ದಿನದ ಸುದ್ದಿ
ದಾವಣಗೆರೆ | ಮೆಕ್ಕೆಜೋಳ ಬೆಂಕಿಗಾಹುತಿ : ಜಿಲ್ಲಾ ಉಸ್ತುವಾರಿ ಸಚಿವರಿಂದ ರೂ. 50 ಸಾವಿರ ನೆರವು
ಸುದ್ದಿದಿನ,ದಾವಣಗೆರೆ : ದಾವಣಗೆರೆ ತಾಲ್ಲೂಕಿನ ಐಗೂರು ಗ್ರಾಮದ ಜಯಪ್ಪ ಎಂಬ ರೈತರಿಗೆ ಸೇರಿದ ಸುಮಾರು 50 ಕ್ವಿಂಟಾಲ್ ಮೆಕ್ಕೆಜೋಳ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿದ್ದು ಸ್ಥಳಕ್ಕೆ ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಇವರು ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿವಾಗಿ ರೂ. 50 ಸಾವಿರವನ್ನು ನೀಡಿದರು.
ಈ ವೇಳೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಾಯಕೊಂಡ ಶಾಸಕಾರದ ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243