ದಿನದ ಸುದ್ದಿ
ದಾವಣಗೆರೆ | ಬೌದ್ದಿಕ ಅಂಗವೈಕಲ್ಯ ಮಕ್ಕಳಿಗೆ ಟಿಎಲ್‍ಎಂ ಕಿಟ್ ವಿತರಣೆ : ಎಲ್ಲ ಮಕ್ಕಳಲ್ಲೂ ವಿಶೇಷತೆ ಇರುತ್ತದೆ : ಜಿ.ಪಂ ಅಧ್ಯಕ್ಷೆ ದೀಪಾ ಜಗದೀಶ್
ಸುದ್ದಿದಿನ,ದಾವಣಗೆರೆ :ಎಲ್ಲ ಮಕ್ಕಳಲ್ಲೂ ಒಂದೊಂದು ವಿಶೇಷತೆ ಇರುತ್ತದೆ. ಪೋಷಕರು ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಹಾಗೂ ವಿಶೇಷ ಮಕ್ಕಳಿಗೆಂದೇ ಸರ್ಕಾರ ಒದಗಿಸಿರುವ ಸೌಲಭ್ಯಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಹೇಳಿದರು.
ನಗರದ ದೇವರಾಜ ಅರಸು ಬಡಾವಣೆಯಲ್ಲಿಯರುವ ಕಾಂಪೋಸಿಟ್ ರೀಜನಲ್ ಸೆಂಟರ್‍ನಲ್ಲಿ(ಸಿಆರ್‍ಸಿ) ಜು.17 ರಂದು ಶುಕ್ರವಾರ ಏರ್ಪಡಿಸಲಾಗಿದ್ದ ಅಡಿಪ್ಸ್ ಯೋಜನೆಯಡಿ ಬೌದ್ದಿಕ ಅಂಗವೈಕಲ್ಯತೆ ಹೊಂದಿರುವವರಿಗೆ ಟೀಚಿಂಗ್ ಲರ್ನಿಂಗ್ ಮಟೀರಿಯಲ್ಸ್ ಕಿಟ್ (ಟಿಎಲ್‍ಎಂ) ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅರ್ಹ ಮಕ್ಕಳಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದರು.
ಅನೇಕ ರೀತಿಯ ಬೌದ್ದಿಕ ಸಮಸ್ಯೆಗಳಿರುವ, ಅಂಗವೈಕಲ್ಯತೆ ಇರುವ ಮಕ್ಕಳಿಗೆ ತರಬೇತಿ, ಪುನರ್ವಸತಿ ಕಲ್ಪಿಸುತ್ತಿರುವ ಇಂತಹ ಒಂದು ಉತ್ತಮ ಕಾಂಪೋಸಿಟ್ ರೀಜನಲ್ ಸೆಂಟರ್(ಸಿಆರ್‍ಸಿ)ದಾವಣಗೆರೆಯಲ್ಲಿರುವುದು ಸಂತಸದ ವಿಚಾರವಾಗಿದ್ದು, ಇಂತಹ ಸಮಸ್ಯೆ ಇರುವ ಎಲ್ಲ ಮಕ್ಕಳಿಗೆ ಈ ಸೌಲಭ್ಯಗಳು ದೊರೆಯಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಹಾಕರ ಮತ್ತು ಸಹಯೋಗದಿಂದ ಕೆಲಸ ಮಾಡಿದಲ್ಲಿ ಎಲ್ಲ ಯೋಜನೆಗಳು ಪರಿಣಾಮಕಾರಿಯಾಗಿ ಅರ್ಹರಿಗೆ ತಲುಪಲಿವೆ ಎಂದರು.
ಸಿಆರ್‍ಸಿ ನಿರ್ದೇಶಕ ಡಾ.ಜ್ಞಾನವೇಲ್ ಮಾತನಾಡಿ, ಈ ಕೇಂದ್ರದಲ್ಲಿ ಬೌದ್ದಿಕ ಅಂಗವೈಕಲ್ಯ ಮತ್ತು ಇತರೆ ವಿಕಲಚೇತನ ಮಕ್ಕಳೊಂದಿಗೆ ಸಹನೆ, ಪ್ರೀತಿ ವಿಶ್ವಾಸದಿಂದ ಮನವೊಸಲಿಸಿ ತರಬೇತಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ. 1825 ಹೊಸಬರಿಗೆ ಮತ್ತು 112016 ಫಾಲೊ ಅಪ್ ಪ್ರಕರಣಗಳಲ್ಲಿ ಪುನರ್ವಸತಿ ಸೇವೆ ನೀಡಲಾಗಿದೆ.
ಅಡಿಪ್ ಯೋಜನೆಯಡಿ ಇದುವರೆಗೆ 492 ಟಿಎಲ್‍ಎಂ ಕಿಟ್ ವಿತರಣೆ ಮಾಡಲಾಗಿದೆ. 464 ಹಿಯರಿಂಗ್ ಏಡ್‍ಗಳನ್ನು ನೀಡಲಾಗಿದೆ. ಈ ಬಾರಿ ಒಟ್ಟು 87 ಬೌದ್ದಿಕ ಅಂಗವೈಕಲ್ಯತೆ ಹೊಂದಿರುವ ಮಕ್ಕಳಿಗೆ ಟೀಚಿಂಗ್ ಲರ್ನಿಂಗ್ ಮಟೀರಿಯಲ್‍ಗಳನ್ನು ನೀಡುವ ಗುರಿ ಹೊಂದಲಾಗಿದ್ದು ಕೋವಿಡ್ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಮೊದಲನೇ ಹಂತದಲ್ಲಿ 7 ಜನರಿಗೆ ಟಿಎಲ್‍ಎಂ ವಿತರಣೆ ಮಾಡುವರು. ಉಳಿದ 80 ಟಿಎಲ್‍ಎಂಗಳನ್ನು ನಂತರದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಂಡು ದಿನಕ್ಕೆ 5 ರಿಂದ 10 ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸಿಆರ್‍ಸಿ ರಿಹ್ಯಾಬಿಲಿಟೇಷನ್ ಅಧಿಕಾರಿ ಕನಗಸಭಾಪತಿ ನಿರೂಪಿಸಿದರು. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಶಿಧರ್ ಜಿ.ಎಸ್, ಕ್ಲಿನಿಕಲ್ ಸೈಕಾಲಜಿ ವಿಭಾಗದ ಸಹ ಪ್ರಾಧ್ಯಾಪಕ ಶೇಕ್ ಯಾಸಿನ್ ಶರೀಫ್, ರಾಜು ತಲಾಥೋಟಿ, ಆಡಳಿತಾಧಿಕಾರಿ ಪಂಕಜ್ ಸಿನ್ಹಾ, ಫಲಾನುಭವಿಗಳ ಪೋಷಕರು, ಇತರೆ ಸಿಬ್ಬಂದಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ4 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ6 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ4 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ22 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ21 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

