Connect with us

ದಿನದ ಸುದ್ದಿ

ದಾವಣಗೆರೆ | ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಮುಂದುವರಿಕೆ : ಜಿಲ್ಲಾಧಿಕಾರಿಗಳಿಗೆ ಮನವಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ದಾವಣಗೆರೆ : ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಆದೇಶದ ಅಡಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಹೊಸದಾಗಿ ಅರ್ಜಿ ಕರೆದಿರುವ ನೇಮಕಾತಿ ಪ್ರಕ್ರಿಯೆ ಯಿಂದ ವಿನಾಯಿತಿ ನೀಡಿ ಈ 2019-20 ರ ಶೈಕ್ಷಣಿಕ ಸಾಲಿಗೆ ಹಾಗೂ ನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಕರ್ತವ್ಯ ದಲ್ಲಿ ಮುಂದವರಿಸಬೇಕೆಂದು ಕೋರಿ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದ ವತಿಯಿಂದ ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಶುಕ್ರವಾರ ರಂದು ಮನವಿ ಸಲ್ಲಿಸಲಾಯಿತು.

ರಾಜ್ಯ ಕ್ರೈಸ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಹೊಸದಾಗಿ ಅರ್ಜಿ ಸಲ್ಲಿಸುವವರ ಜೊತೆ ಈಗಾಗಲೇ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿರುವ ಶಿಕ್ಷಕರು ಸಹ ಸಂದರ್ಶನ ಪ್ರಕ್ರಿಯೆಗೆ ಹಾಜರಾಗುವಂತೆ ಆಯಾ ಶಾಲಾ ಕಾಲೇಜಿನ ಪ್ರಾಂಶುಪಾಲರುಗಳು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಉಪ ನಿರ್ದೇಶಕರು ಸೂಚನೆ ನೀಡಿದ್ದಾರೆ.

ಆದರೆ ಹಳಬರು ಈಗಾಗಲೇ ನೇಮಕಾತಿ ಪ್ರಕ್ರಿಯೆ ಮತ್ತು ಸಂದರ್ಶನದಲ್ಲಿ ಆಯ್ಕೆಯಾಗಿ ಬಂದೇ ಸೇವೆ ಸಲ್ಲಿಸುತ್ತಿರುವ ಕಾರಣ ಅಂತಹ ಅತಿಥಿ ಶಿಕ್ಷಕರನ್ನು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಶಿಕ್ಷಕರನ್ನು ನೇಮಕಾತಿ ಪ್ರಕ್ರಿಯೆಗೆ ಒಳಪಡಿಸಿ ಮುಂದುವರಿಸಬೇಕಾಗಿ ಕೋರುತ್ತೇವೆ. ಜೂನ್ 14 ರಿಂದ ನಡೆಯಲಿರುವ ನೇಮಕಾತಿ ಪ್ರಕ್ರಿಯೆಗೆ ಹಾಜರಾಗುವುದಿಲ್ಲ ಎಂಬ ತೀರ್ಮಾನವನ್ನು ಈ ಮೂಲಕ ಸ್ಪಷ್ಟಪಡಿಸುತ್ತಿದ್ದೇವೆ.

ಕರ್ನಾಟಕ ಸರ್ಕಾರ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಅಲ್ಪ ಸಂಖ್ಯಾತರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಾಗೂ ಸರ್ಕಾರದ ಅಂಗಸಂಸ್ಥೆಯಾದ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (ಕ್ರೈಸ್) ಅಡಿ ಬರುವ ಮೊರಾರ್ಜಿ ದೇಸಾಯಿ ಶಾಲೆ, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಏಕಲವ್ಯ ವಸತಿ ಶಾಲೆ ಹಾಗೂ ಹುತಾತ್ಮ ಶಾಲೆ ಸೇರಿದಂತೆ ಒಟ್ಟಾರೆ ರಾಜ್ಯಾದ್ಯಂತ ಕ್ರೈಸ್ ಅಡಿ ಬರುವ ಎಲ್ಲಾ ವಸತಿ ಶಾಲಾ – ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲ ಅತಿಥಿ ಶಿಕ್ಷಕರು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯವು ಪ್ರಸ್ತುತ ಮಧ್ಯಂತರ ತಡೆಯಾಜ್ಞೆ ನೀಡಿದೆ.

ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಶಿಕ್ಷಕರನ್ನು ಈ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸಬೇಕಾಗಿ ಕೋರಿ ಈಗಾಗಲೇ ಆಯಾ ಶಾಲಾ / ಕಾಲೇಜಿನ ಪ್ರಾಂಶುಪಾಲರು ಹಾಗೂ ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ನ್ಯಾಯಾಲಯದ ಆದೇಶ ಕಾಪಿಯೊಂದಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಸಹ ನೇಮಕಾತಿ ಪ್ರಕ್ರಿಯೆ ಮೂಲಕವೇ ಬರಬೇಕೆಂದು ಇಲಾಖೆ ಒತ್ತಡ ಹೇರಿದೆ. ಇದು ಶಿಕ್ಷಕರ ಮೇಲಿನ ಶೋಷಣೆ ಹಾಗೂ ನ್ಯಾಯಾಲಯ ಆದೇಶದ ಉಲ್ಲಂಘನೆಯಾಗಿದೆ.

ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಉಪನಿರ್ದೇಶಕರಾದ ಶಿವಾನಂದ ಕುಂಬಾರ ಅವರನ್ನು ಸಂಪರ್ಕಿಸಿದಾಗ ಅವರು ವ್ಯತಿರಿಕ್ತ ಹೇಳಿಕೆಗಳನ್ನು ನೀಡಿ ನೇಮಕಾತಿ ಪ್ರಕ್ರಿಯೆಗೆ ಹಾಜರಾಗಬೇಕು. ಇಲ್ಲವಾದರೆ ನಿಮ್ಮನ್ನು ಕರ್ತವ್ಯದಿಂದ ವಜಾಗೊಳಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಘನ ಉಚ್ಛ ನ್ಯಾಯಾಲಯದ ಆದೇಶವನ್ನು ಗೌರವಿಸಿಲ್ಲ ಹಾಗೂ ಯಾವುದೇ ಲಿಖಿತ ನೋಟಿಸ್ ಸಹ ನೀಡಿಲ್ಲ.

ಆದ್ದರಿಂದ ಘನ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯ ಆದೇಶ ನೀಡಿರುವ ಅತಿಥಿ ಶಿಕ್ಷಕರನ್ನು ಈ 2018 – 19 ನೇ ಶೈಕ್ಷಣಿಕ ಸಾಲಿಗೂ ಹಾಗೂ ನ್ಯಾಯಾಲಯದಲ್ಲಿ ಅಂತಿಮ ತೀರ್ಪು ಹೊರಬೀಳುವವರೆಗೂ ಮುಂದುವರಿಸಬೇಕು. ಇಲ್ಲವಾದರೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

Published

on

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.

ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ‍್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.

ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್‌ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್‌ಪಿಯನ್ನು ಕ್ವಿಂಟಲ್‌ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್‌ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.

ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

Published

on

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.

ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್‌ಆರ್‌ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್‌ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.

ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್‌ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ...

ದಿನದ ಸುದ್ದಿ2 days ago

ಕೋಲ್‌ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು

ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್‌ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ...

ದಿನದ ಸುದ್ದಿ3 days ago

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ...

ದಿನದ ಸುದ್ದಿ3 days ago

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್...

ದಿನದ ಸುದ್ದಿ5 days ago

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ...

ದಿನದ ಸುದ್ದಿ5 days ago

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು. ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ6 days ago

ಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ

~ಅನಿರೀಕ್ಷಿತ್ ನಾರಾಯಣ ಕೆಲ ಮುನ್ನೆಚ್ಚರಿಕೆಯ ಅಂಶಗಳನ್ನು ಪಾಲಿಸುವುದರಿಂದ ಗ್ಯಾಸ್ ಗೀಸರ್ ನಿಂದ ಆಗುವ ಅಪಾಯವನ್ನು ತಡೆಗಟ್ಟಬಹುದು. 1. ಮೊದಲಿಗೆ ಇದು ಎಲ್ಲರಿಗೂ ಗೊತ್ತಿರುವ ವಿಷಯ. ಗ್ಯಾಸ್ ಗೀಸರ್...

ದಿನದ ಸುದ್ದಿ1 week ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ1 week ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ2 weeks ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

Trending