾಯಿಸಿಕೊಂಡಿದ್ದಾರೆ. ಆದ್ದರಿಂದ ಈ ಹೊಸ ಮತದಾರರನ್ನು ಸೆಳೆಯುವಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ, ತಮ್ಮ ಪಕ್ಷಗಳ ವಿಚಾರಧಾರೆ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಚಾರ ಮಾಡುತ್ತಾ ಮತ ಬೇಟೆ ಶುರುವಿಟ್ಟುಕೊಂಡಿದ್ದಾರೆ.

ಬಿಜೆಪಿ ಗೆಲವಿಗೆ ಕಾರಣಗಳು

ಕುಗ್ಗದ ಪ್ರಧಾನಿ ಮೋದಿ ಬಲ
ಜಿಲ್ಲೆಯಲ್ಲಿ ಸತತ 3 ಬಾರಿ ಬಿಜೆಪಿಗೆ ಗೆಲವು
ಜಿಲ್ಲೆಯ 6 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿರುವುದು
ಕೇಂದ್ರ ಬಿಜೆಪಿಯಿಂದಾದ ಅಭಿವೃದ್ಧಿ ಕಾರ್ಯಗಳು

ಕಾಂಗ್ರೆಸ್ ಗೆಲವಿಗೆ ಕಾರಣಗಳು

ಕಾಂಗ್ರೆಸ್, ಜೆಡಿಎಸ್ ಮೈತ್ರಿ ಬಲ
ಎಸ್‍ಎಸ್‍ಎಂ ಸತತ ಮೂರು ಬಾರಿ ಸೋತಿರುವ ಅನುಕಂಪ, ಹಾಗೂ ಈ ಬಾರಿ‌ ಹಿಂದುಳಿದ‌ ವರ್ಗದ (ಕುರುಬ) ವ್ಯಕ್ತಿಯೊಬ್ಬರಿಗೆ ಟಿಕೆಟ್ ನೀಡಿರುವುದು. ರಾಜ್ಯದಲ್ಲಿ ಸರ್ಕಾರ, ಅಭಿವೃದ್ಧಿ ಕಾರ್ಯಗಳು
ಅಹಿಂದ ಮತಗಳ ಕ್ರೂಡಿಕರಣ.

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

Published

on

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100 ಪ್ರತಿಶತ ಸುಂಕಗಳನ್ನು ಎದುರಿಸಬೇಕಾಗುತ್ತದೆ ಎಂದು ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯಿಸಿದ್ದಾರೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಅವರು, ಈ ದೇಶಗಳು ಯುಎಸ್ ಡಾಲರ್ ಅನ್ನು ಬದಲಿಸುವ ಕೆಲಸ ಮಾಡುವುದಿಲ್ಲ ಎಂಬ ಬದ್ಧತೆಯ ಅಗತ್ಯವಿದೆ. ಅಂತರಾಷ್ಟ್ರೀಯ ವ್ಯಾಪಾರದಲ್ಲಿ ಬ್ರಿಕ್ಸ್ ಅಮೆರಿಕಾ ಡಾಲರ್ ಅನ್ನು ಬದಲಿಸುವ ಯಾವುದೇ ಅವಕಾಶವಿಲ್ಲ, ಮತ್ತು ಇದನ್ನು ಪ್ರಯತ್ನಿಸುವ ಯಾವುದೇ ದೇಶ ಅಮೆರಿಕದೊಂದಿಗಿನ ಸಂಬಂಧಗಳಿಗೆ ವಿದಾಯ ಹೇಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ

Published

on

ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ.

ಎಚ್‌ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್‌ಐವಿ ಯೊಂದಿಗೆ ಬದುಕು ಸಾಗಿಸುತ್ತಿರುವವರಿಗೆ ಬೆಂಬಲ ಸೂಚಿಸಲು ಈ ದಿನವು ಅವಕಾಶವನ್ನು ಒದಗಿಸುತ್ತದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆಪಿ ನಡ್ಡಾ ಅವರು ಮಧ್ಯಪ್ರದೇಶದ ಇಂದೋರ್‌ನಲ್ಲಿಂದು ವಿಶ್ವ ಏಡ್ಸ್ ದಿನ 2024 ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯಮಂತ್ರಿ ಡಾ.ಮೋಹನ್ ಯಾದವ್ ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ವರ್ಷದ ವಿಶ್ವ ಏಡ್ಸ್ ದಿನ, ಏಡ್ಸ್ ಕುರಿತು ಜಾಗೃತಿ ಮೂಡಿಸುವುದು, ಚಿಕಿತ್ಸಾ ವಿಧಾನಗಳನ್ನು ಉತ್ತೇಜಿಸುವುದು ಮತ್ತು ಎಚ್‌ಐವಿ-ಏಡ್ಸ್ ನಿಂದ ಪೀಡಿತರ ವಿರುದ್ಧದ ತಾರತಮ್ಯವನ್ನು ತೊಡೆದುಹಾಕುವುದರ ಮೇಲೆ ಕೇಂದ್ರೀಕರಿಸುತ್ತದೆ. ’ಸರಿಯಾದ ಮಾರ್ಗವನ್ನು ತೆಗೆದುಕೊಳ್ಳಿ’ ಎಂಬುದು 2024 ರ ಘೋಷವಾಕ್ಯವಾಗಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಎನ್‌ಎಸಿಓ, 1992 ರಿಂದ ಪ್ರತಿ ವರ್ಷ ಡಿಸೆಂಬರ್ 1 ರಂದು ವಿಶ್ವ ಏಡ್ಸ್ ದಿನವನ್ನು ಆಚರಿಸುತ್ತಿದೆ. ಈ ಆಚರಣೆಗಳು 2030 ರ ವೇಳೆಗೆ ಏಡ್ಸ್ಅನ್ನು ನಿರ್ಮೂಲನೆಗೊಳಿಸುವ ಜಾಗತಿಕ ಗುರಿಯನ್ನು ಅನುಸರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 hours ago

ವಿಶಾಖಪಟ್ಟಣಂನಲ್ಲಿ ಆಲ್ ಇಂಡಿಯ ಕ್ರೀಡಾಕೂಟಕ್ಕೆ ಪೇದೆ ಕೆ.ಆರ್.ಹುಲಿರಾಜ ಆಯ್ಕೆ

ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ಬಳ್ಳಾರಿ: ಉದ್ಯೋಗದೊಂದಿಗೆ ಆರೋಗ್ಯದ ದೃಷ್ಟಿಯಿಂದ ಪ್ರತಿನಿತ್ಯ ಒಂದು ತಾಸಿನ ಕಾಲ ದೇಹದಂಡನೆ ಮಾಡಿದರೇ ಕರ್ತವ್ಯ ನಿರ್ವಹಿಸಲು ಅನುಕೂಲಕರವಾಗುತ್ತದೆ ಎಂದು ವಿಶಾಲಪಟ್ಟಣಂ ಆಲ್...

ದಿನದ ಸುದ್ದಿ14 hours ago

ಚನ್ನಗಿರಿ |ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸ್ವಾಮಿ ಪ್ರಥಮ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಇತರೆ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು. ಚನ್ನಗಿರಿ ಶಾಸಕ...

ಕ್ರೀಡೆ2 days ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ...

ಕ್ರೀಡೆ2 days ago

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ...

ಕ್ರೀಡೆ3 days ago

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ...

ದಿನದ ಸುದ್ದಿ3 days ago

ಫೆಂಗಲ್ ಚಂಡಮಾರುತ | ರಾಜ್ಯದ ವಿವಿಧೆಡೆ ಮಳೆ ; ಕೆಲವು ಜಿಲ್ಲೆಯಲ್ಲಿ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಫೆಂಗಲ್ ಚಂಡಮಾರುತ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗ್ಗೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ....

ದಿನದ ಸುದ್ದಿ5 days ago

ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ

ಸುದ್ದಿದಿನಡೆಸ್ಕ್:ಬ್ರಿಕ್ಸ್ ಸದಸ್ಯ ರಾಷ್ಟ್ರಗಳು ಹೊಸ ಕರೆನ್ಸಿಯನ್ನು ಪರಿಚಯಿಸುವುದಾಗಲಿ ಅಥವಾ ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಅನ್ನು ಬದಲಿಸಿ ಬೇರೆ ಕರೆನ್ಸಿಗಳನ್ನು ಬೆಂಬಲಿಸುವ ಕೆಲಸ ಮಾಡದಿರಲು ಬದ್ಧವಾಗಿರಬೇಕು, ಇಲ್ಲವಾದಲ್ಲಿ, 100...

ದಿನದ ಸುದ್ದಿ5 days ago

ಇಂದು ವಿಶ್ವ ಏಡ್ಸ್ ದಿನ; ಎಚ್‌ಐವಿ ಚಿಕಿತ್ಸೆ – ನಿರ್ಮೂಲನೆ ಕುರಿತು ಜಾಗೃತಿ ಅಭಿಯಾನ

ಸುದ್ದಿದಿನಡೆಸ್ಕ್:ಅಕ್ವೈರ್ಡ್ ಇಮ್ಯುನೊ ಡೆಫಿಷಿಯನ್ಸಿ ಸಿಂಡ್ರೋಮ್-ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಇಂದು ವಿಶ್ವ ಏಡ್ಸ್ ದಿನವನ್ನು ಆಚರಿಸಲಾಗುತ್ತಿದೆ. ಎಚ್‌ಐವಿ ವಿರುದ್ಧದ ಹೋರಾಟದಲ್ಲಿ ಜನರು ಒಂದಾಗಲು ಮತ್ತು ಎಚ್‌ಐವಿ...

ದಿನದ ಸುದ್ದಿ6 days ago

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ; ರಾಷ್ಟ್ರೀಯ ಲೋಕ್ ಅದಾಲತ್

ಸುದ್ದಿದಿನ,ದಾವಣಗೆರೆ:ಡಿಸೆಂಬರ್ 14 ರಂದು ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ...

ದಿನದ ಸುದ್ದಿ6 days ago

ದೊಡ್ಡಘಟ್ಟ | ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆ ದೊಡ್ಡಘಟ್ಟ ಗ್ರಾಮದಲ್ಲಿ ‘ಗುರುಗಳ ನಿಸ್ವಾರ್ಥ ಸೇವೆಗಾಗಿ -1999-2000’ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ಕಳೆದ...

Trending