ದಿನದ ಸುದ್ದಿ
ದಾವಣಗೆರೆ | ಆಟೋರಿಕ್ಷಾಗಳಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯ : ಡಿಸಿ ಜಿ.ಎಂ. ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ನಗರದಲ್ಲಿನ ಆಟೋ ಚಾಲಕರಿಗೆ ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆಟೋ ಚಾಲಕ ಸಂಘದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ರಸ್ತೆ ಸುರಕ್ಷತಾ ಸಭೆಯಲ್ಲಿ ಅವರು ಮಾತನಾಡಿದರು.
ಇಲ್ಲಿಯವರೆಗೂ ನಗರದಲ್ಲಿ 525 ಆಟೋರಿಕ್ಷಾಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇನ್ನೂ ಮುಂದೆಯೂ ಮಾಡಲಾಗುವುದು ಆದ್ದರಿಂದ ಮೊದಲು ಮೀಟರ್ ಮತ್ತು ಡಿಸ್ಪ್ಲೇ ಬೋರ್ಡ್ ಅಳವಡಿಕೊಂಡಲ್ಲಿ ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದರು.
ಈ ವೇಳೆ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ನರೇಂದ್ರಬಾಬು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಕುಮಾರ್ ಎಂ ಸಂತೋಷ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ವಿಭಾಗೀಯ ನಿಯಂತ್ರಣಾಧಿಕಾರಿ ಫಕ್ರುದ್ದೀನ್, ಡಿಹೆಚ್‍ಓ ಡಾ.ಷಣ್ಮುಖಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243