ದಿನದ ಸುದ್ದಿ

ದಾವಣಗೆರೆ | ರಾಷ್ಟ್ರ ಪ್ರಶಸ್ತಿ ಗೆ ಅರ್ಜಿ ಆಹ್ವಾನ ; ವಿವರಗಳಿಗಾಗಿ ಈ ಸುದ್ದಿ ಓದಿ

Published

on

ಸುದ್ದಿದಿನ,ದಾವಣಗೆರೆ : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು 2019ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆಂಗ್ಲ ಭಾಷೆಯಲ್ಲಿ ವಿವರಗಳನ್ನು ಭರ್ತಿ ಮಾಡಿ 2 ಪಾಸ್‍ಪೋರ್ಟ್ ಅಳತೆಯ ಭಾವಚಿತ್ರಗಳು (ವೈಯಕ್ತಿಕ ವಿಭಾಗ), ಅರ್ಜಿದಾರರ ವ್ಯಕ್ತಿಗಳ / ಸಂಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ ಸಾರಾಂಶ ಪೂರಕ ದಾಖಲೆಗಳು ಹಾಗೂ ಡ್ರಾಫ್ಟ್ ಸೈಟೇಷನ್ (1 ಪುಟಕ್ಕೆ ಮೀರದಂತೆ) ಈ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಆ.07 ಕೊನೆಯ ದಿನ.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್:www.disabilityaffairs.gov.in
ಅಥವಾ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಚೇರಿ, ದಾವಣಗೆರೆ. ದೂ.ಸಂ: 08192-263939 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version