ದಿನದ ಸುದ್ದಿ

ದಾವಣಗೆರೆ | ಮಳೆಯಿಂದ ಸುಮಾರು 55 ಲಕ್ಷಕ್ಕಿಂತ ಹೆಚ್ಚು ಬೆಳೆ ಹಾನಿ : ಡಿಸಿ ಮಹಾಂತೇಶ ಬೀಳಗಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಹಾವೇರಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ 78 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿ ಸಂಜಯ್ ಶೆಟ್ಟೆಣ್ಣವರ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಕಟಾವಿಗೆ ಬಂದಿದ್ದ ಭತ್ತ, ಮೆಕ್ಕೆಜೋಳ, ಬಾಳೆ ನಾಶದಿಂದ ಅಂದಾಜು 55 ಲಕ್ಷ ರೂಪಾಯಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಸೇತುವೆಗೆ ಹಾನಿಯಾಗಿದ್ದು, ಸಂಪರ್ಕ ಕಡಿತವಾಗಿದೆ. ಹಲವು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಬಾಳೆಹೊನ್ನೂರು, ಭಾಗಗಳಲ್ಲಿ ಅಧಿಕವಾಗಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಸಮಸ್ಯೆಯಾಗಿದೆ. ರಾಜ್ಯದ ಇತರ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೀಡಾಗಿರುವ ಕುರಿತು ಜಿಲ್ಲಾಡಳಿತದಿಂದ ವರದಿ ಪಡೆಯಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version