ದಿನದ ಸುದ್ದಿ
ದಾವಣಗೆರೆ | ನಮ್ಮ ನಗರ-ನಮ್ಮ ಕೆರೆ ಸ್ವಚ್ಚತಾ ಆಂದೋಲನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಸುದ್ದಿದಿನ,ದಾವಣಗೆರೆ : ನಗರದ ಆಕರ್ಷಕ ಬಿಂದುವಾದ ಕುಂದುವಾಡ ಕೆರೆ ಸುತ್ತಲಿನ ವಾಕಿಂಗ್ ಪಾಥ್ನಲ್ಲಿ ಕೆಬೆಳಗಿನ ಚುಮು ಚುಮು ಚಳಿಯಲ್ಲೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು, ಸಾರ್ವಜನಿಕರು ಬಿರುಸಿನಿಂದ ಸ್ವಚ್ಚತೆ ಕೈಂಕರ್ಯದಲ್ಲಿ ತೊಡಗಿಕೊಂಡಿದ್ದು ಎಲ್ಲರಿಗೂ ಮಾದರಿಯಾಗಿ ಕಂಡು ಬಂದಿತು.
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಮಹಾನಗರಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಕುಂದುವಾಡ ಕೆರೆ ಪ್ರದೇಶದಲ್ಲಿ ನ.26 ರ ಬೆಳಿಗ್ಗೆ 6 ಗಂಟೆಯಿಂದ ‘ನಾಗರಿಕರಾಗಿ ನಮ್ಮ ಜವಾಬ್ದಾರಿಯನ್ನು ಇಲ್ಲಿ ಭಾಗವಹಿಸುವುದರೊಂದಿಗೆ ಕೈ ಜೋಡಿಸಿ’ ಎಂಬ ಧ್ಯೇಯ ವಾಕ್ಯದೊಂದಿಗೆ ನಮ್ಮ ನಗರ-ನಮ್ಮ ಕೆರೆ ಸ್ವಚ್ಚತಾ ಆಂದೋಲನಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸ್ವಚ್ಚತೆ ಕಾರ್ಯದಲ್ಲಿ ಪಾಲ್ಗೊಳ್ಳುವ ಮೂಲಕ ಚಾಲನೆ ನೀಡಿದರು.
ನಾವು ನಮ್ಮ ಸುತ್ತಮುತ್ತ ಬಯಸುವ ಬದಲಾವಣೆ ಮೊದಲು ನನ್ನಲ್ಲಿ ಆಗಬೇಕು. ಆಗ ಮಾತ್ರ ಧನಾತ್ಮಕ ಬದಲಾವಣೆ ಸಾಧ್ಯ. ನಾಗರೀಕ ಮಿತ್ರರಾದ ನಾವೆಲ್ಲ ನಮ್ಮ ಮನೆ ಸುತ್ತಮುತ್ತ ವಾತಾರವಣ ಸ್ವಚ್ಚವಾಗಿಟ್ಟುಕೊಳ್ಳುವ, ಚರಂಡಿ ಇತರೆ ಸ್ವಚ್ಚವಾಗಿಟ್ಟುಕೊಳ್ಳುವ ಸಂಕಲ್ಪ ತೊಡಬೇಕು. ಆಗ ಇಡೀ ನಗರ ಸ್ವಚ್ಚವಾಗಿ ಕಂಗೊಳಿಸುತ್ತದೆ. ನಾವು ಇಂದು ಎಷ್ಟು ಲೋಡ್ ಕಸ ಸಂಗ್ರಹಿಸಿದೆವು ಎನ್ನುವುದಕ್ಕಿಂತ ಮುಖ್ಯವಾಗಿ, ಎಷ್ಟು ಹಸುರೀಕರಣ ಮಾಡಿದೆವು ಅನ್ನುವುದು ಮುಖ್ಯವಾಗುತ್ತೆ.
ಜಿಲ್ಲಾಡಳಿತ, ಪಾಲಿಕೆ, ದೂಡದವರೇ ಸ್ವಚ್ಚತೆ ಮಾಡಬೇಕೆಂದು ವ್ಯವಸ್ಥೆಯನ್ನು ದೂರುವ ಬದಲಾಗಿ ಎಲ್ಲರೂ ಕೂಡಿ ಕೆಲಸ ಮಾಡೋಣ ಎಂಬ ಮನಸ್ಥಿತಿ ನಿರ್ಮಾಣ ಆಗಬೇಕು. ಆಗ ಬದಲಾವಣೆ ಸಾಧ್ಯ. ನಗರದ ಒಬ್ಬೊಬ್ಬರು ಒಂದು ಕಳೆಯ ಗಿಡವನ್ನು ಕಿತ್ತರೂ ಸಾಕು ನಗರ ಸ್ವಚ್ಚವಾಗುತ್ತದೆ. ಹಾಗೂ ನಾಗರೀಕರು ಮನಸ್ಸು ಮಾಡಿದರೆ ಇಂತಹ 10 ಕೆರೆಯನ್ನು ಸ್ವಚ್ಚಗೊಳಿಸಬಹುದು. ಪ್ರಜ್ಞಾವಂತ ನಾಗರೀಕರಾದ ನಾವು ಇತರರನ್ನು ದೂರುವ ಮುನ್ನ ನಮ್ಮನ್ನು ನಾವು ಬದಲಾಯಿಸಿಕೊಂಡು ನಮ್ಮ ಸುತ್ತಮುತ್ತ ಹಾಗೂ ನಮ್ಮ ನಗರ, ನೆಲೆಯನ್ನು ಸ್ವಚ್ಚವಾಗಿಟ್ಟುಕೊಳ್ಳೋಣ ಎಂದು ಕರೆ ನೀಡಿದರಲ್ಲದೇ ನಿರಂತರ ಈ ಸ್ಚಚ್ಚತೆ ಕಾರ್ಯ ಸಾಗಲಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪಾಲಿಕೆ ಸೇರಿದಂತೆ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕರು, ವಾಯು ವಿಹಾರ ಬಳಗದವರು ಸಂತೋಷದಿಂದ ಕೈಜೋಡಿಸಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದೀರಿ. ಇದು ಇಂದಿಗೆ ಮಾತ್ರ ಸೀಮಿತವಲ್ಲ. ಬದಲಾಗಿ ನಿರಂತರವಾಗಿ ನಡೆಯುವಂತಹ ಕೆಲಸ. ಆಸಕ್ತರೆಲ್ಲರೂ ದಿನವೂ ತಮ್ಮ ಶ್ರಮದಾನ ಮಾಡಬಹುದು. ಕುಂದುವಾಡ ಕೆರೆ ಸುತ್ತ ಉತ್ತಮ ಗಿಡ ಮರಗಳಿದ್ದು ಮೈಕ್ರೋ ಪರಿಸರ ಏರ್ಪಟ್ಟಿದೆ. ಇದು ಮನಸ್ಸಿಗೆ ಚೇತೋಹಾರಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಶ್ರಮದಾನದ ಮೂಲಕ ನಮ್ಮ ನಗರದ ಸ್ವಚ್ಚತೆಯನ್ನು ಕಾಪಾಡಿಕೊಳ್ಳೋಣ ಎಂದು ಹೇಳಿದರು.
ಸ್ವಚ್ಚತಾ ಆಂದೋಲನದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಪಾಲಿಕೆ, ದೂಡಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು, ವಾಯುವಿಹಾರ ಬಳಗದವರು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ4 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ18 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ2 days agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

