ದಿನದ ಸುದ್ದಿ

ದಾವಣಗೆರೆ | ಕಾರಣವಿಲ್ಲದೆ ಹೊರಗೆ ಬಂದ್ರೆ ಕೇಸ್ ಕಡ್ಡಾಯ, ಒದೆ ಬೋನಸ್ : ಎಸ್ಪಿ ಹನುಮಂತರಾಯ

Published

on

ಸುದ್ದಿದಿನ, ದಾವಣಗೆರೆ : ಜಿಲ್ಲೆಯಲ್ಲಿ ಕಾರಣವಿಲ್ಲದೆ ಹೊರಗೆ ಬಂದರೆ ಕೇಸ್ ಕಡ್ಡಾಯವಾಗಿದ್ದು, ಒದೆ ಬೋನಸ್ ಆಗಿರುತ್ತದೆ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಅವರು ಒಟ್ಟು 130 ಜನರು ಹಾಗೂ 45 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹನುಮಂತರಾಯ ತಿಳಿಸಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪೋಲಿಸ್ ವತಿಯಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಎಂ.ಸಿ.ಸಿ ಬಿ ಬ್ಲಾಕ್, ಬಾಷಾ ನಗರ, ಹಳೇ ದಾವಣಗೆರೆ ಸೇರಿದಂತೆ ಹಲವೆಡೆ ಸಂಚರಿಸಿ ಪರಿಶೀಲನೆ ನಡೆಸಿದ ಅವರು, ಲಾಕ್‍ಡೌನ್ ಉಲ್ಲಂಘಿಸಿ ಅನವಶ್ಯಕವಾಗಿ ತಿರುಗಾಡುವವರಿಗೆ ಸಂಜೆಯತನಕ ಬಂಧಿಸಿ ಕೇವಲ ನೀರು ಮಾತ್ರ ನೀಡಿ ಎಂದು ಸೂಚಿಸಿದರು.

ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಕಾನೂನನ್ನು ಗೌರವಿಸುವವರನ್ನು ನಾವು ಗೌರವಿಸುತ್ತೇವೆ. ದೇಶವೆ ಲಾಕ್‍ಡೌನ್ ಆಗಿರುವ ಸಮಯದಲ್ಲಿ ಅನಾವಶ್ಯಕವಾಗಿ ತಿರುಗಾಡುವ ವಾಹನಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಗಸ್ತು ರಿಂಗ್ ರಸ್ತೆಯಲ್ಲಿರುವ ಜಿಲ್ಲಾಧಿಕಾರಿಗಳ ಗೃಹ ಕಚೇರಿಯಿಂದ ಬಕ್ಕೇಶ್ವರ ಶಾಲೆ, ವಿನೋಬನಗರ, ಪಿ.ಬಿ.ರಸ್ತೆ, ದುಗ್ಗಮ್ಮ ದೇವಸ್ಥಾನ, ಬಸವರಾಜ ಪೇಟೆ, ಟಿಪ್ಪುನಗರ, ಆಜಾದ್‍ನಗರಕ್ಕೆ ತೆರಳಿ ಸಾರ್ವಜನಿಕರು ಮನೆಯಲ್ಲೇ ಇರುವಂತೆ ಎಚ್ಚರಿಕೆ ನೀಡುವುದರ ಮೂಲಕ ಜಾಗೃತಿ ಮೂಡಿಸಲಾಯಿತು.

ಈ ವೇಳೆಯಲ್ಲಿ ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಗ್ರಾಮಾಂತರ ಡಿವೈಎಸ್‍ಪಿ ಮಂಜುನಾಥ್ ಗಂಗಲ್, ತಹಶೀಲ್ದಾರ್ ಗಿರೀಶ್, ದುರ್ಗಾ ಪಡೆ, ಕೆಎಸ್‍ಆರ್‍ಪಿ ತುಕಡಿ ಸಿಬ್ಬಂದಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version