Connect with us

ದಿನದ ಸುದ್ದಿ

ದಾವಣಗೆರೆ | ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

Published

on

ಸುದ್ದಿದಿನ,ದಾವಣಗೆರೆ : ಚಿಗಟೇರಿ ಆಸ್ಪತ್ರೆಯನ್ನು ಪಿಪಿಇ ಮಾದರಿಯಲ್ಲಿ ಖಾಸಗೀಕರಣಗೊಳಿಸುವ ಸರ್ಕಾರದ ಹುನ್ನಾರದ ವಿರುದ್ಧ ಚಿಗಟೇರಿ ಆಸ್ಪತ್ರೆ ಖಾಸಗೀಕರಣ ವಿರೋಧಿ ಹೋರಾಟ ಸಮಿತಿಯು ಇಂದು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿ, ಡಿಸ್ಟಿಕ್ ಸರ್ಜನ್, ದಾವಣಗೆರೆ ಜಿಲ್ಲಾ ಆಸ್ಪತ್ರೆ, ದಾವಣಗೆರೆ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ನಾಗರೀಕ ಸಮಾಜದಲ್ಲಿ ಬದುಕಲು ಬೇಕಾದ ಕನಿಷ್ಠ ಆರೋಗ್ಯ ವ್ಯವಸ್ಥೆ ದಿನೇ ದಿನೇ ಜನಸಾಮಾನ್ಯನ ಕೈಗೆಟುಕದಂತೆ ದೂರ ಸಾಗುತ್ತಿದೆ. ಖಾಸಗೀಕರಣದ ಪಂಡಂಭೂತ ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೂ ದ ಮಾಡುತ್ತಿದೆ. ಅದೇ ನಿಟ್ಟಿನಲ್ಲಿ ನಮ್ಮ ದಾವಣಗೆರೆ ಚಿಗಟೇರಿ ಆಸ್ಪತ್ರೆಯು ಸುತ್ತ-ಮುತ್ತಲನ ಜಿಲ್ಲೆಯ ಎಲ್ಲಾ ವರ್ಗದ ಬಡಜನರಿಗೆ ಉಪಯೋಗಿಯಾಗಿದೆ ಎಂದು ಸಮಿತಿಯು ತಿಳಿಸಿತು.

ಜನಪರವಾಗಿ ಕೆಲಸ ಮಾಡಬೇಕಾದ ಸರ್ಕಾರಗಳು ಬದಲಿಗೆ ಹಣವಂತರ ಸೇವೆಗೆಯುತ್ತಿರುವುದು ಖಂಡನೀಯ ಪ್ರಸ್ತುತ ದಿನಗಳಲ್ಲಿ ಆರೋಗ್ಯ ಸೇವೆ ಹಾಗೂ ”ಕಿತ್ಸಾ ವೆಚ್ಚಗಳು ದಿನೇ ದಿನೇ ದುಬಾರಿಯಾಗುತ್ತಿದ್ದು ಖರ್ಚು ಭರಿಸಲಾಗದೆ ಎಷ್ಟೋ ಜನರು ಸಾವನ್ನಪ್ಪುತ್ತಿದ್ದಾರೆ. ಶ್ರೀ ಸಾಮಾನ್ಯರಿಗೆ ಉಚಿತವಾಗಿ ಸಿಗಬೇಕಿದ್ದ ಆರೋಗ್ಯ ಸೇವೆ ಇಂದು ಹೇಗವಿದ್ದವರಿಗೆ ಮಾತ್ರ ದೊರಕುವಂತಾಗಿದೆ. ನಮ್ಮ ಜಿಲ್ಲಾ ಆಸ್ಪತ್ರೆಯಲ್ಲಿ ದೊರಕುತ್ತಿದ್ದ ಕನಿಷ್ಠ ಆರೋಗ್ಯ ಸೇವೆಯನ್ನು ನಾಶಪಡಿಸಿ ಪಿಪಿಪಿ ಮಾದರಿಯಲ್ಲ ಅಭಿವೃದ್ಧಿ ಉತ್ತಮ ಗುಣಮಟ್ಟದ ಸೇವೆಯೆಂಬ ನೆಲವೊಡ್ಡಿ ಇಡೀ ಆಸ್ಪತ್ರೆಯ ವ್ಯವಸ್ಥೆಯನ್ನೇ ಖಾಸಗಿಯವರ ಕೈಗೊಪ್ಪಿಸುವ ರಾಜಕೀಯ ಕುತಂತ್ರ ಇದರಲ್ಲ ಅಡಗಿದೆ. ಇದನ್ನು ಖಂಡಿತಾ ಒಪ್ಪಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿತು.

ನುರಿತ ವೈದ್ಯರನ್ನು ನೇಮಿಸಿಕೊಳ್ಳದೆ ಖಾಯಂ ಪರೂಪದ ಹುದ್ದೆಗಳಿಗೆ ಖಾಯಂ ಕೆಲಸಗಾರರನ್ನು ನೇಮಕ ಮಾಡಿಕೊಳ್ಳದೇ ಉಚಿತ ರಕ್ತ ಮತ್ತು ಇತರೆ ಪರೀಕ್ಷೆಗಳನ್ನು ಮಾಡಲಾಗದೆ ಅಗತ್ಯವಿರುವ ಎಷಧಿಗಳನ್ನು ಮರೆಸಲಾಗದೆ ಇಡೀ ಆಸ್ಪತ್ರೆಯನ್ನೆ ಒಂದು ದುರ್ನಾತದ ಆಗರವಾಗಿಸಿ ಜನರಿ ಜಿಲ್ಲಾಸ್ಪತ್ರೆಯ ಬಗ್ಗೆ ತಾತ್ಸಾರ ಬರುವಂತೆ ಮಾಡಿ ಈಗ ಅದನ್ನು ಖಾಸಗಿಯವರ ಕೈಗೊಪ್ಪಿಸುವ ದುರ್ಬುದ್ಧಿ ಸರ್ಕಾರಕ್ಕೆ ಬಂದಿದೆ. ಜನತೆ ಇದನ್ನು ತೀವ್ರವಾಗಿ ಖಂಡಿಸಬೇಕು‌ ಎಂದು ಮನವಿ ಮಾಡಿತು.

ಇವೆಲ್ಲವನ್ನು ಒಬ್ಬ ಖಾಸಗಿ ವ್ಯಕ್ತಿ ಅಥವಾ ಖಾಸಗಿ ಸಂಸ್ಥೆಯು ನಿರ್ವಹಿಸಲು ಸಾಧ್ಯ ಎಂದ ಮೇಲೆ ಸರ್ಕಾರಕ್ಕೆ ಏಕೆ ಸಾಧ್ಯವಾಗುತ್ತಿಲ್ಲ..? ಇದು ರಾಜಕೀಯ ಇಚ್ಛಾಶಕ್ತಿಯ ಕೊರತೆಯಷ್ಟೆ: ಜಿಲ್ಲೆಗೆ ವೈದ್ಯಕೀಯ ಕಾಲೇಜು ಬೇಕು ನಿಜ, ಅದು ಕೂಡ 100% ಸರ್ಕಾರಿ ಸ್ವಾಮ್ಯದ ಕಾಲೇಜು ಆಗಬೇಕೆಂದು ದಾವಣಗೆರೆ ಜನತೆ ಒತ್ತಾಯಿಸುತ್ತಿದ್ದೇವೆ. ಈಗ ಪ್ರಸ್ತಾಪದ ಬಂದಿರುವ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಆಸ್ಪತ್ರೆಯನ್ನು ಒಳಗೊಂಡು ಖಾಸಗಿಯವರ ಸಹ ಭಾಗಿತ್ವವನ್ನು ಒಪ್ಪಲಾಗುವುದಿಲ್ಲ. ಇರುವಂತಹ ವ್ಯವಸ್ಥೆಯನ್ನು ಇನ್ನೂ ಸುಸಜ್ಜಿತಗೊಳಿಸಿ ಉತ್ತಮ ಚಿಕಿತ್ಸೆ ಹಾಗೂ ಕಾಯಿಲೆ ಪರೀಕ್ಷೆಗಳನ್ನು ಖಾತ್ರಿಪಡಿಸಿ ಜನಸಾಮಾನ್ಯರಿಗೆ ಕೈಗೆಟಕುವಂತೆ ಉತ್ತಮ ಆರೋಗ್ಯ ಸೇವೆಯನ್ನು ನೀಡಬೇಕೆಂದು ಒತ್ತಾಯಿಸಲಾಯಿತು.

ಸಮಿತಿಯ ಹಕ್ಕೊತ್ತಾಯಗಳು

  1. ಸಾರ್ವಜನಿಕ ಜಿಲ್ಲಾ ಆಸ್ಪತ್ರೆಯನ್ನು ಪಿ.ಪಿ.ಪಿ. ಮಾದರಿಯಲ್ಲಿ ಖಾಸಗೀಕರಣ ಮಾಡುವುದನ್ನು ಶಿಕ್ಷಣ ನಿಲ್ಲಿಸಬೇಕು ಸಾಲ ಇರುವ ಎಲ್ಲಾ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು.
  2. ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗಾಗಿ ಹೆಚ್ಚು ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಬೇಕು. ಮೇಸರ್ಕಾರಿ ಸ್ವಾಮ್ಯದ ಮೆಡಿಕಲ್ ಕಾಲೇಜನ್ನು ದಾವಣಗೆರೆಗೆ ಕೊಡಲೇಬೇಕು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending