ದಿನದ ಸುದ್ದಿ

ದಾವಣಗೆರೆ | ವಲಸೆ ಕಾರ್ಮಿಕರಿಗಾಗಿ ಮಸ್ಟ್ರಿಂಗ್ ಕೇಂದ್ರ

Published

on

ಸುದ್ದಿದಿನ,ದಾವಣಗೆರೆ : ಕೋವಿಡ್-19 ರೋಗ ನಿಯಂತ್ರಣ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಮೂಲ ಸ್ಥಳಕ್ಕೆ ಕಳುಹಿಸುವ ಸಂಬಂಧ ಶಾಮನೂರು ರಸ್ತೆಯ ಬಾಪೂಜಿ ಸಮುದಾಯ ಭವನದಲ್ಲಿ ಮಸ್ಟ್ರಿಂಗ್ ಕೇಂದ್ರ ಸ್ಥಾಪಿಸಲಾಗಿದೆ.

ನೋಡಲ್ ಅಧಿಕಾರಿಯಾಗಿ ತಹಶೀಲ್ದಾರ್ ಗಿರೀಶ್ ಕಾರ್ಯ ನಿರ್ವಹಿಸಲಿದ್ದಾರೆ. ತಂಡದ ಸದಸ್ಯರಾಗಿ ತಹಶೀಲ್ದಾರ್, ತಾಲ್ಲೂಕ್ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯ ಸೇವಾ ಸಿಂಧು ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರು ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version