Connect with us

ದಿನದ ಸುದ್ದಿ

ದಾವಣಗೆರೆ | ಮಳೆಯಿಂದ ಬೆಳೆಹಾನಿ : ರೈತರಿಗೆ ಪರಿಹಾರ ಒದಗಿಸುವಂತೆ ಜಿ.ಪಂ ಸದಸ್ಯ ಬಸಂತಪ್ಪ ‌ಸರ್ಕಾರಕ್ಕೆ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಸೋಮವಾರ ಭಾರೀ‌ಮಳೆ‌‌ ಸುರಿದ ಹಿನ್ನೆಲೆಯಲ್ಲಿ ‌ಮಾಯಕೊಂಡ ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿದ ಜಿ.ಪಂ. ಸದಸ್ಯ ಬಸವಂತಪ್ಪ ಅವರು ರೈತರಿಗೆ ಸಾಂತ್ವನ ಹೇಳಿದರು.

ಗೋಣಿವಾಡ ಕ್ಯಾಂಪ್, ಮತ್ತಿ, ಕತ್ತಲಗೆರೆ ಕಾರಿಗನೂರು, ಹಲವು ಗ್ರಾಮಗಳಲ್ಲಿ ಸೋಮವಾರ ಸಂಜೆ ಸುರಿದ ಬಾರಿ ಬಿರುಗಾಳಿ ಮತ್ತು ಮಳೆಯಿಂದ ಬಡವರ ಮನೆಗಳು, ದೇವಸ್ಥಾನ, ಅಡಿಕೆ ತೋಟ, ತೆಂಗು, ಬಾಳೆ ಹಾಗೂ ಭತ್ತ ಬಹಳ ಹಾನಿಗೀಡಾಗಿರುವುದನ್ನು ತಿಳಿದ ರೈತರ ಸಮಸ್ಯೆಯನ್ನು ಆಲಿಸಿ‌ ಧೈರ್ಯ ತುಂಬಿದರು.

ಈಗಾಗಲೇ ಲಾಕ್‌ಡೌನ್‌ನಿಂದ ರೈತರು ತಮ್ಮ ಫಸಲುಗಳಿಗೆ ಬೆಲೆ ಸಿಗದೇ ಇರುವುದರಿಂದ ಕಷ್ಟದಲ್ಲಿ ಸಿಲುಕಿದ್ದಾರೆ ಎಂದರು. ರೈತರ ಕಷ್ಟವನ್ನು ಆಲಿಸಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ಮಾಡಿ ನೊಂದ ರೈತರಿಗೆ ಸರ್ಕಾರದಿಂದ ಪರಿಹಾರ ನೀಡುವಂತೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಸರ್ಕಾರವು ರೈತರ ಮೆಕ್ಕೆಜೋಳ, ಭತ್ತ ಇತರೆ ಫಸಲುಗಳನ್ನು ಖರೀದಿ ಮಾಡಲು ಅನೇಕ ನಿರ್ಬಂಧ ಹೇರಿರುತ್ತೀರಿ. ಆ ನಿರ್ಬಂಧಗಳನ್ನು ಸಡಿಲಗೊಳಿಸಿ ರೈತರು ಬೆಳೆದ ಮೆಕ್ಕೆಜೋಳ ಭತ್ತ, ಖರೀದಿ ಕೇಂದ್ರದ ಮುಖಾಂತರ ಖರೀದಿಸುವಂತೆ ಮತ್ತು ಖರೀದಿ ಕೇಂದ್ರದ ನೊಂದಣಿ ಅವಧಿಯನ್ನು ವಿಸ್ತರಿಸಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗೋಣಿವಾಡ ಗ್ರಾಮದ ಮುಖಂಡರಾದ ಮುರುಗೇಂದ್ರಪ್ಪ, ಅಡಿಕೆ ತೋಟ ಹಾನಿಗೀಡಾದ ಮಂಜುನಾಥ್, ಪರಶುರಾಮ್ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending