ದಿನದ ಸುದ್ದಿ
ದಾವಣಗೆರೆ | ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿ ಪ್ರಕಟ
ಸುದ್ದಿದಿನ,ದಾವಣಗೆರೆ : ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು ಇವರು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು (ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ) ಡಿ.07 ರಂದು ಮಹಾನಗರಪಾಲಿಕೆ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ಕಚೇರಿಗಳಲ್ಲಿ ಪ್ರಚುರ ಪಡಿಸಿರುತ್ತಾರೆ.
ಈ ಕರಡು ಮತದಾರರ ಪಟ್ಟಿಯಲ್ಲಿ ಮತದಾರರು ತಮ್ಮ ಹೆಸರುಗಳನ್ನು ಪರಿಶೀಲಿಸಿ ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಡಿ.23 ರೊಳಗಾಗಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಸಂಬಂಧಪಟ್ಟಸಹಾಯಕ ಮತದಾರರ ನೊಂದಣಾಧಿಕಾರಿಗಳಾದ ಮಹಾನಗರಪಾಲಿಕೆ ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ಕಚೇರಿಗಳಲ್ಲಿ ಸ್ಥಳೀಯ ನಿವಾಸಿಯಾಗಿರುವವರು 1-11-2016 ಕ್ಕಿಂತ ಪೂರ್ವದಲ್ಲಿ ಅರ್ಹ ಪದವೀಧರರಾದವರು ನಮೂನೆ-18 ರಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243