ದಿನದ ಸುದ್ದಿ
ದಾವಣಗೆರೆ | ಜಿಲ್ಲಾಸ್ಪತ್ರೆಗೆ ಶೀಘ್ರದಲ್ಲೇ ಸುಸಜ್ಜಿತ ಲ್ಯಾಬ್ : ಸಚಿವ ಭೈರತಿ ಬಸವರಾಜ್
ಸುದ್ದಿದಿನ, ದಾವಣಗೆರೆ : ಪ್ರಸ್ತುತ ನಗರದಲ್ಲಿ 63 ಸಾವಿರ ಜನರನ್ನು ಕೋವಿಡ್ ಹಿನ್ನೆಲೆ ಸಮೀಕ್ಷೆ ನಡೆಸಲಾಗಿದೆ. ಈ ಯಾರಲ್ಲೂ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಸ್ತುತ 110 ಬೆಡ್‍ಗಳು ಕೋವಿಡ್ ಚಿಕಿತ್ಸೆ ನೀಡಲು ಸಿದ್ದವಿದ್ದು, ಹೆಚ್ಚಿನ ಪ್ರಕರಣಗಳು ಕಂಡುಬಂದಲ್ಲಿ ಬಾಪೂಜಿ ಮತ್ತು ಹೈಟೆಕ್ ಆಸ್ಪತ್ರೆಗಳಲ್ಲಿ ಸಹ ಬೆಡ್‍ಗಳನ್ನು ಕಾಯ್ದಿರಿಸಲಾಗಿದೆ ಎಂದರು. ಪ್ರಸ್ತುತ 800 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು ಶೀಘ್ರದಲ್ಲೇ ಸೋಂಕಿನ ಮೂಲ ಪತ್ತೆ ಹಚ್ಚಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 32 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದ್ದು, 2 ಪ್ರಕರಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರೆ 2 ಸಾವು ಸಂಭವಿಸಿದೆ. ಇನ್ನು 28 ಸಕ್ರಿಯ ಪ್ರಕರಣಗಳು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದರು.
ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ವೈರಸ್ ಪರೀಕ್ಷಾ ಲ್ಯಾಬ್ ಸ್ವಲ್ಪ ತಡವಾಗುತ್ತಿದೆ. ಕಾರಣ ಕೇಂದ್ರ ಸರ್ಕಾರ ಕೂಡ ದಾವಣಗೆರೆ, ಹಾವೇರಿ, ಬಳ್ಳಾರಿ ಹೀಗೆ ಎರಡು ಮೂರು ಜಿಲ್ಲೆ ಸೇರಿಸಿ ಒಂದು ಲ್ಯಾಬ್ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಎಸ್‍ಡಿಆರ್‍ಎಫ್ ಅನುದಾನದಲ್ಲೇ ಜಿಲ್ಲೆಗೆ ಪ್ರತ್ಯೇಕವಾಗಿ ಒಂದು ಲ್ಯಾಬ್‍ನ್ನು ಜಿಲ್ಲಾಸ್ಪತ್ರೆಯಲ್ಲಿ ತೆರೆಯಲಾಗುವುದು ಎಂದು ಕೇಂದ್ರಕ್ಕೆ ಮನವರಿಕೆ ಮಾಡಿ, ಲ್ಯಾಬ್‍ನ ಕೆಲಸ ಆರಂಭಿಸಲಾಗಿದೆ. ರೂ.74 ಲಕ್ಷದಲ್ಲಿ ಲ್ಯಾಬ್ ಯೋಜನೆ ತಯಾರಿಸಿದ್ದು ಅನುಮೋದನೆಗಾಗಿ ಆಯುಕ್ತರಿಗೆ ಕಡತವನ್ನು ಕಳುಹಿಸಿಕೊಡಲಾಗಿದೆ. ಶೀಘ್ರದಲ್ಲಿ ಲ್ಯಾಬ್ ಕಾರ್ಯ ಆರಂಭಿಸಿ ಜಿಲ್ಲೆಗೆ ಒಂದು ಶಾಶ್ವತ ಲ್ಯಾಬ್ ಸಿದ್ದಪಡಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಸಂಸದರಾದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ, ಪ್ರೊ.ಲಿಂಗಣ್ಣ, ಎಸ್.ವಿ.ರಾಮಚಂದ್ರ, ಜಿ.ಪಂ.ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ಪಾಲಿಕೆ ಮೇಯರ್ ಬಿ.ಜಿ.ಅಜಯಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ1 day agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

