ದಿನದ ಸುದ್ದಿ
ದಾವಣಗೆರೆ | ಮೇ 16 ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ; ‘ಜಾಥಾ ಕಾರ್ಯಕ್ರಮ’
ಸುದ್ದಿದಿನ,ದಾವಣಗೆರೆ : ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಮೇ.16 ರ ಬೆಳಿಗ್ಗೆ 11 ಘಂಟೆಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಡೆಂಗ್ಯೂ ತಡೆಗಟ್ಟಬಹುದು, ಬನ್ನಿ ಎಲ್ಲರೂ ಕೈ ಜೋಡಿಸೋಣ ಎಂಬ ಘೋಷಣೆಯೊಂದಿಗೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಿಂದ ಡೆಂಗ್ಯೂ ನಿಯಂತ್ರಣ ಕ್ರಮಗಳ ಬಗೆಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಜಾಥಾ ಗೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ಸಿಇಒ ಡಾ.ಚೆನ್ನಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243