ದಿನದ ಸುದ್ದಿ

ದಾವಣಗೆರೆ | ಡಿ. 12 ರಂದು ಜಿಲ್ಲಾ ಮಟ್ಟದ ‘ಯುವಜನೋತ್ಸವ’ ಆಯ್ಕೆ ಸ್ಪರ್ಧೆ

Published

on

ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2019-20ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಸ್ಪರ್ಧೆಗಳನ್ನು ನಗರದ ಚಿಂದೋಡಿ ಲೀಲಾ ಕಲಾ ಕ್ಷೇತ್ರ ದಾವಣಗೆರೆ ಇಲ್ಲಿ ಡಿ.12 ರಂದು ಬೆಳಿಗ್ಗೆ 10.00 ಗಂಟೆಯಿಂದ ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಗುಂಪು ಸ್ಪರ್ಧೆಗಳ ವಿಭಾಗದಲ್ಲಿ ಜಾನಪದ ನೃತ್ಯ, ಜಾನಪದ ಗೀತೆ, ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಏಕಾಂಕ ನಾಟಕ, ವೈಯುಕ್ತಿಕ ಸ್ಪರ್ಧೆಗಳ ವಿಭಾಗದಲ್ಲಿ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ಭರತ ನಾಟ್ಯ, ಒಡಿಸ್ಸಿ, ಮಣಿಪುರಿ, ಕುಚುಪುಡಿ, ಕಥಕ್, ಸಿತಾರ, ಕೊಳಲು, ತಬಲಾ, ವೀಣಾ, ಮೃದಂಗ, ಹಾರ್ಮೋನಿಯಂ, ಗಿಟಾರ್, ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಆಶುಭಾಷಣ ಸ್ಪರ್ಧೆಗಳನ್ನು ನಡೆಸಲಾಗುವುದು. 15 ರಿಂದ 29 ವರ್ಷ ವಯೋಮಿತಿಯೊಳಗಿನ ಎಲ್ಲಾ ಯುವಜನರು ಭಾಗವಹಿಸಬಹುದು.

ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಅಥವಾ ಜನನ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ತರತಕ್ಕದ್ದು. ಇಲ್ಲದೇ ಇದ್ದ ಪಕ್ಷದಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ. ಸ್ಪರ್ಧೆಗೆ ಯಾವುದೇ ಪ್ರವೇಶ ಶುಲ್ಕವಿಲ್ಲ. ಆಯ್ಕೆಯಾದವರು ರಾಜ್ಯಮಟ್ಟದ ಯುವಜನೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಭಾಗವಹಿಸುವ ಸ್ಪರ್ಧಾಳುಗಳು ಡಿ.12 ರಂದು ಬೆಳಿಗ್ಗೆ 9:30 ಕ್ಕೆ ಚಿಂದೋಡಿ ಲೀಲಾ ಕಲಾ ಕ್ಷೇತ್ರ ಇಲ್ಲಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳತಕ್ಕದ್ದು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ

ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಿ.ಆರ್.ಎಂ. ವಿಜ್ಞಾನ ಕಾಲೇಜು ಎದುರು, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ,ದೂರವಾಣಿ ಸಂಖ್ಯೆ: 08192-237480 ಗೆ ಸಂಪರ್ಕಿಸಬಹುದಾಗಿದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version