ದಿನದ ಸುದ್ದಿ
ದಾವಣಗೆರೆ | ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ, ಆಡಳಿತ ಮಂಡಳಿ ಶಿಷ್ಯವೇತನ ನೀಡಲಿದೆ : ಸಚಿವ ಭೈರತಿ ಬಸವರಾಜ್
ಸುದ್ದಿದಿನ,ದಾವಣಗೆರೆ: ಶಿಷ್ಯವೇತನ (ಸ್ಟೈಫಂಡ್)ಬಾರದಿದ್ದಕ್ಕಾಗಿ ಧರಣಿ ಕುಳಿತಿರುವ ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹವೈದ್ಯರನ್ನು ಭೇಟಿ ಮಾಡಿ ಧರಣಿ ನಿರತರಿಗೆ ಸಾಂತ್ವನ ಹೇಳುತ್ತೇವೆ ಎಂದು ಸಚಿವ ಭೈರತಿ ಬಸವರಾಜ್ ಹೇಳಿದರು.
ಶನಿವಾರ ನಗರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ನಿನ್ನೆ ಇವರ ಶಿಷ್ಯವೇತನ ಕುರಿತು ಮಾನ್ಯ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ಸ್ಥಳೀಯ ಶಾಸಕರಾದ ಶಾಮನೂರು ಶಿವಶಂಕರಪ್ಪ ಇವರ ಸಮ್ಮುಖದಲ್ಲಿ ನಾವು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ಇಡೀ ರಾಜ್ಯಕ್ಕೆ ಒಂದು ಸ್ಥಿತಿ ಇದೆ.
ಆದರೆ ಜೆಜೆಎಂ ಲ್ಲಿ ಒಂದು ಸ್ಥಿತಿ ಇದ್ದು, ಕಾಲೇಜಿನ ಆಡಳಿತ ಮಂಡಳಿಯೇ ಶಿಷ್ಯವೇತನ ಭರಿಸಬೇಕೆಂದು ಮುಖ್ಯಮಂತ್ರಿಗಳು ತಿಳಿಸಿರುವ ಪ್ರಕಾರ ಆಡಳಿತ ಮಂಡಳಿಯವರು ಒಪ್ಪಿಕೊಂಡಿರುತ್ತಾರೆ. ಸೋಮವಾರದ ನಂತರ ಗೃಹವೈದ್ಯರಿಗೆ ಶಿಷ್ಯವೇತನವನ್ನು ಶೀಘ್ರವಾಗಿ ಬಿಡುಗಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243