ದಿನದ ಸುದ್ದಿ
ನಿಸ್ವಾರ್ಥವೇ ದೊಡ್ಡತನದ ಸಂಕೇತ : ಪ್ರತಿಭಾ ದೊಗ್ಗಳ್ಳಿ
ಸುದ್ದಿದಿನ,ದಾವಣಗೆರೆ : ಸಾಮಾನ್ಯ ಜ್ಞಾನ, ಚಿಕ್ಕ – ಚಿಕ್ಕ ವಿಷಯಗಳ ಬಗ್ಗೆ ಕೇಂದ್ರಿಕರಿಸುವ ಗಮನ, ನಿಸ್ವಾರ್ಥವಾಗಿ ಮಾಡುವ ಒಂದು ಸಣ್ಣ ಸೇವೆಯೂ ಸಹ ದೊಡ್ಡತನದ ಸಂಕೇತವಾಗಿದೆ. ಇಂತಹ ಗುಣಗಳನ್ನು ಮಕ್ಕಳು ಬಾಲ್ಯದಲ್ಲೇ ರೂಢಿಸಿಕೊಳ್ಳಬೇಕು ಎಂದು ದಾವಣಗೆರೆ ಜೆ.ಹೆಚ್.ಪಟೇಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರತಿಭಾ ಪಿ ದೊಗ್ಗಳ್ಳಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ತಾಲ್ಲೂಕಿನ ಗೋಪನಾಳು ಗ್ರಾಮದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ವಸತಿ ಶಾಲೆಯಲ್ಲಿ 2018 – 19ನೇ ಸಾಲಿನ ವಿಶೇಷ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಓದು – ಬರೆಹದ ಜೊತೆ ಸಾಮಾನ್ಯ ತಿಳಿವಳಿಕೆ ಹಾಗೂ ಇತರರಿಗೆ ನಿಸ್ವಾರ್ಥವಾಗಿ ಸಹಾಯ ಮಾಡುವ ಸ್ವಭಾವ ಉಳ್ಳವರನ್ನು ಸಮಾಜ ದೊಡ್ಡ ವ್ಯಕ್ತಿಗಳನ್ನಾಗಿ ಗುರುತಿಸುತ್ತದೆ ಎಂದರು.
ಮಹಾತ್ಮ ಗಾಂಧೀಜಿ, ಸ್ವಾಮೀ ವಿವೇಕಾನಂದ, ನೇತಾಜಿ ಸುಭಾಷ್ ಚಂದ್ರ ಬೋಸ್‍ರಂತೆ ತಾವು ಕೂಡ ದೊಡ್ಡ ವ್ಯಕ್ತಿಗಳಾಗಿ ಇತಿಹಾಸ ಪುಟದಲ್ಲಿ ಅಮರರಾಗಬೇಕೆಂದರೆ ವಿದ್ಯಾರ್ಥಿ ದೆಸೆಯಲ್ಲೇ ಉತ್ತಮ ಗುಣಗಳನ್ನು ಅಳವಡಿಸಿಕೊಂಡರೆ ಮಾತ್ರ ಸಾಧ್ಯ ಎಂದು ನುಡಿದರು.ನಂತರ ಪ್ರತಿಭಾ ದೊಗ್ಗಳ್ಳಿ ಅವರು, ಸದರಿ ವಸತಿ ಶಾಲೆಯ 2018-19ನೇ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ತಮ್ಮ ಕಾಲೇಜಿನ ವತಿಯಿಂದ ವಿಶೇಷ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಿ- ಪ್ರೋತ್ಸಾಹಿಸಿ ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿಕೊಂಡಿದ್ದ ವಸತಿ ಶಾಲೆಯ ಪ್ರಾಚಾರ್ಯರಾದ ವಿ.ಸಿ ಅಂಜಿನಪ್ಪ ಮಾತನಾಡಿ, ನಮ್ಮ ಶಾಲೆಯ ಆರ್ಥಿಕವಾಗಿ ಹಿಂದುಳಿದ ಬಡ ಪ್ರತಿಭಾವಂತ ಮಕ್ಕಳ ವಿಶೇಷ ಪ್ರತಿಭೆಯನ್ನು ಗುರುತಿಸಿ, ದಾವಣಗೆರೆಯಿಂದ ಆಗಮಿಸಿ ವಿಶೇಷ ಪುರಸ್ಕಾರ ನೀಡಿದ ಕಾರ್ಯ ಶ್ಲಾಘನೀಯ. ಇದು ಜೆ.ಹೆಚ್ ಪಟೇಲ್ ಕಾಲೇಜಿನ ಕಾರ್ಯದರ್ಶಿ ದೊಗ್ಗಳ್ಳಿ ಪುಟ್ಟರಾಜು ಮತ್ತು ಅವರ ಶ್ರೀಮತಿಯವರಾದ ಪ್ರತಿಭಾ ದೊಗ್ಗಳ್ಳಿಯವರ ಸಹೃದಯತೆ ಹಾಗೂ ಸಾಮಾಜಿಕ ಕಳಕಳಿಗೆ ಸಾಕ್ಷಿ ಎಂದು ಕೃತಜ್ಞತೆ ಅರ್ಪಿಸಿದರು.
ಕಾರ್ಯಕ್ರಮದಲ್ಲಿ 2018-19ನೇ ಶೈಕ್ಷಣಿಕ ಸಾಲಿನ ಆದರ್ಶ ವಿದ್ಯಾರ್ಥಿಗಳಾದ 6ನೇ ತರಗತಿಯ ಕು||ಜಯಮ್ಮ ಜಿ.ಎಂ ಮತ್ತು ಕು|| ಗಗನ, 7ನೇ ತರಗತಿಯ ಕು|| ರೇವಣಸಿದ್ದೇಶ್ ಎ.ಪಿ ಮತ್ತು ಕು|| ರಕ್ಷಿತಾ ಎಂ.ಹೆಚ್., ವರ್ಷದ ಪ್ರತಿಭಾವಂತ ವಿದ್ಯಾರ್ಥಿಗಳಾದ 7ನೇ ತರಗತಿಯ ಕು|| ರೇವತಿ.ಎಸ್.ಎನ್ ಹಾಗೂ 6ನೇ ತರಗತಿಯ ಕು|| ರಘು ಎನ್, ವರ್ಷದ ಸಾಂಸ್ಕøತಿಕ ವಿದ್ಯಾರ್ಥಿಯಾದ 7ನೇ ತರಗತಿಯ ಕು|| ಮಾರುತಿ ಹೆಚ್.ಟಿ., ವರ್ಷದ ಕ್ರೀಡಾ ವಿದ್ಯಾರ್ಥಿ 7ನೇ ತರಗತಿಯ ಆದರ್ಶ ಡಿ.ಕೆ., ವರ್ಷದ ಉತ್ತಮ ಯೋಗಪಟುವಾದ 7ನೇ ತರಗತಿ ಕು|| ಸೃಷ್ಟಿ ಕೆ.ಆರ್ ಹಾಗೂ ವರ್ಷದ ವಿಶೇಷ ವಿದ್ಯಾರ್ಥಿಯಾದ
7ನೇ ತರಗತಿ ಕು|| ಡಿ.ಮಂಜುನಾಥ್ ಅವರುಗಳಿಗೆ ಪುರಸ್ಕರಿಸಲಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ16 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ16 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

