ದಿನದ ಸುದ್ದಿ

ದಾವಣಗೆರೆ | ನಾಳೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಜಿಲ್ಲಾ ಪ್ರವಾಸ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ರವರು ಮೇ. 20 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಸಚಿವರು ಮೇ.20 ಗುರುವಾರದಂದು ಬೆಳಿಗ್ಗೆ 9.30 ಕ್ಕೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಸ್ಥಳೀಯ ಕೋವಿಡ್-19 ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.

ಇದನ್ನೂ ಓದಿ | ಕೋವಿಡ್ ಸೋಂಕು ನಿಯಂತ್ರಣಕ್ಕೆ ಕ್ರಮ ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡಿಸೆಂಟ್ರಲೈಸ್ಡ್ ಟ್ರಯೇಜ್ ಕೇಂದ್ರ

ಬಳಿಕ ಮಧ್ಯಾಹ್ನ 12.30 ಕ್ಕೆ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವರು. ಸಚಿವರು ಮಧ್ಯಾಹ್ನ 12-30 ಗಂಟೆಗೆ ಚಿತ್ರದುರ್ಗ ಜಿಲ್ಲೆಗೆ ತೆರಳುವರು ಎಂದು ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version