Connect with us

ದಿನದ ಸುದ್ದಿ

ದಾವಣಗೆರೆ | ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಸಾಮೂಹಿಕ ಕೈ ಸ್ವಚ್ಚತಾ ಅಭಿಯಾನ : ಜಿಲ್ಲಾಧಿಕಾರಿ ಶಿವಾನಂದ ಕಾಪಶಿ

Published

on

ಸುದ್ದಿದಿನ,ದಾವಣಗೆರೆ : ಶುದ್ದ ಕುಡಿಯುವ ನೀರು, ಶುದ್ದ ಆಹಾರ, ಶುದ್ದ ಪರಿಸರ ಹಾಗೂ ಶುದ್ದ ಕೈಗಳಿಂದ ಆರೋಗ್ಯವಂತರಾಗಿರಲು ಸಾಧ್ಯವಾಗಿದ್ದು ಈ ನಿಟ್ಟಿನಲ್ಲಿ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಶುದ್ದ ಕೈಗಳಿಂದ ಆರೋಗ್ಯ ವೃದ್ದಿ ಅಭಿಯಾನದಡಿ ಆಗಸ್ಟ್ 6 ರಂದು ಎಲ್ಲಾ ಶಾಲೆಗಳಲ್ಲಿ ಮಕ್ಕಳಿಂದ ಕೈ ಸ್ವಚ್ಚಗೊಳಿಸಿಕೊಳ್ಳುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಅವರು ಜುಲೈ 27 ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಯಾವುದೇ ಕಾರಣಕ್ಕೂ ತೀವ್ರ ಅತಿಸಾರ ಭೇದಿಯಿಂದ ಮರಣ ಹೊಂದಬಾರದೆAದು ಆಗಸ್ಟ್ 1 ರಿಂದ 15 ರ ವರೆಗೆ ಪಾಕ್ಷಿಕವನ್ನಾಗಿ ಆಚರಣೆ ಮಾಡಲಾಗುತ್ತದೆ. ಈ ವೇಳೆ ಅತಿಸಾರ ಭೇದಿಯಾಗದಂತೆ ಹಾಗೂ ಭೇದಿಯಾದಾಗ ಯಾವ ರೀತಿ ನಿಯಂತ್ರಣ ಮಾಡಬೇಕೆಂದು ಪಾಕ್ಷಿಕದ ವೇಳೆ ಸಾರ್ವಜನಿಕರು ಸೇರಿದಂತೆ ತಾಯಂದಿರುಗಳಿಗೆ ಜಾಗೃತಿ ಮೂಡಿಸಲಾಗುತ್ತದೆ.

ಪಾಕ್ಷಿಕದ ಅಂಗವಾಗಿ ಆಗಸ್ಟ್ 6 ರಂದು ಕೈಯನ್ನು ಯಾವ ರೀತಿ ತೊಳೆದುಕೊಳ್ಳಬೇಕೆಂಬ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು ಸರ್ಕಾರಿ ಸೇರಿದಂತೆ ಎಲ್ಲಾ ಖಾಸಗಿ ಶಾಲೆಗಳಲ್ಲಿಯು ಈ ಅಭಿಯಾನವನ್ನು ಕೈಗೊಳ್ಳಲಾಗುತ್ತಿದ್ದು ಎಲ್ಲಾ ಶಾಲೆಗಳಲ್ಲಿ ಪ್ರಾತ್ಯಕ್ಷತೆಯನ್ನು ಏರ್ಪಡಿಸಲು ಸೂಚನೆ ನೀಡಿದರು.

ಅದೇ ರೀತಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನವನ್ನು ಆಗಸ್ಟ್ 10 ರಂದು ಆಚರಿಸಲಾಗುತ್ತಿದ್ದು ಇದರ ಅಂಗವಾಗಿ ಎಲ್ಲಾ ಮಕ್ಕಳಿಗೂ ಜಂತುಹುಳು ನಿವಾರಣೆ ಮಾಡಲು ಸಾಮೂಹಿಕವಾಗಿ ಅಲ್ಬೆಂಡಝೋಲ್ ಮಾತ್ರೆಗಳನ್ನು 19 ವರ್ಷದೊಳಗಿನ ಎಲ್ಲರಿಗೂ ನುಂಗಿಸಲಾಗುತ್ತದೆ. ಈ ಕಾರ್ಯಕ್ರಮವನ್ನು ಎಲ್ಲಾ ಶಾಲಾ, ಕಾಲೇಜುಗಳು ಹಾಗೂ ಹಾಸ್ಟೆಲ್‌ಗಳಲ್ಲಿ ಹಮ್ಮಿಕೊಳ್ಳಲು ಸೂಚನೆ ನೀಡಿದರು.

ಅತಿಸಾರ ಭೇದಿ ನಿಯಂತ್ರಣ ಹಾಗೂ ಜಂತುಹುಳು ನಿವಾರಣಾ ಕಾರ್ಯಕ್ರಮಗಳಿಂದ ಅಲೆಮಾರಿ, ಕಾರ್ಮಿಕರಾಗಿ ವಲಸೆ ಬಂದವರ ಮಕ್ಕಳು ಸಹ ಇದರಿಂದ ವಂಚಿತರಾಗದAತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.

ತಾಯಿ ಹಾಲು ಅಮೃತದಂತೆ ಇದ್ದು ಇದನ್ನು ತಾಯಂದಿರು ತಮ್ಮ ಮಕ್ಕಳಿಗೆ ಕನಿಷ್ಠ 6 ತಿಂಗಳವರೆಗೆ ಕಡ್ಡಾಯವಾಗಿ ಸ್ತನ್ಯಪಾನವನ್ನು ಮಾಡಿಸಬೇಕೆಂದು ಜಾಗೃತಿ ಮೂಡಿಸುವ ಉದ್ದೇಶದಿಂದ ಆಗಸ್ಟ್ 1 ರಿಂದ 7 ರ ವರಗೆ ಸ್ತನ್ಯಪಾನ ಸಪ್ತಾಹವನ್ನು ಆಚರಣೆ ಮಾಡಲಾಗುತ್ತಿದೆ ಎಂದ ಅವರು ಈ ವೇಳೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವೈದ್ಯರು ತಾಯಂದಿರುಗಳಿಗೆ ಮನವರಿಕೆ ಮಾಡಿಕೊಡಬೇಕೆಂದು ತಿಳಿಸಿದರು.

ಅತಿಸಾರ ಭೇದಿಯನ್ನು ನಿಯಂತ್ರಿಸುವ ಸಲುವಾಗಿ ಎಲ್ಲರಿಗೂ ಒಆರ್‌ಎಸ್ ದೊರೆಯುವಂತೆ ನೋಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದ ಜಿಲ್ಲಾಧಿಕಾರಿಗಳು ಎಲ್ಲಾ ಕಾರ್ಯಕ್ರಮ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಜನರಿಗೆ ಆರೋಗ್ಯ ಸೌಲಭ್ಯ, ಸೇವೆಗಳು ದೊರೆಯುವಂತೆ ನೋಡಿಕೊಳ್ಳಲು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ; ಎ.ಚನ್ನಪ್ಪ ಮಾತನಾಡಿ ಜಗಳೂರು ತಾಲ್ಲೂಕಿನಲ್ಲಿ ಏಕೆ ಪದೇ ಪದೇ ಜ್ವರ, ಕಾಲುನೋವಿನ ಪ್ರಕರಣಗಳು ವರದಿಯಾಗುತ್ತಿವೆ ಎಂದ ಅವರು ತಾಲ್ಲೂಕು ಆರೋಗ್ಯಾಧಿಕಾರಿಗಳು ಹೆಚ್ಚು ಗಮನಿಸಿ ಸಾಂಕ್ರಾಮಿಕ ರೋಗಗಳು ಬಾರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಆರ್‌ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಮುರಳೀಧರ್, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಷಣ್ಮುಖಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೇಷ್ಮಾ ಕೌಸರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ. ನಟರಾಜ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಇದೇ ವೇಳೆ ಜಿಲ್ಲಾಧಿಕಾರಿ ಶಿವಾನಂದ್ ಕಾಪಶಿ ರವರು ಆರೋಗ್ಯ ಜಾಗೃತಿ ಕರಪತ್ರಗಳನ್ನು ಬಿಡುಗಡೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮ ಪಂಚಾಯಿತಿ ಸೇವೆಗಳು ಇನ್ನು ವಾಟ್ಸಪ್‍ನಲ್ಲಿ

Published

on

ಸುದ್ದಿದಿನ,ದಾವಣಗೆರೆ : ಗ್ರಾಮ ಪಂಚಾಯಿತಿ ಸೇವೆಗಳನ್ನು ಪಡೆಯಲು ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದು ಪಂಚಮಿತ್ರ ಸೇವೆಗಳನ್ನು ವಾಟ್ಸಪ್ ಚಾಟ್‍ನಲ್ಲಿ ಪಡೆಯಲು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.

ಅವರು ಭಾನುವಾರ ದಾವಣಗೆರೆ ತಾ; ದೊಡ್ಡಬಾತಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯಿತಿ ದೊಡ್ಡಬಾತಿ, ಹಳೆಬಾತಿಯ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಂಚಮಿತ್ರ ವಾಟ್ಸಪ್ ಸೇವೆಗೆ ಸಚಿವರು ಚಾಲನೆ ನೀಡಿದರು.

ಗ್ರಾಮೀಣ ಜನರಿಗೆ 89 ಸೇವೆಗಳನ್ನು ನೀಡುವ ಪಂಚಮಿತ್ರ ಪೋರ್ಟಲ್ ಮತ್ತು ವಾಟ್ಸಾಪ್ ಚಾಟ್ ಡಿಜಿಟಲ್ ವೇದಿಕೆಯ ಮೂಲಕ ಪಡೆಯಲು ಅವಕಾಶ ಕಲ್ಪಿಸಿದೆ. ಇದರ ಮೂಲಕ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ ವಿವಿಧ 17 ಸೇವೆಗಳು, ಇತರೆ ಇಲಾಖೆಗಳಿಗೆ ಸಂಬಂಧಿಸಿದ 72 ಸೇವೆಗಳು ಈ ವೇದಿಕೆಯಲ್ಲಿ ಸಿಗಲಿವೆ. ಕಟ್ಟಡ ಪರನಾನಗಿ, ಹೊಸ ನೀರು ನಲ್ಲಿ ಸಂಪರ್ಕ, ಬೀದಿ ದೀಪ ನಿರ್ವಹಣೆ, ಸ್ವಾಧೀನ ಪ್ರಮಾಣ ಪತ್ರ, ವ್ಯಾಪಾರ ಪರವಾನಗಿ, ನಿರಾಕ್ಷೇಪಣಾ ಪತ್ರ, ಜಾಬ್ ಕಾರ್ಡ್ ವಿತರಣೆ ಸೇರಿದಂತೆ ಗ್ರಾಮ ಪಂಚಾಯಿತಿ ಸೇವೆಗಳನ್ನು ಇದರಲ್ಲಿ ಪಡೆಯಬಹುದಾಗಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಪಂಚಮಿತ್ರ ವಾಟ್ಸಪ್ ಸೇವೆಗಳ ಬಗ್ಗೆ ವಿವರಿಸಿದರು.

ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ, ದೊಡ್ಡಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಂಜುಳಾ.ಡಿ ಇವರು ಅಧ್ಯಕ್ಷತೆ ವಹಿಸಿದ್ದರು. ಹಳೆಬಾತಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾ ಆರ್, ದೊಡ್ಡಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಭಾನುವಳ್ಳಿ ಸಿದ್ದಪ್ಪ, ಹಳೇಬಾತಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪ ಎ, ಅಪರ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ, ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾದ ಕರಿಬಸಪ್ಪ, ಗಿರೀಶ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಉಪವಿಭಾಗಾಧಿಕಾರಿ ದುರ್ಗಾಶ್ರೀ ಸ್ವಾಗತಿಸಿದರು.

ವೆಬ್ಸೈಟ್ ಲಿಂಕ್

https://prcrdpr.karnataka.gov.in/gallery/Panchamitra%20Portal/en

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಡಿತರ ವಿತರಕರಿಗೆ ಕಮಿಷನ್ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ, ಬೆಂಗಳೂರು : ಪಡಿತರ ವಿತರಕರಿಗೆ ಪ್ರತಿ ಕೆ.ಜಿ. ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿ ಹೆಚ್ಚಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಗುರುವಾರ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಅನ್ನಭಾಗ್ಯ ದಶಮಾನೋತ್ಸವ ಹಸಿವು ಮುಕ್ತ ಕರ್ನಾಟಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರ ಕಾಯಕ ದಾಸೋಹದ ಪರಿಕಲ್ಪನೆ ಅನ್ನಭಾಗ್ಯಕ್ಕೆ ಪ್ರೇರಣೆಯಾಗಿತ್ತು. ಆಹಾರ ಉತ್ಪಾದನೆ ಮಾಡುವವರು ಕಾಯಕ ಜೀವಿಗಳು ಹಸಿವಿನಿಂದ ಮಲಗಬಾರದು. 5 ಕೆ.ಜಿ. ಅಕ್ಕಿಗೆ ಬದಲಾಗಿ ಪ್ರತಿ ಕೆ.ಜಿ.ಗೆ 34 ರೂಪಾಯಿಯಂತೆ ಫಲಾನುಭವಿಗಳಿಗೆ ನೇರ ನಗದು ಮೂಲಕ ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದರು.

ಸರ್ಕಾರದ ಗ್ಯಾರಂಟಿ ಯೋಜನೆಗಳ ಉದ್ದೇಶ ರಾಜ್ಯವನ್ನು ಹಸಿವು, ಅನಾರೋಗ್ಯ, ಅನಕ್ಷರತೆ, ನಿರುದ್ಯೋಗ ಮುಕ್ತ ಮಾಡುವುದೇ ಆಗಿದೆ. ಸರ್ಕಾರದ ಯೋಜನೆಗಳಿಂದ ಸಂಪತ್ತು, ಅಧಿಕಾರ ಮತ್ತು ಅವಕಾಶಗಳ ಸಮಾನ ಹಂಚಿಕೆಯಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಗ್ರಾಹಕ ರಕ್ಷಕ ತಪಾಸಣೆ ವಾಹನಗಳಿಗೆ ಚಾಲನೆ ಹಾಗೂ ತೂಕ ಮತ್ತು ಅಳತೆಗಳ ಗ್ರಾಹಕರ ಜಾಗೃತಿ ಕೈಪಿಡಿ ಬಿಡುಗಡೆ ಮಾಡಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿಯ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿಯಾಗಿ ಎನ್.ಬಿ.ಭಾರ್ಗವಿ ದ್ರಾವಿಡ್ ಆಯ್ಕೆ

Published

on

ಸುದ್ದಿದಿನ,ಚಿತ್ರದುರ್ಗ : ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಯಾಗಿ ಚಿತ್ರದುರ್ಗದ ಶ್ರೀಮತಿ ಎನ್.ಬಿ.ಭಾರ್ಗವಿ ದ್ರಾವಿಡ್ ಅವರನ್ನು ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜ್ ರವರು ಅಧಿಕೃತ ನೇಮಕ ಪತ್ರ ನೀಡುವುದರ ಮೂಲಕ ಆಯ್ಕೆ ಮಾಡಲಾಯಿತು.

ಭಾರ್ಗವಿ ದ್ರಾವಿಡ್ ಅವರು ಈ ಹಿಂದೆ ಭಾರತ ಸರ್ಕಾರವು ಚಿತ್ರದುರ್ಗ ನೆಹರು ಯುವ ಕೇಂದ್ರದ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಿತ್ತು. ಹಾಗೂ ದಾವಣಗೆರೆ ವಿಶ್ವ ವಿದ್ಯಾನಿಲಯದಲ್ಲಿ ವಿದ್ಯಾವಿಷಯಕ ಪರಿಷತ್ತಿನ ಸದಸ್ಯರಾಗಿ ರಾಜ್ಯ ಸರ್ಕಾರ ನಾಮನಿರ್ದೇಶನ ಮಾಡಲಾಗಿತ್ತು.

ಎಸ್.ಸಿ.ಮೋರ್ಚಾದ ರಾಜ್ಯ ಕಾರ್ಯ ಕಾರಿಣಿ ಸದಸ್ಯರಾಗಿ ಪ್ರವಾಸ ಕೈಗೊಂಡು ಕೆಲಸ ಮಾಡಿದ್ದರು. ಎ.ಬಿ.ವಿ.ಪಿ ಸಂಘಟನೆಯಲ್ಲಿಯೂಸಹ ಸಾಕಷ್ಟು ರಾಜ್ಯ ಮಟ್ಟದ ಜವಾಬ್ದಾರಿ ಗಳನ್ನು ನಿಭಾಯಿಸಿದ್ದರು.ಬರುವ 2024 ರ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಕೂಡ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending